ವಿಜಯನಗರ | ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ಶ್ರೇಷ್ಠ ಸಂವಿಧಾನವೇ‌ ಆಧಾರ; ಶಾಸಕಿ‌ ಎಮ್ ಪಿ ಲತಾ

Date:

Advertisements

ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ಡಾ. ಬಿ ಆರ್‌ ಅಂಬೇಡ್ಕರ್‌ ಅವರ ಶ್ರೇಷ್ಠ ಸಂವಿಧಾನವೇ ಆಧಾರ ಎಂದು ವಿಜಯನಗರದ ಹರಪನಹಳ್ಳಿ ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ಹರಪನಹಳ್ಳಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದ ಅವರು, “ವಿಭಿನ್ನ ಜನ, ಭಾಷೆ, ಧರ್ಮ, ಸಂಸ್ಕೃತಿ ಹೊಂದಿರುವ ದೇಶ ಭಾರತ. ವಿವಿಧತೆಗಳಲ್ಲಿ ಏಕತೆ ಸಾರಲು ಸರ್ದಾರ ವಲ್ಲಭಾಯಿ ಪಟೇಲ್ ಅವರ ಶ್ರಮ, ಸಂವಿಧಾನಗಳು ಇಂದು ಎಲ್ಲರೂ ಒಂದೇ ಕಾನೂನಿಡಿಯಲ್ಲಿ ಸಾಗಲು ಕಾರಣವಾಗಿವೆ. ಅಂಬೇಡ್ಕರ್ ಅಧ್ಯಕ್ಷತೆ ಯಲ್ಲಿ ಭಾರತದ ಸಂಸ್ಕೃತಿಗೆ ತಕ್ಕಂತೆ ಸಂವಿಧಾನವನ್ನು ರಚಿಸಲು ವಿಶ್ವದ ಅನೇಕ ಸಂವಿಧಾನಗಳನ್ನು ಅಭ್ಯಾಸ ಮಾಡಿ ರಚಿಸಿರುವ ಪರಿಣಾಮ ಎಲ್ಲರೂ ನೆಮ್ಮದಿಯಿಂದ ತಮ್ಮ ಹಕ್ಕು ಹಾಗೂ ಕರ್ತವ್ಯಗಳನ್ನು ನಿಭಾಯಿಸಲು ಸುಲಭವಾಗಿದೆ” ಎಂದು ಸ್ಮರಿಸಿದರು.

ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಮಾತನಾಡಿ, “ಆಂಗ್ಲರ ದಬ್ಬಾಳಿಕೆಯಿಂದ ನಲುಗಿದ್ದ ಭಾರತವನ್ನು ಸ್ವತಂತ್ರವಾಗಿಸಲು ಹಲವಾರು ಮಹಾತ್ಮರು ತ್ಯಾಗ, ಬಲಿದಾನ ಮಾಡಿದ್ದಾರೆ. ಸ್ವತಂತ್ರ ನಂತರ ಬಲಿಷ್ಠ ಭಾರತವನ್ನು ಕಟ್ಟಲು ಬಾಬಾ ಸಾಹೇಬರು ಕೊಡುಗೆಯಾಗಿ ನೀಡಿದ ಸಂವಿಧಾನ ಎಂಬ ಮಹಾಗ್ರಂಥ ಅಡಿಪಾಯವಾಗಿದೆ. ನಮ್ಮ ಅಕ್ಕ ಪಕ್ಕದ ಪ್ರಜಾಪ್ರಭುತ್ವ ದೇಶಗಳು ಅಭಿವೃದ್ಧಿಯಲ್ಲಿ ಹಿಂದುಳಿದಿರುವುದಲ್ಲದೇ ದೊಂಬಿ ಧಂಗೆಗಳಿಗೆ ಗುರಿಯಾಗಿವೆ. ಆದರೆ ಭಾರತ, ಯುವಕರಿಂದ ಸಮೃದ್ಧವಾದ ದೇಶವಾಗಿ ವಿಶ್ವದಲ್ಲೇ ಅಸಾಧಾರಣ ಸಾಧನೆಗಳನ್ನು ಮಾಡುತ್ತಿದೆ. ಎಲ್ಲಾ ರಂಗಳಲ್ಲಿ ಅಪ್ರತಿಮ ಅಭಿವೃದ್ಧಿ ಸಾಧಿಸಲು ನಮ್ಮ ಗಟ್ಟಿ ಸಂವಿಧಾನವೇ ಕಾರಣವಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ?: ವಿಜಯನಗರ | ಮಳೆಯಿಲ್ಲದ ಬೆಳೆಯಿಲ್ಲ, ಹೆಣ್ಣು ಇಲ್ಲದ ಮನೆಯಿಲ್ಲ: ಡಾ. ನಾಗರಾಜ್

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಫಾತೀಮಾಬೀ, ಉಪಾಧ್ಯಕ್ಷ ಕೊಟ್ರೇಶ್, ಪುರಸಭೆ ಸದಸ್ಯ ಡಿ ರೆಹಮಾನ್‌ಸಾಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ವಿ ಆಂಜಿನಪ್ಪ, ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ವೆಂಕಟೇಶ್ ಟಿ, ವಕೀಲ ಉದ್ದರ್ ಗಣೇಶ್, ಮಂಜುನಾಥ ಇಜಂತಕರ್, ಲಾಟಿ ದಾದಾಪೀರ, ಜಾಕೀರ್ ಸರಖಾವಸ್, ತಹಶೀಲ್ದಾರ ಬಿ ವಿ ಗಿರೀಶ್‌ ಬಾಬು, ಇಓ ಚಂದ್ರಶೇಖರ, ಬಿಇಓ ಹೆಚ್ ಲೇಪಾಕ್ಷಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗಂಗಪ್ಪ ಆರೋಗ್ಯಾಧಿಕಾರಿ ಪೃಥ್ವಿ, ಡಿವೈಎಸ್‌ಪಿ ವೆಂಕಟಪ್ಪನಾಯಕ, ಸಿಪಿಐ ನಾಗರಾಜ್ ಕಮ್ಮಾರ್ ಎಇಇ ಪ್ರಕಾಶ ಪಾಟೀಲ್ ಹಾಗೂ ಇತರರು ಭಾಗವಹಿಸಿದ್ದರು.

WhatsApp Image 2025 01 27 at 10.11.13 PM 1
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X