ಪುರಾತತ್ವ ವಸ್ತು ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆ, ಮೈಸೂರು ವತಿಯಿಂದ 2025 ಮಾರ್ಚ್ 1 ಮತ್ತು 2ರಂದು ಹಂಪಿಯಲ್ಲಿ ಜರುಗುವ ವಿಜಯನಗರ ಅಧ್ಯಯನದ ಕುರಿತ 27ನೇ ವಾರ್ಷಿಕ ವಿಚಾರ ಸಂಕಿರಣದ ಸರ್ವಾಧ್ಯಕ್ಷರಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಶಾಸನ ತಜ್ಞ ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ ಆಯ್ಕೆಯಾಗಿದ್ದಾರೆ.
ವಿಜಯನಗರ ಜಿಲ್ಲಾ ಆಡಳಿತದ ವತಿಯಿಂದ ನಡೆಯುವ ಪ್ರತಿಷ್ಠಿತ ಹಂಪಿ ಉತ್ಸವದಲ್ಲಿ ಈ ವಿಚಾರ ಸಂಕಿರಣ ನಡೆಯಲಿದ್ದು, ಇದರಲ್ಲಿ ನಾಡಿನ ಸುಮಾರು 70 ವಿದ್ವಾಂಸರುಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಿದ್ದಾರೆ.
ಈ ಸುದ್ದಿ ಓದಿದ್ದೀರಾ?: ವಿಜಯನಗರ | ರಾಜ್ಯ ಬಜೆಟ್‌ನಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಶೇ.30ರಷ್ಟು ಅನುದಾನ ಮೀಸಲಿಡಲು ಎಸ್‌ಎಫ್‌ಐ ಆಗ್ರಹ
