ಶಾಲಾ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ವಿಜಯನಗರ ಜಿಲ್ಲೆಯ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಜಿಲ್ಲೆಯ ಹೊಸಪೇಟೆ ತಾಲೂಕಿನ ಕೆ ಅಯ್ಯನಹಳ್ಳಿ ಗ್ರಾಮದ ಬಳಿ ಖಾಸಗಿ ಶಾಲೆಗೆ ಸೇರಿದ ಬಸ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಹೊಗೆ ಕಾಣಿಸಿಕೊಂಡಿದ್ದು, ಚಾಲಕ-ಸಿಬ್ಬಂದಿ ತಕ್ಷಣ ಮಕ್ಕಳನ್ನು ಕೆಳಗಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ತುಮಕೂರು | ಕಾರು-ಲಾರಿ ಮುಖಾಮುಖಿ; ಮೂವರ ಸಾವು, ಐವರಿಗೆ ಗಾಯ
ಬೆಂಕಿ ಹೊತ್ತಿಕೊಂಡ ಬಗ್ಗೆ ವಿಷಯ ತಿಳಿದು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು. ಅಷ್ಟರಲ್ಲಿ ಬಸ್ ಸುಟ್ಟು ಕರಕಲಾಗಿದೆ. ಘಟನೆ ಸಂಬಂಧ ಕೊಟ್ಟೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.