ಗೃಹಸಚಿವ ಅಮಿತ್ ಶಾ ವಿರುದ್ಧ ಜ.9ರಂದು‌ ʼವಿಜಯನಗರ ಬಂದ್’ಗೆ ಕರೆ

Date:

ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ವಿರುದ್ಧ ಅಮಿತ್‌ ಶಾ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ, ಅವರ ರಾಜೀನಾಮೆಗೆ ಆಗ್ರಹಿಸಿ ಜನವರಿ 9ರಂದು ವಿಜಯನಗರ ಬಂದ್‌ಗೆ ಸಂವಿಧಾನ ಸಂರಕ್ಷಣಾ ಒಕ್ಕೂಟ ಕರೆ ನೀಡಿದೆ.

- Advertisement -

ವಿಜಯನಗರ ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪತ್ರಿಕಾಗೋಷ್ಠಿ ನಡೆಸಿದ್ದು, “ಕೇವಲ ಹೊಸಪೇಟೆ ‘ಬಂದ್’ ಅಲ್ಲ, ಸಂಪೂರ್ಣ ವಿಜಯನಗರ ಜಿಲ್ಲೆಯನ್ನೇ ಬಂದ್‌‌ ಮಾಡಲು ಕರೆ ನೀಡಲಾಗಿದ್ದು, ಜನವರಿ 9ರಂದು ಸಂಪೂರ್ಣವಾಗಿ ʼವಿಜಯನಗರ ಬಂದ್‌ʼಗೆ ನಿರ್ಧರಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಬಂದ್‌ಗೆ ಬಹುತೇಕ ಎಲ್ಲ ಸಂಘಟನೆಗಳು ಬೆಂಬಲ ಸೂಚಿಸಿವೆ. ಬಂದ್ ಶಾಂತಿಯುತವಾಗಿರುತ್ತದೆ. ಯಾರನ್ನೂ ಒತ್ತಾಯಪೂರ್ವಕ ಬಂದ್ ಮಾಡಿಸುವುದಿಲ್ಲ. ಬಸ್ ಓಡಾಟ, ಆಟೊ, ಟ್ಯಾಕ್ಸಿ ಓಡಾಟಕ್ಕೆ ಅಂದು ಅಡಚಣೆ ಉಂಟಾಗಲಿದೆ. ಕೆಲವೆಡೆ ಹೆದ್ದಾರಿ ತಡೆಯೂ ನಡೆಯುವ ಸಾಧ್ಯತೆಯಿದೆ. ಈ ಹಿಂದೆ ಅನಂತಕುಮಾರ್ ಹೆಗಡೆ ಸಂವಿಧಾನ ಬದಲಿಸುವ ಕುರಿತು ಹೇಳಿಕೆ ನೀಡಿದಾಗಲೂ ಹೊಸಪೇಟೆ ಬಂದ್‌ಗೆ ಕರೆ ಕೊಡಲಾಗಿತ್ತು” ಎಂದು ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಣ್ಣದಮನೆ ಸೋಮಶೇಖ‌ರ್ ಹೇಳಿದರು.

“ಅಂಬೇಡ್ಕ‌ರ್ ಕುರಿತ ಅವಹೇಳನ ಅಕ್ಷಮ್ಯ, ಅದನ್ನು ಖಂಡಿಸಬೇಕಾದುದು ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ನಂಬಿಕೆಯಿಟ್ಟ ಪ್ರತಿಯೊಬ್ಬರ ಅದ್ಯ ಕರ್ತವ್ಯ. ಈ ಹೋರಾಟಕ್ಕೆ ಅಂಜುಮನ್ ಕಮಿಟಿಯ ಸಂಪೂರ್ಣ ಬೆಂಬಲವಿದೆ “ಎಂದು ಅಂಜುಮನ್ ಕಮಿಟಿಯ ಅಧ್ಯಕ್ಷ ಎಚ್‌ಎನ್‌ಎಫ್ ಮೊಹಮ್ಮದ್ ಇಮಾಮ್ ನಿಯಾಜಿ ಹೇಳಿದರು.

ಈ ಸುದ್ದಿ ಓದಿದೀರಾ? ವಿಜಯನಗರ | ಅಂಬೇಡ್ಕರ್ ವಿಚಾರಗಳು ಎಲ್ಲರ ಬದುಕಿಗೆ ದಾರಿದೀಪ: ದಾವಲ್ ಸಾಬ್ ಎ ನೀಲಗುಂದ

“ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ರೈತರು, ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು, ಕೃಷಿ, ಕೂಲಿ, ಕಟ್ಟಡ ಕಾರ್ಮಿಕರ ಸಂಘಟನೆಗಳು ಕೈಜೋಡಿಸುವುದರಿಂದ ಬಂದ್‌ ಯಶಸ್ವಿಯಾಗುವ ವಿಶ್ವಾಸವಿದೆ” ಎಂದು ಸಂಘಟನೆಗಳ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ವಿವಿಧ ಸಂಘಟನೆಗಳ ಮುಖಂಡರಾದ ಡಿ ವೆಂಕಟರಮಣ, ಎನ್ ವೆಂಕಟೇಶ, ರಮೇಶ್, ದೇವರಮನೆ ಕನ್ನೇಶ್ವರ, ಜಿ ಶಿವಕುಮಾರ, ಕುಬೇರಾ ದಲ್ಲಾಳಿ, ನಿಂಬಗಲ್ ರಾಮಕೃಷ್ಣ, ಎನ್ ಯಲ್ಲಾಲಿಂಗ, ದೊಡ್ಡಬಸಪ್ಪ, ರಾಮಚಂದ್ರ ಬಾಬು, ಕೆ ರವಿಕುಮಾರ ನೂರ್ ಅಹ್ಮದ್, ಮೊಹಿಸಿನ್ ಕೊತ್ವಾಲ್, ತಾಯಪ್ಪ ನಾಯಕ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...