ಕರ್ನಾಟಕ ಜಾನಪದ ಅಕಾಡೆಮಿಯ ಸಹ ಸದಸ್ಯರಾಗಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ್ ಸೋನಾರೆ ಅವರನ್ನು ನೇಮಕ ಮಾಡಿ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಬೀದರ್ ಜಿಲ್ಲೆಯವರಾದ ವಿಜಯಕುಮಾರ್ ಸೋನಾರೆ ಅವರು ಸಂಘಟಕರಾಗಿ ಜಾನಪದ ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾಗಿ ಜಾನಪದ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ʼಕನ್ನಡ ನಾಡು-ನುಡಿ ಹಾಗೂ ಜಾನಪದ ಕ್ಷೇತ್ರಕ್ಕೆ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿ ಜೂನ್ 24 ರಂದು ನಡೆದ ಸರ್ವ ಸದಸ್ಯರ ಸಭೆಯಲ್ಲಿ ಸೋನಾರೆ ಅವರನ್ನು ಕರ್ನಾಟಕ ಜಾನಪದ ಅಕಾಡೆಮಿ ಸಹ ಸದಸ್ಯರಾಗಿ ಆಯ್ಕೆ ಮಾಡಲಾಗಿದೆʼ ಎಂದು ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.