ವಿಜಯನಗರ | ಅರಣ್ಯದಲ್ಲಿ ಕುರಿಗೆ ಪ್ರವೇಶ ಕಲ್ಪಿಸಿ, ಉಚಿತ ಔಷಧಿ ವಿತರಿಸಿ: ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯ

Date:

Advertisements

ಅರಣ್ಯ ಪ್ರದೇಶಗಳಲ್ಲಿ ಕುರಿ, ಜಾನುವಾರುಗಳಿಗೆ ಮುಕ್ತವಾಗಿ ಮೇಯಿಸಲು ಅವಕಾಶ ಮಾಡಿಕೊಡುವಂತೆ ಹಾಗೂ ಸಮರ್ಪಕಾವಗಿ ಉಚಿತವಾಗಿ ಔಷಧಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕೊಟ್ಟೂರಿನ ಬಸವೇಶ್ವರ ತೇರು ಮುಂಭಾಗದಿಂದ ಪ್ರಾರಂಭಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಸಾವಿರಾರು ಕುರಿಗಳೊಂದಿಗೆ ರಸ್ತೆಯನ್ನು ಬಂದ್ ಮಾಡುವ ಮೂಲಕ ಪ್ರಮುಖ ರಸ್ತೆಯ ಮಾರ್ಗವಾಗಿ ತಾಲೂಕು ಕಚೇರಿ ವರೆಗೆ ಸಾಗಿ ತಹಶೀಲ್ದಾರ್ ಜಿ ಅಮರೇಶ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈರುಳ್ಳಿ ಬೆಳೆಗಾರರ ಜಿಲ್ಲಾಧ್ಯಕ್ಷರಾದ ಅಲಬೂರು ಮಂಜುನಾಥ ಮಾತನಾಡಿ, “ಕುರಿಗಾಯಿಗಳ ಸಮಸ್ಯೆ ವಿಪರೀತವಾಗಿದ್ದು, ಕುರಿಗಳನ್ನು ಅರಣ್ಯದಲ್ಲಿ ಮೇಯಿಸಲು ಬಿಟ್ಟರೆ ಅರಣ್ಯ ಅಧಿಕಾರಿಗಳು ದೌರ್ಜನ್ಯದಿಂದ ವರ್ತಿಸುತ್ತಾರೆ. ಕುರಿಗಾಯಿಗಳ ಮೇಲೆ ಕೇಸು ದಾಖಲಿಸುತ್ತಾರೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಿ ಸರ್ಕಾರವು ಅರಣ್ಯದಲ್ಲಿ ಕುರಿ ಮೇಯಿಸಲು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

vijayanagar 2

ಈಗ ಮಳೆ ಹೆಚ್ಚಾಗಿದ್ದು, ಈ ಸಂದರ್ಭದಲ್ಲಿ ರೈತರ ಜಮೀನು ಹಾಗೂ ಬದುವುಗಳಲ್ಲಿ ಜಾನುವಾರುಗಳನ್ನು ಮೇಯಲು ಬಿಟ್ಟರೆ ರೈತರು ತಕರಾರು ಅವರು ಉದ್ದೇಶಪೂರ್ವಕವಾಗಿ ತಕರಾರು ಮಾಡಲ್ಲ. ಕುರಿ, ದನಕರಗಳು ಬೆಳೆ ನಾಶ ಮಾಡಬಾರದು ಅಂತ ಉದ್ದೇಶ. ಹಾಗಾಗಿ ಸರಕಾರ ಅರಣ್ಯದಲ್ಲಿ ಜಾನುವಾರುಗಳನ್ನು ಮೇಯಿಸಲು ಅವಕಾಶ ಕಲ್ಪಿಸಬೇಕು ಹಾಗೂ ಅವರ ಪ್ರಕರಣ ದಾಖಲಿಸಬಾರದು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ತಿಮರೋಡಿ, ಮೋಹನ್ ಶೆಟ್ಟಿ ಮನೆಯಲ್ಲಿ ಶೋಧ: ಹಲವು ವಸ್ತು ವಶಕ್ಕೆ ಪಡೆದ ಎಸ್ಐಟಿ

ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಪ್ರಧಾನ ಕಾರ್ಯದರ್ಶಿ ಗುಡಿಯರ್ ಮಲ್ಲಿಕಾರ್ಜುನ್ ಮಾತನಾಡಿ, “ಈ ಸರ್ಕಾರವು ಕುರಿಗಾಯಿಗಳ ಸಮಸ್ಯೆಯನ್ನು ಆಲಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೆಲವೊಂದು ಅರಣ್ಯ ಪ್ರದೇಶಗಳಲ್ಲಿ ಕುರಿಗಳನ್ನು ಭಯ ಬಿಳಿಸುವ ಸಲುವಾಗಿ ಚಿರತೆ ಬಿಟ್ಟು ಕುರಿಗಳನ್ನು ನಾಶ ಪಡಿಸುವ ವ್ಯವಸ್ಥೆ ನಿರ್ಮಾಣ ಮಾಡುತ್ತಿದ್ದಾರೆ ಇದನ್ನು ಅರಣ್ಯ ಸಚಿವರು ಗಂಭೀರವಾಗಿ ಪರಿಶೀಲಿಸಬೇಕಿದೆ ಮತ್ತು ಜಾನುವಾರುಗಳಿಗೆ ಸಮರ್ಪಕ ಔಷಧಿ ಇಲ್ಲದೆ ಹಲವಾರು ಸಮಸ್ಯೆಗೆ ಈಡಾಗಿವೆ ಕುರಿಗಾಯಿಗಳು ಸೌಲಭ್ಯ ವಂಚಿತರಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರ ಇವರ ಸಮಸ್ಯೆಗಳನ್ನ ಆಲಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಅಧ್ಯಕ್ಷ ಪಿ.ಚಂದ್ರಶೇಖರ್, ಗಣೇಶ್, ಡಿ.ಕೊಟ್ರೇಶ್, ಪರುಸಪ್ಪ, ಬಾಲಗಂಗಾಧರ್, ರೇವಪ್ಪ, ಬಸಪ್ಪ, ಉಮೇಶ್, ಕೆಂಚಪ್ಪ ಹಾಗೂ ಇತರರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X