ವಿಜಯನಗರ | ಪ್ರಸ್ತುತದಲ್ಲಿ ಅಂಬೇಡ್ಕರ್ ತತ್ವ ಅವಶ್ಯ: ಬಸವರಾಜ ಸೂಳಿಬಾವಿ

Date:

ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ದಿಕ್ಕು ತಪ್ಪಿಸುತ್ತಿರುವ ಈ ಹೊತ್ತಿನಲ್ಲಿ ನಾವು ಗಟ್ಟಿಯಾಗಿ ಅಂಬೇಡ್ಕರ್ ತತ್ವ ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಬಸವರಾಜ ಸೂಳಿಬಾವಿ ಹೇಳಿದರು.

- Advertisement -

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇ‌ಜಿನಲ್ಲಿ ಜನದನಿ ಸಾಹಿತ್ಯ ವೇದಿಕೆ ಸಹಯೋಗದಲ್ಲಿ ಆಯೋಜಿಸಲಾದ ಡಾ.ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ಅವರ 68ನೇ ಮಹಾ ಪರಿನಿಬ್ಬಾಣ ದಿನ-ಅಂಬೇಡ್ಕರ್ ನೆನಪು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ದೇಶದಲ್ಲಿ ರಾಮನ ಹೆಸರಿನಿಂದ ಯುವಕರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ರಾಮನ ಹೆಸರು ಹೇಳಿಕೊಂಡರೆ ಗೌರವ ಸಿಗುತ್ತಿಲ್ಲ ಬಾಬಾ ಸಾಹೇಬ ಅಂಬೇಡ್ಕರ್ ಅವರು ನೀಡಿದ ಸಂವಿಧಾನದಿಂದ ಗೌರವ ಸಿಗುತ್ತಿದೆ. ದೇಶಕ್ಕೆ ಮಠ, ಮಂದಿರ, ಮಸೀದಿಗಳ ಅಗತ್ಯವಿಲ್ಲ. ಈ ದೇಶಕ್ಕೆ ಶಿಕ್ಷಣ, ಶಾಲೆಗಳು ಅಗತ್ಯವಾಗಿ ಬೇಕಾಗಿವೆ” ಎಂದರು.

“ಹೆಣ್ಣುಮಕ್ಕಳಿಗೆ ಶಿಕ್ಷಣದಲ್ಲಿ ಸಮಾನತೆ ಸಿಗದಿದ್ದಾಗ, ಶಿಕ್ಷಣದಿಂದ ದೂರವಾದಾಗ ಬದುಕು ಕಟ್ಟಿಕೊಡಲು ಹೋರಾಟ ಮಾಡಿದ ಏಕೈಕ ನಾಯಕ ಅಂಬೇಡ್ಕರ್.‌ ಅವರು ರಚಿಸಿದ ಸಂವಿಧಾನದಲ್ಲಿ ಎಲ್ಲರೂ ಸಮಾನವಾಗಿ ಬದುಕು ಕಟ್ಟಿಕೊಳ್ಳುವಂತಹ ಮಾಹಿತಿ ಕಾನೂನುಗಳು ಅಡಕವಾಗಿವೆ” ಎಂದು ಹೇಳಿದರು.

“ಪ್ರಸ್ತುತ ದಿನಗಳಲ್ಲಿ ಪ್ರಾಣಿ, ಪಕ್ಷಿಗಳು ಮನೆಯಲ್ಲಿ ಬಂದರೆ ತಕರಾರು ಇಲ್ಲ. ಆದರೆ ಒಬ್ಬ ಮನುಷ್ಯ ಮನೆಯೊಳಗೆ ಬಂದರೆ ತಕರಾರು, ಸಮಸ್ಯೆಗಳು ಉದ್ಭವಾಗುತ್ತವೆ. ಅಸಮಾನತೆ ಆಚರಿಸಲು ಬೇರೆ ಬೇರೆ ಭಾಷೆ ಕಲಿಯುತ್ತಿದ್ದಾರೆ. ಇದನ್ನು ಹೋಗಲಾಡಿಸುವುದಕ್ಕೆ ಬಾಬಾ ಸಾಹೇಬರು ಮನುಷ್ಯರನ್ನು ಮನುಷ್ಯರನ್ನಾಗಿ ಕಾಣಬೇಕು ಎಂಬ ಸಂದೇಶ ನೀಡಿದರು” ಎಂದು ಹೇಳಿದರು.

“ದೇಶದಲ್ಲಿ ಏಕಮುಖವಾಗಿ ಮಾತನಾಡುವ ಪದ್ದತಿ ಬೆಳೆದುಬಂದಿದೆ. ಹಕ್ಕು ಕಳೆದುಕೊಂಡವರು, ಧ್ವನಿ ಕಳೆದುಕೊಂಡವರು, ಸಂವಿಧಾನ ರಕ್ಷಣೆಗಾಗಿ, ಪ್ರಜಾಪ್ರಭುತ್ವ ಉಳಿವಿಗಾಗಿ ಪ್ರತಿಯೊಬ್ಬರೂ ಎದ್ದುನಿಂತು ಮಾತನಾಡುವ ಅಗತ್ಯವಿದೆ. ಅಂಬೇಡ್ಕರ್ ಅವರ ಮಾರ್ಗದಲ್ಲಿ ದೇಶ ನಡೆದದ್ದೇ ಆದರೆ ಉಜ್ವಲ ಭವಿಷ್ಯ ರೂಪಿಸಲು ಸಾಧ್ಯ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕಪ್ಪುಗುಡ್ಡೆ ಹೋರಿ ಹಬ್ಬದಲ್ಲಿ ಧೂಳೆಬ್ಬಿಸಿದ ಕರ್ನಾಟಕ ನಂದಿ!

ಸಾಮಾಜಿಕ ಹೋರಾಟಗಾರ ಎ ವಿ ಆಂಜನೆಪ್ಪ ಮಾತನಾಡಿ, “ಅಂಬೇಡ್ಕರ್ ಅವರ ಬದುಕು ನಮಗೆ ಆದರ್ಶವಾಗಿದೆ. ದೇಶಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಿರಬಹುದು. ಆದರೆ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಸಾಧ್ಯವಾಗಿರುವುದಾದರೆ ಅಂಬೇಡ್ಕರ್ ಅವರು ನೀಡಿದ ಸಂವಿಧಾನದಿಂದ ಮಾತ್ರ” ಎಂದರು.

ಹರಪನಹಳ್ಳಿ ಸಪಪೂ ಕಾಲೇಜು ಪ್ರಾಚಾರ್ಯ ವೆಂಕಟೇಶ ಸಿ ಬಿ, ಪಂಚಾಯತ್ ರಾಜ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಕ ಎಲ್ ಕುಬೇಂದ್ರನಾಯಕ್‌, ಸಾಹಿತಿಗಳಾದ ಇಸ್ಮಾಯಿಲ್ ಎಲಿಗಾರ್, ಸುಭದ್ರಮ್ಮ ಮಾಡಲಗೇರಿ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...