ಪಕ್ಷದ ತೀರ್ಮಾನಕ್ಕೆ ತಲೆಬಾಗಿ ಉಪಸಭಾಪತಿ ಸ್ಥಾನವನ್ನು ಒಪ್ಪಿಕೊಂಡೆ: ನೂತನ ಉಪಸಭಾಪತಿ ರುದ್ರಪ್ಪ ಲಮಾಣಿ

Date:

“ಉಪಸಭಾಪತಿ ಸ್ಥಾನ ಒಲ್ಲೆ ಸಾರ್, ನಾನು ನಿಮ್ಮ ಬಳಿ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದೆ. ಆದರೆ, ಪಕ್ಷದ ತೀರ್ಮಾನಕ್ಕೆ ತಲೆಬಾಗಿ ಉಪಸಭಾಪತಿ ಸ್ಥಾನವನ್ನು ಒಪ್ಪಿಕೊಂಡೆ” ಎಂದು ನೂತನ ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದರು.

- Advertisement -

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದ ಬಂಜಾರ ಸಮುದಾಯದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನನಗೆ ಕರೆ ಮಾಡಿ ಉಪಸಭಾಪತಿ ಸ್ಥಾನ ಕೊಡುತ್ತೇವೆ ಎಂದು ಹೇಳಿದ್ದರು. ನಾನು ಒಲ್ಲೆ ಎಂದು ಹೇಳಿದ್ದೆ. ಅಲ್ಲದೆ ಕರ್ನಾಟಕದ ಉಸ್ತುವಾರಿ ಸುರ್ಜೆವಾಲ ನಾಲ್ಕು ಬಾರಿ ದೂರವಾಣಿ ಕರೆ ಮಾಡಿ ‘ಉಪಸಭಾಪತಿ ಸ್ನಾನ ತೆಗೆದುಕೊಳ್ಳಿ, ರಾಹುಲ್ ಗಾಂಧಿ ಹಾಗೂ ಖರ್ಗೆಯವರು ಹೇಳಿದ್ದಾರೆ’ ಎಂದು ಹೇಳಿದರು. ಪಕ್ಷದ ತೀರ್ಮಾನಕ್ಕೆ ತಲೆಬಾಗಿ ಉಪಸಭಾಪತಿ ಸ್ಥಾನವನ್ನು ಒಪ್ಪಿಕೊಂಡೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಉಪಸಭಾಪತಿ ಸ್ಥಾನದ ಪ್ರಸ್ತಾಪ ಬರುವುದಕ್ಕೂ ಮುನ್ನ, ಲೋಕಸಭೆ ಚುನಾವಣೆ ನಂತರ ನಿನಗೆ ಉತ್ತಮ ಸ್ಥಾನ ನೀಡುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಆದರೆ, ದಿಢೀರನೆ ಉಪಸಭಾಪತಿ ಸ್ಥಾನ ನೀಡಿದರು” ಎಂದರು.

“ತಾಂಡ, ಹಟ್ಟಿ, ಹಾಡಿಗಳನ್ನ ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಕಾಂಗ್ರೆಸ್‌ ಸರ್ಕಾರ. ಆದರೆ, ಸರ್ಟಿಪಿಕೇಟ್ ಕೊಟ್ಟಿದ್ದು ಮೋದಿಯವರು. ನಮ್ಮ ಹೆಸರಲ್ಲಿ ಅವರು ಕೊಡುವ ಅಗತ್ಯತೆ ಇತ್ತೇ” ಎಂದು ಪ್ರಶ್ನಿಸಿದರು.

“ನನ್ನ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಅವರೇ ಬಂದು ಪ್ರಚಾರ ಮಾಡಿದ್ದರೂ ನಾನು ಗೆದ್ದು ಬಂದೆ. ಜನ ತೀರ್ಮಾನಿಸಿದರೆ ಎಂತಹ ವ್ಯಕ್ತಿ ಬಂದರೂ ನಮ್ಮನ್ನು ಉಪ್ಪರಿಗೆಯಲ್ಲಿ ಕೂರಿಸುತ್ತಾರೆ ಎನ್ನುವುದಕ್ಕೆ ಇದೇ ಉದಾಹರಣೆ. ಕಾಂಗ್ರೆಸ್‌ನಲ್ಲಿ ಮಾತ್ರ ತಳ ಸಮುದಾಯವರಿಗೂ ಉತ್ತಮ ಸ್ಥಾನಮಾನ ಸಿಗುತ್ತದೆ. ಆದರೆ ತಾಳ್ಮೆಯಿಂದ ಇರಬೇಕು” ಎಂದರು.

ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿ, “ಚುನಾವಣೆ ಸಮಯದಲ್ಲಿ ಕೆಲ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಆ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಸಮುದಾಯ ಭವನಕ್ಕೆ ಬೇಕಾದ ಸ್ಥಳದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ” ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ.ಮಂಜಪ್ಪ, ಡಾ. ಈಶ್ವರ್‌ನಾಯ್ಕ, ಬಿ.ಸಿದ್ದಪ್ಪ, ರಾಘವೇಂದ್ರನಾಯ್ಕ, ಉಮಾಪತಿ, ಎಚ್.ಬಿ.ಶಿವಯೋಗಿ, ಆರ್,ನಾಗಪ್ಪ ನುಚ್ಚಿನ, ವಾಗೀಶ್, ಕುಬೇರನಾಯ್ಕ, ಅಂಜುನಾಯ್ಕ, ಸೂರ್ಯ ನಾಯ್ಕ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...