ಹಗರಿಬೊಮ್ಮನಹಳ್ಳಿ ತಾಲೂಕು ಬರಪೀಡಿತ ಎಂದು ಘೋಷಿಸಲು ಮನವಿ

Date:

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ರೈತ ಸಂಘ ಆಗ್ರಹಿಸಿದೆ. ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷರಾದ ಬಸನಗೌಡ ಅವರ ನೇತೃತ್ವದಲ್ಲಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸುವ ಮೂಲಕ ಸರ್ಕಾರದ ಬೆಂಬಲವನ್ನು ರೈತರು ಆಗ್ರಹಿಸಿದ್ದಾರೆ.

- Advertisement -

ಈ ವರ್ಷ ಮೇ ತಿಂಗಳ ಎರಡು ಹಾಗೂ ಮೂರನೇ ವಾರದಲ್ಲಿ ಮುಂಗಾರು ಮಳೆ ಸ್ವಲ್ಪ ಪ್ರಮಾಣದಲ್ಲಿ ಆಗಿದ್ದು, ಆ ಸಮಯದಲ್ಲಿ ರೈತರು ಬೀಜ, ಗೊಬ್ಬರಗಳನ್ನು ಸಾಲ ಮಾಡಿ ತಂದು ಬಿತ್ತನೆ ಮಾಡಿರುತ್ತಾರೆ. ಬಿತ್ತನೆ ಮಾಡಿ ಆರು ವಾರಗಳು ಕಳೆದರೂ ಮಳೆಯಾಗದಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರೈತರು ಸಂಕಷ್ಟದಲ್ಲಿರುವಾಗ ಸ್ಪಂದಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ರೈತರ ಬೇಡಿಕೆಗಳೇನು?
ಹಗರಿಬೊಮ್ಮನಹಳ್ಳಿ ತಾಲೂಕು ಮತ್ತು ಮಳೆಯಾಗದ ವಿವಿಧ ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು. ಈಗಾಗಲೇ ಬಿತ್ತನೆ ಮಾಡಿರುವ ಪ್ರದೇಶಗಳ ಸಮೀಕ್ಷೆ ಮಾಡಿ ಆಯಾ ಬೆಳೆಗಳಿಗೆ ತಕ್ಕಂತೆ ಬೆಳೆ ಪರಿಹಾರ ನೀಡಿ, ರೈತರ ಬೆಳೆಸಾಲವನ್ನು ಮನ್ನಾ ಮಾಡಬೇಕು. ಮಳೆಯಾಗದೇ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಮೇವು ಸಂಗ್ರಹಣೆಗೆ ನೆರವಾಗಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ.

ಈ ವೇಳೆ, ಕರ್ನಾಟಕ ರಾಜ್ಯ ರೈತ ಸಂಘದ ಓಪತೇಶ್ವರ, ಕಾಲಿಲಸಾಬ್ ಕಿಂಡೀ, ಲಕ್ಷ್ಮೀಪತಿ, ನಾಗೇಂದ್ರ ಸೇರಿದಂತೆ ಹಲವರಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...