ವಿಜಯನಗರ | ಬಸ್‌ನಲ್ಲಿ ಅತ್ಯಾಚಾರಕ್ಕೆ ಯತ್ನ; ಮೂವರ ಬಂಧನ

Date:

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಜಾತ್ರೆಗೆ ಬಂದಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆಗೆ ಮಂಗಳವಾರ ರಾತ್ರಿ ಖಾಸಗಿ ಬಸ್‌ನಲ್ಲಿ ಮರಳುತ್ತಿದ್ದ ವೇಳೆ ಅತ್ಯಾಚಾರದ ಯತ್ನ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಅರಸೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಕೊಟ್ಟೂರು ತಾಲೂಕು ಅಲಬೂರಿನ ಚಾಲಕ ಪ್ರಕಾಶ ಮಡಿವಾಳ, ಡಗ್ಗಿ ಬಸಾಪುರ ಗ್ರಾಮದ ರಾಜಶೇಖರ ಮತ್ತು ಅರಸೀಕೆರೆಯ ಬಾರಿಕರ ಸುರೇಶ್ ಬಂಧಿತ ಆರೋಪಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಇದನ್ನೂ ಓದಿ: ವಿಜಯನಗರ | ರಾಜ್ಯ ಬಜೆಟ್‌ನಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಶೇ.30ರಷ್ಟು ಅನುದಾನ ಮೀಸಲಿಡಲು ಎಸ್‌ಎಫ್‌ಐ ಆಗ್ರಹ

ದಾವಣಗೆರೆ ಮೂಲದ ಸಂತ್ರಸ್ತ ಮಹಿಳೆ ‘ಮಂಜುನಾಥ’ ಹೆಸರಿನ ಖಾಸಗಿ ಬಸ್‌ನಲ್ಲಿ ತೆರಳುತ್ತಿದ್ದರು. ಆರೋಪಿ ಚಾಲಕ, ಚೆನ್ನಾಪುರ ಗ್ರಾಮದ ರಸ್ತೆಯಲ್ಲಿ ಬಸ್ ನಿಲ್ಲಿಸಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ. ರಾಜಶೇಖರ ಮತ್ತು ಸುರೇಶ ಸಹಕರಿಸಿದರು. ಮಹಿಳೆ ಹಾಗೂ ಮಕ್ಕಳು ಚೀರಾಡುವುದನ್ನು ಕೇಳಿಸಿಕೊಂಡ ಬೈಕ್ ಸವಾರರು ಬಸ್ ಒಳಗೆ ಪ್ರವೇಶಿಸಿದಾಗ, ಮಹಿಳೆ ಸ್ಥಿತಿ ಕಂಡು ಮಾಹಿತಿ ನೀಡಿದರು. ಅದರಂತೆ ಬಸ್ ಜಪ್ತಿ ಮಾಡಿ, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ʼಅತ್ಯಾಚಾರʼ, ʼಲೈಂಗಿಕ ದೌರ್ಜನ್ಯʼಗಳಂತಹ ಶಬ್ಧಗಳು ಇತ್ತೀಚೆಗಂತೂ ಸರ್ವೇ ಸಾಮಾನ್ಯವಾಗಿ ಬಳಕೆಯಲ್ಲಿರುವುದು ಕರ್ಣ ಕಠೋರ. ಭೋಗಕ್ಕೆ ಇಂತಹ ಅಮಾನವೀಯ ಕೃತ್ಯವನ್ನೆಸಗಲು ಒಬ್ಬ ವ್ಯಕ್ತಿಯನ್ನು ಪ್ರಚೋದಿಸುವುದಾದರೂ ಏನು? ಎನ್ನುವುದರ ಬಗೆಗೆ ಸ್ಪಷ್ಟ ಉತ್ತರವಿಲ್ಲ. ನೈತಿಕ ಶಿಕ್ಷಣದ ಕೊರತೆ, ವ್ಯವಸ್ಥೆಯಲ್ಲಿ ತಪ್ಪಿತಸ್ಥರು ನಾಜೂಕಾಗಿ ನುಣುಚಿಕೊಳ್ಳಲು ಅವಕಾಶವಿರುವುದೂ ಇದ್ದಿರಬಹುದು. ಹಾಗಾದರೆ ಬದಲಾವಣೆ ಮೊದಲಾಗುವುದು ಯಾವಾಗ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...