ವಿಜಯನಗರ | ಶಿಕ್ಷಣ ಮಾಫಿಯಾ ವಿರುದ್ಧ ʻಕೊಟ್ಟೂರು ಬಂದ್‌ʼಗೆ ಕರೆ

Date:

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕು ಬಂದ್‌ಗೆ ಕರೆ ನೀಡಲಾಗಿದ್ದು, ನಾಳೆ ಸಭೆ ಸೇರಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಕೊಟ್ಟೂರು ಸಮಿತಿಯ ಸಂಚಾಲಕರಾದ ಗುಡಿಯಾರ ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ.

- Advertisement -

“ಕೊಟ್ಟೂರು ತಾಲ್ಲೂಕಿನ ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡೊನೇಷನ್ ಕಡಿಮೆ ಮಾಡುವುದಾಗಿ ಸಾರ್ವಜನಿಕವಾಗಿ ಒಪ್ಪಿಕೊಂಡು ಇದೀಗ ಮಾತು ತಪ್ಪಿರುವುದು ಖಂಡನೀಯ ಮಾತ್ರವಲ್ಲ, ಜನರಿಗೆ ಮಾಡಿದ ದ್ರೋಹವಾಗಿದೆ” ಎಂದು ಅಭಿಪ್ರಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಬಡವರು, ರೈತರು, ಕೂಲಿ ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮಕ್ಕಳ ಶಿಕ್ಷಣವನ್ನು ಹಣದ ದಾಹಕ್ಕಾಗಿ ಬಲಿ ಕೊಡುವ ಶಿಕ್ಷಣ ಮಾಫಿಯಾದ ಧೋರಣೆ ವಿರುದ್ಧ ಪ್ರಗತಿಪರ ಸಂಘಟನೆಗಳ ಒಕ್ಕೂಟ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ. ಶಿಕ್ಷಣವನ್ನು ಸೇವೆಯ ಬದಲಾಗಿ ವ್ಯಾಪಾರವನ್ನಾಗಿ ಮಾಡಿಕೊಂಡು ಪೋಷಕರನ್ನು ಸುಲಿಗೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ನಡೆಯನ್ನು ಸಹಿಸಲು ಅಸಾಧ್ಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಉಲ್ಲಂಘಿಸಿ ಅಕ್ರಮ ಡೊನೇಷನ್ ವಸೂಲಾತಿ ಮುಂದುವರಿಸಿರುವ ಸಂಸ್ಥೆಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಿ, ಮಾನ್ಯತೆ ರದ್ದುಪಡಿಸುವ ಪ್ರಕ್ರಿಯೆ ಆರಂಭಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳದಿದ್ದಲ್ಲಿ ವಿದ್ಯಾರ್ಥಿಗಳು, ಪೋಷಕರು, ರೈತರು, ಕಾರ್ಮಿಕರು ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶಿಕ್ಷಣ ಮಾಫಿಯಾ ವಿರುದ್ಧ ಕೊಟ್ಟೂರು ಬಂದ್ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

“ಇದು ಕೇವಲ ಡೊನೇಷನ್ ವಿರುದ್ಧದ ಹೋರಾಟವಲ್ಲ; ಶಿಕ್ಷಣವನ್ನು ವ್ಯಾಪಾರೀಕರಣದಿಂದ ರಕ್ಷಿಸುವ ಜನಾಂದೋಲನ” ಎಂದು ಅಭಿಪ್ರಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

150 ಕೆರೆ ಯೋಜನೆ ಕಳಪೆ ಕಾಮಗಾರಿ ಆರೋಪ: ಕೆ.ಮಹದೇವ್ ವಿರುದ್ಧ ನಿತಿನ್ ವೆಂಕಟೇಶ್ ವಾಗ್ದಾಳಿ

ಪಿರಿಯಾಪಟ್ಟಣ ತಾಲ್ಲೂಕಿನ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿ ಪೈಪ್‌ಲೈನ್ ಕಾಮಗಾರಿ...

ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸಿ: ಕೆ.ವೆಂಕಟೇಶ್

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನೀಡಲು ಅವರ...

ಅಮೆರಿಕ ಜೊತೆ ಮಾತುಕತೆಗೆ ಇರಾನ್‌‌ನ 7 ಷರತ್ತು: ನಿರಾಕರಿಸಿದರೆ ‘ನಿರ್ಣಾಯಕ ಯುದ್ಧ’ದ ಎಚ್ಚರಿಕೆ

ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ-ಇರಾನ್ ನಡುವೆ ಸಂಧಾನ ಮಾತುಕತೆ ಆರಂಭಿಸಲು...