ವಿಜಯನಗರ | ಚಿಕನ್‌ ಸೇವನೆ; 30ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥ

Date:

ಚಿಕನ್ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಪರಿಶಿಷ್ಟ ಪಂಗಡದ(ಎಸ್‌ಟಿ) ಮೆಟ್ರಿಕ್ ಬಾಲಕಿಯರ ಹಾಸ್ಟೆಲ್‌ನಲ್ಲಿ ನಡೆದಿದೆ.

- Advertisement -

ಹಾಸ್ಟೆಲ್‌ನಲ್ಲಿ ರಾತ್ರಿ ಊಟದಲ್ಲಿ ಚಿಕನ್ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಮಧ್ಯರಾತ್ರಿಯಲ್ಲಿ ಹೊಟ್ಟೆ ನೋವು, ವಾಂತಿ ಮತ್ತು ಅತಿಸಾರದ ಲಕ್ಷಣಗಳು ಕಾಣಿಸಿಕೊಂಡಿವೆ. ಬಳಿಕ ವಿದ್ಯಾರ್ಥಿಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

28 ವಿದ್ಯಾರ್ಥಿಗಳನ್ನು ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಬೆಳಿಗ್ಗೆ ನಾಲ್ವರು ವಿದ್ಯಾರ್ಥಿಗಳು ಇದೇ ರೀತಿ ಅಸ್ವಸ್ಥರಾಗಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಈವರೆಗೆ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಸ್‌ಟಿ ಹಾಸ್ಟೆಲ್‌ನಲ್ಲಿ 148 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಪೈಕಿ 131 ವಿದ್ಯಾರ್ಥಿಗಳು ಮಾಂಸಾಹಾರ ಸೇವಿಸಿದರೆ, 17 ವಿದ್ಯಾರ್ಥಿಗಳು ಸಸ್ಯಾಹಾರಿ ಆಹಾರವನ್ನು ಸೇವಿಸಿದ್ದಾರೆ. ಸಸ್ಯಾಹಾರ ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆ ಉಂಟಾಗಿಲ್ಲ. ಈ ಸಂಬಂಧ ತನಿಖೆ ಕೈಗೆತ್ತಿಕೊಳ್ಳಲಾಗಿದೆ. 

ಈ ಸುದ್ದಿ ಓದಿದ್ದೀರಾ? ರಾಯಚೂರು | ತಜ್ಞ ವೈದ್ಯರ ನೇಮಿಸುವಂತೆ ಡಿವೈಎಫ್‌ಐ ಒತ್ತಾಯ

ವಿದ್ಯಾರ್ಥಿಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಲು ಅಧಿಕಾರಿಗಳು ನಿರ್ದೇಶಿಸಿದ್ದಾರೆ. ವಿಜಯನಗರ ಜಿಲ್ಲಾಧಿಕಾರಿ ದಿವಾಕರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಆಸ್ಪತ್ರೆಗೆ ಭೇಟಿ ನೀಡಿ, ವಿದ್ಯಾರ್ಥಿನಿಯರ ಯೋಗಕ್ಷೇಮ ವಿಚಾರಿಸಿದರು. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಿವಾಕರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...