ವಿಧಾನ ಪರಿಷತ್‌ ಉಪ ಚುನಾವಣೆ | ಶೆಟ್ಟರ್‌, ಬೋಸರಾಜು, ಕಮಕನೂರು ಕಾಂಗ್ರೆಸ್‌ನಿಂದ ಸ್ಪರ್ಧೆ

Date:

ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ತನ್ನ ಮೂವರು ಅಭ್ಯರ್ಥಿಗಳನ್ನು ಸೋಮವಾರ ಘೋಷಿಸಿದೆ.

- Advertisement -

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿ, ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ತಿಪ್ಪಣ್ಣಪ್ಪ ಕಮಕನೂರು ಹಾಗೂ ಸಚಿವ ಎನ್‌ ಎಸ್‌ ಬೋಸರಾಜು ಹೆಸರನ್ನು ಕಾಂಗ್ರೆಸ್‌ ಪ್ರಕಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ನಾಮಪತ್ರ‌ ಸಲ್ಲಿಕೆಗೆ ನಾಳೆ (ಜೂ.20) ಅಂತಿಮ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡಿದೆ. ನಾಳೆ ಈ ಮೂವರೂ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಬಾಬುರಾವ್‌ ಚಿಂಚನಸೂರ್‌ಗೆ ಟಿಕೆಟ್‌ ಇಲ್ಲ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡಿ ಸೋಲನುಭವಿಸಿದ್ದ ಬಾಬುರಾವ್‌ ಚಿಂಚನಸೂರ್‌ ಸ್ಥಾನಕ್ಕೆ ಈಗ ತಿಪ್ಪಣ್ಣ ಕಮಕನೂರ ಆಯ್ಕೆ ಮಾಡಲಾಗಿದೆ. ಪ್ರಸ್ತುತ ಬಾಬುರಾವ್ ಚಿಂಚನಸೂರ್ ಅವರಿಗೆ ಅನಾರೋಗ್ಯದ ಕಾರಣ ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿದೆ.

ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆಯಂತೆ ತಿಪ್ಪಣ್ಣ ಕಮಕನೂರಗೆ ಟಿಕೆಟ್‌ ನೀಡಲಾಗಿದೆ. ಆದರೆ, ತಮಗೇ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಬಾಬುರಾವ್ ಚಿಂಚನಸೂರಗೆ ನಿರಾಶೆಯಾಗಿದೆ. ಕೋಲಿ ಸಮಾಜದ ಮತ್ತೊಬ್ಬ ನಾಯಕ ತಿಪ್ಪಣ್ಣ ಕಮಕನೂರಗೆ ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡಲು ಅವಕಾಶ ಒದಗಿ ಬಂದಿದೆ.

ಪರಿಷತ್‌ ಚುನಾವಣೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...