ಹಂಪಿಗೆ ಪ್ರವಾಸಕೆಂದು ಬಂದಿದ್ದ ವಿಜಯನಗರ ಜಿಲ್ಲೆ ಕೊಟ್ಟೂರಿನ ಕುಟುಂಬವೊಂದರ ನಾಲ್ವರು ಸದಸ್ಯರು ನಿನ್ನೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಆ ಪೈಕಿ ಚಂದ್ರಯ್ಯ (43) ಎಂಬುವವರು ಮೃತಪಟ್ಟಿದ್ದಾರೆ. ಪತ್ನಿ ಸೌಮ್ಯ (38), ಪುತ್ರಿ ಭವಾನಿ (12), ಶಿವು (10) ಅಪಾಯದಿಂದ ಪಾರಾಗಿದ್ದಾರೆ.
ಚಂದ್ರಯ್ಯ ಮತ್ತು ಅವರ ಕುಟುಂಬದ ಸದಸ್ಯರು ಹಂಪಿ ಕಮಲಾಪುರ ಸಮೀಪದ ಸರಸ್ವತಿ ದೇವಸ್ಥಾನದ ಬಳಿ ವಿಷ ಸೇವಿಸಿದ್ದರು. ಇದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಚಂದ್ರಯ್ಯ ಸಾಲ ಮಾಡಿಕೊಂಡಿದ್ದರು ಎಂಬ ಶಂಕೆ ಇದೆ ಎಂದು ಎಎಸ್‌ಪಿ ಶ್ರೀಹರಿಬಾಬು ಬಿ.ಎಲ್. ಮಾಧ್ಯಮದವರಿಗೆ ತಿಳಿಸಿದರು.
ಇದನ್ನೂ ಓದಿ: ವಿಜಯನಗರ | ಕನ್ನಡ ವಿಶ್ವವಿದ್ಯಾಲಯ ದೇಶದಲ್ಲಿಯೇ ವಿಶಿಷ್ಟವಾದುದು: ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ
ಮೂವರೂ ಸದ್ಯ ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಬಳ್ಳಾರಿ ಆಸ್ಪತ್ರೆಗೆ ಕಳುಹಿಸಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.