ಬಜೆಟ್‌ 23-24 | ವಿದ್ಯಾಸಿರಿ, ಅರಿವು ಯೋಜನೆ ಪುನರಾರಂಭ: ಸಿಎಂ ಸಿದ್ದರಾಮಯ್ಯ ಘೋಷಣೆ

Date:

2020ರಿಂದ 2023ರ ಅವಧಿಯಲ್ಲಿ ಸಮರ್ಪಕವಾಗಿ ಹಿಂದಿನ ನಮ್ಮ ವಿದ್ಯಾಸಿರಿ ಯೋಜನೆ ಅನುಷ್ಠಾನಗೊಳಿಸಿರುವುದಿಲ್ಲ. ಈ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹೆಚ್ಚಿನ ಅನುಕೂಲವಾಗುವುದರಿಂದ ಪ್ರಸಕ್ತ ಸಾಲಿನಲ್ಲಿ ಈ ಕಾರ್ಯಕ್ರಮ ಮುಂದುವರೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

- Advertisement -

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಚಾರವಾಗಿ ತಮ್ಮ ಬಜೆಟ್ ಭಾಷಣದಲ್ಲಿ‌ ವಿಚಾರ ಪ್ರಸ್ತಾಪಿಸಿ, “ವಿದ್ಯಾಸಿರಿ ಯೋಜನೆಯಡಿ ಸರ್ಕಾರದ ವಸತಿ ನಿಲಯಗಳಲ್ಲಿ ಪ್ರವೇಶ ದೊರಕದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿಗಾಗಿ ವಾರ್ಷಿಕ 15,000 ರೂ. ನೀಡಲಾಗುತ್ತಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 3.6 ಲಕ್ಷ ವಿದ್ಯಾರ್ಥಿಗಳಿಗೆ 432 ಕೋಟಿ ರೂ.ಗಳ ನೆರವು ನೀಡಲಾಗಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಹಿಂದುಳಿದ ವರ್ಗಗಳ ಕಲ್ಯಾಣ ವಿಚಾರದಲ್ಲಿ ನಮ್ಮ ಸರ್ಕಾರಕ್ಕೆ ಇರುವ ಕಾಳಜಿ ಮತ್ತು ಬದ್ಧತೆಗೆ ನಾನು ಇಲ್ಲಿಯವರೆಗೆ ಮಂಡಿಸಿರುವ ಬಜೆಟ್‌ಗಳೇ ಸಾಕ್ಷಿ. ಸಾಮಾಜಿಕ ನ್ಯಾಯ ಎನ್ನುವುದು ರಾಜಕೀಯ ಅಸ್ತ್ರ ಅಲ್ಲ. ದಮನಿತರಿಗೆ ಅವಕಾಶ, ಪ್ರಾತಿನಿಧ್ಯಗಳನ್ನು ನೀಡುವ ಜವಾಬ್ದಾರಿ ಎಂದು ನಾನು ತಿಳಿದುಕೊಂಡಿದ್ದೇನೆ. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳಿಗೆ ಅವಶ್ಯಕ ಅನುದಾನ ನೀಡದೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸದೇ ನಿರ್ಲಕ್ಷಿಸಿರುವುದು ವಿಷಾದನೀಯ ಬೆಳವಣಿಗೆ” ಎಂದರು.

“ವೈದ್ಯಕೀಯ, ಇಂಜಿನಿಯರಿಂಗ್‌ ಮತ್ತು ಇತರೆ ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ‘ಅರಿವು’ ಎಂಬ ಯೋಜನೆಯ ಮುಖಾಂತರ ವಾರ್ಷಿಕ ಒಂದು ಲಕ್ಷ ರೂ.ಗಳ ಸಾಲವನ್ನು ಶೇ.2ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುತ್ತಿತ್ತು. ಇದರಿಂದ 11,956 ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಆದರೆ, ಈ ಕಾರ್ಯಕ್ರಮವನ್ನು ಹಿಂದಿನ ಸರ್ಕಾರವು 2020-21ನೇ ಸಾಲಿನಿಂದ ಸ್ಥಗಿತಗೊಳಿಸಿದ್ದು, ನಮ್ಮ ಸರ್ಕಾರವು ಪುನರ್‌ ಚಾಲನೆ ನೀಡಲಿದೆ” ಎಂದರು.

ಶುಚಿ ಸಂಭ್ರಮ ಕಿಟ್‌ ವಿತರಣೆ

“ಹಿಂದಿನ ಸರ್ಕಾರವು 2020-21 ಮತ್ತು 2021-22 ಈ ಎರಡು ವರ್ಷಗಳಲ್ಲಿ ವಸತಿ ನಿಲಯಗಳಲ್ಲಿದ್ದ 3,31,712 ನಿಲಯಾರ್ಥಿಗಳಿಗೆ ʻಶುಚಿ ಸಂಭ್ರಮ ಕಿಟ್‌ʼಗಳನ್ನು ನೀಡಿರುವುದಿಲ್ಲ. ನಮ್ಮ ಸರ್ಕಾರವು ಎಲ್ಲಾ ನಿಲಯಾರ್ಥಿಗಳಿಗೆ ಪ್ರತಿ ತಿಂಗಳು ನಿಯಮಿತವಾಗಿ ʻಶುಚಿ ಸಂಭ್ರಮ ಕಿಟ್‌ʼಗಳನ್ನು ವಿತರಿಸಲಿದೆ” ಎಂದು ಹೇಳಿದರು.

“ʻಸ್ವಾವಲಂಬಿ ಸಾರಥಿʼ ಯೋಜನೆಯಡಿ, ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಠ 3 ಲಕ್ಷ ರೂ. ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸಲಾಗುವುದು. ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸ್ವಯಂ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡಲು ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ಶೇ.20 ರಷ್ಟು ಅಥವಾ ಗರಿಷ್ಠ ಒಂದು ಲಕ್ಷ ರೂ. ಗಳ ಸಾಲ ಸಹಾಯಧನವನ್ನು ವಾಣಿಜ್ಯ ಬ್ಯಾಂಕುಗಳ ಮುಖಾಂತರ ನೀಡಲಾಗುವುದು ಎಂದು ವಿವರಿಸಿದರು.

“ರಾಜ್ಯದ ಸೇವಾ ವಲಯದಲ್ಲಿ ಇರುವ ವಿಫುಲ ಅವಕಾಶಗಳನ್ನು ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2(ಎ) ಜಾತಿಗಳಿಗೆ ಸೇರಿದ ಉದ್ಯಮಿಗಳು ಸದ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಪಡೆಯುವ 10 ಕೋಟಿ ರೂ.‌ ಗಳವರೆಗಿನ ಸಾಲಕ್ಕೆ ಶೇ.6 ರಷ್ಟು ಬಡ್ಡಿ ಸಹಾಯಧನವನ್ನು ನೀಡಲಾಗುವುದು” ಎಂದರು.

“ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು 2000ನೇ ವರ್ಷದಲ್ಲಿ ಹಿಂದುಳಿದ ವರ್ಗಗಳಿಗೆ ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲು ಶಿಫಾರಸ್ಸು ಮಾಡಿದೆ. ಈ ಶಿಫಾರಸ್ಸನ್ನು ಪರಿಶೀಲಿಸಿ, ಹಿಂದುಳಿದ ವರ್ಗಗಳ ಪ್ರವರ್ಗ-೧ ಮತ್ತು ಪ್ರವರ್ಗ-೨ಎ ನಲ್ಲಿ ಬರುವ ಜಾತಿಗಳಿಗೆ ಒಂದು ಕೋಟಿ ರೂ.ವರೆಗಿನ ನಿರ್ಮಾಣ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು” ಎಂದು ಭರವಸೆ ನೀಡಿದರು.

“ಹಿಂದುಳಿದ ವರ್ಗಗಳಲ್ಲೇ ಅತ್ಯಂತ ಹಿಂದುಳಿದವರಾಗಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಈ ಜಾತಿಗಳ ಕುಲಶಾಸ್ತ್ರೀಯ ಅಧ್ಯಯನವನ್ನು ಡಿ. ದೇವರಾಜ ಅರಸು ಸಂಶೋಧನಾ ಸಂಸ್ಥೆ ಮುಖಾಂತರ ಕೈಗೊಳ್ಳಲು ಎರಡು ಕೋಟಿ ರೂ.ಗಳ ಅನುದಾನವನ್ನು ನೀಡಲಾಗುವುದು” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...