ವಾಹನದಲ್ಲಿ ಇಟ್ಟಿದ್ದ ಸಿಲಿಂಡರ್ ಸ್ಫೊಟಗೊಂಡು, ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ.
ನಗರದ ಕಡ್ಡಿ ರಾಂಪುರ ರಸ್ತೆಯಲ್ಲಿ ನಿಂತಿದ್ದ ಪೇಂಟ್ ಬಳಿಯುವ ವಾಹನದಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ವಾಹನ ಸುಟ್ಟು ಹೋಗಿದೆ. ಯಾರಿಗೂ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದುಬಂದಿದೆ.
ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಜುಲೈ 9ರಿಂದ 16ರವರೆಗೆ ಜಿ20 ಶೃಂಗಸಭೆ ನಡೆಯಲಿದೆ. ಅದಕ್ಕಾಗಿ ಹಲವಾರು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಹಂಪಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಡಾಂಬರು ಹಾಕಿ, ರಸ್ತೆ ಬದಿಗೆ ಬಿಳಿ ಪೇಂಟ್ ಬಳಿಯುವ ಕೆಲಸ ನಡೆಯುತ್ತಿದೆ. ಪೇಂಟ್‌ಅನ್ನು ಸಾಗಿಸುತ್ತಿದ್ದ ವಾಹನ ಬೆಂಕಿಗೆ ಆಹುತಿಯಾಗಿದೆ.