ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ದಿಢೀರ್ ಭೇಟಿ ನೀಡಿದ್ದಾರೆ. ಹಾಸ್ಟೆಲ್‌ನ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಬಂಡೇ ಬಸಾಪುರ ರಸ್ತೆ ತಾಂಡಾ ಬಳಿಯಿರುವ ವಸತಿ ನಿಲಯದಲ್ಲಿ ಮಕ್ಕಳಿಗೆ ಹಾಸಿಗೆ ನೀಡದೆ ಬೆಡ್ ಶೀಟ್ ಮೇಲೆ ಮಲಗಿಸಿರುವುದನ್ನು ಕಂಡು ಸಚಿವರು ಸಿಡಿಮಿಡಿಗೊಂಡರು. ಇದೇ ವೇಳೆ ಹಾಸ್ಟೆಲ್ ವಾರ್ಡನ್ ಗುರುರಾಜ್ (ಗುರಪ್ಪ) ಅವರನ್ನು ಸ್ಥಳದಲ್ಲೇ ಅಮಾನತು ಮಾಡಲು ಆದೇಶ ಮಾಡಿದರು.
ಸಚಿವರ ಭೇಟಿ ಸಂದರ್ಭದಲ್ಲಿ ತಾಲೂಕು ವಿಸ್ತರಣಾಧಿಕಾರಿ ಸುದೀಪ್ ಅವರು ಗೈರಾಗಿರುವ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿರುದ್ದವೂ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು. ಸುದೀಪ್ ಅವರಿಗೆ ನೊಟೀಸ್ ಜಾರಿ ಮಾಡುವುದಾಗಿ ಜಿಲ್ಲಾಧಿಕಾರಿ ದಿವಾಕರ್ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯನಗರ | ಮನರೇಗಾದಲ್ಲಿ ಅಕ್ರಮ ಆರೋಪ; ನಿರ್ಲಕ್ಷ್ಯ ಅಧಿಕಾರಿಗಳ ಅಮಾನತಿಗೆ ಆಗ್ರಹ
ಸಚಿವ ಜಮೀರ್ ಅಹಮದ್ ಖಾನ್ ವಸತಿ ನಿಲಯದ ಆಹಾರ ದಾಸ್ತಾನು ಕೊಠಡಿಗೆ ತೆರಳಿ ಪರಿಶೀಲನೆ ನಡೆಸಿ, ವಸತಿ ನಿಲಯದ ವಿದ್ಯಾರ್ಥಿಗಳ ಬಳಿ ಊಟ ತಿಂಡಿ ಇತರೆ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು.