ವಿಜಯನಗರ | ಮೆಗಾ ಡೇರಿ ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಆಗ್ರಹ

Date:

ವಿಜಯನಗರ ಜಿಲ್ಲೆಗೆ ಪ್ರತ್ಯೇಕ ಮೆಗಾ ಡೇರಿ ಹಾಗೂ ಆಡಳಿತ ಕಚೇರಿ ಸ್ಥಾಪನೆಯಾಗಬೇಕೆಂದು ಆಗ್ರಹಿಸಿ ಹಾಲು ಉತ್ಪಾದಕರು, ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳಿಂದ ಹೊಸಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಬಸವೇಶ್ವರ ಸರ್ಕಲ್‌ನಿಂದ ಸಾಗಿ ಅಂಬೇಡ್ಕರ್ ಸರ್ಕಲ್‌ನಲ್ಲಿ ಅಂಬೇಡ್ಕರ್ ಸರ್ಕಲ್ ಮೂಲಕ ಹಾದು ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಕಾಲ್ನಡಿಗೆಯಲ್ಲಿ ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಹಿತರಕ್ಷಣಾ ಸಮಿತಿಯ ಜಿಲ್ಲಾಧ್ಯಕ್ಷ ಎಂ ಬಸವರಾಜ್ ಕಕ್ಕುಪ್ಪಿ ಮಾತನಾಡಿ, “ಯಾವುದೇ ಕಾರಣಕ್ಕೂ ಬಳ್ಳಾರಿಗೆ ನಾವು ಹಾಲನ್ನು ಕಳುಹಿಸುವುದಿಲ್ಲ. ಪ್ರತ್ಯೇಕ ಒಕ್ಕೂಟ ಆಗುವವರೆಗೂ ನಾವು ಪ್ರತಿಭಟನೆ ಕೈಬಿಡುವುದಿಲ್ಲ” ಎಂದು ಹೇಳಿದರು.

“ಜಿಲ್ಲೆಯಿಂದ 1.20 ಲಕ್ಷ ಲೀಟರ್ ಹಾಲು ಸರಬರಾಜಾಗುತ್ತದೆ. ಆದರೆ, ಬಳ್ಳಾರಿಯಲ್ಲಿ ಕೇವಲ 9 ಸಾವಿರ ಲೀಟರ್ ಹಾಲು ಶೇಖರಿಸುವವರು ಅಧಿಕಾರದ ಆಸೆಗಾಗಿ ವಿಜಯನಗರ ಜಿಲ್ಲೆಗೆ ಯಾವುದೇ ಯೋಜನೆ ಕೊಡದಂತೆ ಬಳ್ಳಾರಿಯ ಕೆಲವು ಕಿಡಿಗೇಡಿಗಳು ತಡೆಯುತ್ತಿದ್ದಾರೆ. ಹೊಸದಾಗಿ ರಚನೆಯಾಗಿರುವ ಜಿಲ್ಲೆಗೆ ಬೃಹತ್ ಇಲಾಖೆಗಳು ಇಲ್ಲ. ಎಲ್ಲವೂ ಬಳ್ಳಾರಿಯಲ್ಲಯೇ ಇವೆ. ನಮ್ಮ ಜಿಲ್ಲೆಯು ಹಿಂದುಳಿಯುವಿಕೆಗೆ ಕಾರಣವಾಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಿಸಾನ್ ಜಾಗೃತಿ ಸಂಘದ ಉಪಾಧ್ಯಕ್ಷ ಖಾದರ್ ಸಾಹೇಬ್ ಮಾತನಾಡಿ, “ಅತಿಹೆಚ್ಚು ಹಾಲು ಉತ್ಪಾದಿಸುವ ಜಿಲ್ಲೆಗೆ ಮೇಗಾ ಡೇರಿ ಸ್ಥಾಪನೆಯಾಗಬೇಕು. ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ನಾವು ಹಾಲನ್ನು ಬಳ್ಳಾರಿಗೆ ಕಳುಹಿಸುವುದಿಲ್ಲ. ವಿಜಯನಗರ ಜಿಲ್ಲೆಯಲ್ಲಿಯೂ ಆಡಳಿತ ಕಚೇರಿಯಾಗಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ : ತಾಯಿ ಮಗನ ಹತ್ಯೆ ಪ್ರಕರಣ ಓರ್ವ ಆರೋಪಿ ಆತ್ಮಹತ್ಯೆ ಇನ್ನೊಬ್ಬ ಆರೋಪಿ ಬಂಧನ

ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟ ನಿರ್ದೇಶಕ ಹೆಚ್ ಮರುಳ ಸಿದ್ದಪ್ಪ ಮಾತನಾಡಿ, “ಹಾಲನ್ನು ಕೊಡುವವರು ನಾವು, ಅಧಿಕಾರ ಅನುಭವಿಸುವವರು ಬಳ್ಳಾರಿಯವರು. ಆಡಳಿತ ಮಂಡಳಿಗೆ ಯಾವುದೇ ರೀತಿಯ ಸಹಕಾರ ನೀಡದೆ ತುಂಬಾ ಕಿರಿಕಿರಿಯನ್ನುಂಟು ಮಾಡುವುದರ ಜತೆಗೆ ದೌರ್ಜನ್ಯ ಎಸಗುತ್ತಿದ್ದಾರೆ. ಜಿಲ್ಲೆಯಲ್ಲಿ 360 ಸಂಘಗಳಿವೆ. ಅತಿ ಹೆಚ್ಚು ಹಾಲನ್ನು ಸರಬರಾಜು ಮಾಡುತ್ತೇವೆ. ಹರಪನಹಳ್ಳಿಯಿಂದ ನೂರಾರು ಕಿಮೀ ದೂರ ಹಾಲನ್ನು ಸಾಗಿಸಲು ಒಕ್ಕೂಟ ನಷ್ಟ ಅನುಭವಿಸಲು ಇದು ಒಂದು ಮುಖ್ಯ ಕಾರಣ” ಆದ್ದರಿಂದ ವಿಜಯನಗರ ಜಿಲ್ಲೆಯಲ್ಲಿ‌ ಒಕ್ಕೂಟ ಆರಂಭಿಸಬೇಕು” ಎಂದು ಹೇಳಿದರು.

ಶ್ರೀನಿವಾಸ್, ಕಾಳೇಶಪ್ಪ, ಗಂಗಾಧರ, ಲಕ್ಷ್ಮಣ, ರತ್ನಮ್ಮ, ಉಷಾ, ಕಂಪ್ಲಿ ಗಂಗಾಧರ ಹಾಗೂ ವಿಜಯನಗರ ಜಿಲ್ಲೆಯಿಂದ ಸಾವಿರಾರು ಹಾಲು ಉತ್ಪಾದಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...