ವಿಜಯನಗರ | ಪಹಲ್‌ಗಾಮ್ ಭಯೋತ್ಪಾದಕರ ದಾಳಿಗೆ 28 ಜನರ ಸಾವು; ಡಿವೈಎಫ್ಐ ಖಂಡನೆ

Date:

ಕಾಶ್ಮೀರದ ಪಹಲ್‌ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿತಾಣವಾದ ಬೈಸಾರನ್ ಕಣಿವೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕರ ದಾಳಿಯಿಂದ ನಮ್ಮ ರಾಜ್ಯದ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಮಧುಸೂದನ್‌ ರಾವ್‌ ಹಾಗೂ ಹಾವೇರಿಯ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ತೀವ್ರವಾಗಿ ಖಂಡಿಸಿದೆ.

- Advertisement -

“ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿಯಾದುದು. ಅಮಾಯಕರ ಮೇಲೆ ಹೀನ ದಾಳಿಗೈದು ಅಮೂಲ್ಯ ಜೀವಗಳನ್ನು ಕೊಲೆಗೈದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಕೇಂದ್ರ ಸರ್ಕಾರ ಕ್ರಮವಹಿಸಬೇಕು. ಜಮ್ಮು ಕಾಶ್ಮೀರ ಜನರ ಸಮಸ್ಯೆಗಳಿಗೆ ರಾಜಕೀಯ ಪರಿಹಾರವನ್ನು ಕಂಡುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ಹೃದಯ ವಿದ್ರಾವಕ ಘಟನೆಯಲ್ಲಿ ಮಡಿದ ಕುಟುಂಬಗಳಿಗೆ ಡಿವೈಎಫ್ಐ ಸಂತಾಪಗಳನ್ನು ಸಲ್ಲಿಸುತ್ತದೆ. ರಾಷ್ಟ್ರದ ಭದ್ರತೆ ಅತ್ಯಂತ ಪ್ರಮುಖವಾಗಿದೆ. ಕೇಂದ್ರ ಸರ್ಕಾರ ‘ಜಮ್ಮು ಕಾಶ್ಮೀರದಲ್ಲಿ ಸಹಜ ಸ್ಥಿತಿಯಿದೆ’ ಎಂದು ಹೇಳುತ್ತಲೇ ಇದೆಯಾದರೂ ವಾಸ್ತವ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳು, ವಲಸೆ ಕಾರ್ಮಿಕರು ಹಾಗೂ ಪ್ರವಾಸಿಗರ ಮೇಲೆ ದಾಳಿಗಳು ನಡೆಯುತ್ತಿವೆ. ಆದ್ದರಿಂದ ಕೇಂದ್ರ ಸರ್ಕಾರ ಈಗಲಾದರೂ ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿ ನೆಲೆಸಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು”‌ ಎಂದಿದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಶ್ರೀನಗರ ಪ್ರವಾಸದಲ್ಲಿರುವ ಕುಟುಂಬಗಳಿಗೆ ಸತೋಷ್ ಲಾಡ್ ಭೇಟಿ

“ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದುಹಾಕಲು ಸಾಧ್ಯವಿಲ್ಲ. ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ ಪಿಡುಗಿನ ವಿರುದ್ಧ ದೇಶದ ಜನತೆ ಒಟ್ಟಾಗಿ ನಿಲ್ಲುವುದು ಅಗತ್ಯವಿದೆ. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ”‌ ಎಂಬುದು ಡಿವೈಎಫ್‌ಐ ಆಗ್ರಹ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...

ಕೋಲಾರ | ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ಕದಸಂಸ ಪ್ರತಿಭಟನೆ

ನಗರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ ಹೊಸ ಸಂಚಲನ!

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು...