ವಿಜಯನಗರ | ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ 8 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Date:

Advertisements

ವಿಜಯನಗರದ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಮನೆಯಲ್ಲಿ ಮಲಗಿರುವಾಗ ಬೆಳಗಿನ ಜಾವ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆಯ 8 ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಕುಸಿದಿದೆ.

ವಕೀಲ ಹಾಲಪ್ಪ, ಸಹೋದರ ಮೈಲಾರಪ್ಪ ಸೇರಿದಂತೆ ಒಂದೇ ಕುಟುಂಬದ 8 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

WhatsApp Image 2025 09 27 at 1.25.21 PM

ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ, ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿಲಿಂಡ‌ರ್ ಸ್ಫೋಟದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಶಾಸಕ ಎನ್‌.ಟಿ.ಶ್ರೀನಿವಾಸ್‌, ಜಿಲ್ಲಾಧಿಕಾರಿ ಕವಿತಾ ಮಣ್ಣಿಕೇರಿ, ಎಸ್.ಪಿ ಜಾನ್ಹವಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X