ವಿಜಯನಗರ | ಹಂಪಿ ಉತ್ಸವ; ಜನಜಾಗೃತಿಗಾಗಿ ಬೈಕ್ ರ‍್ಯಾಲಿ

Date:

ಫೆಬ್ರವರಿ 28ರಂದು ನಡೆಯುತ್ತಿರುವ ಹಂಪಿ ಉತ್ಸವದ ಜಾಗೃತಿ ಮೂಡಿಸುವ ಸಲುವಾಗಿ ವಿಜಯನಗರದ ಜಿಲ್ಲಾಧಿಕಾರಿ ಕಚೇರಿಯಿಂದ ಹಂಪಿ ವಿರೂಪಾಕ್ಷ ದೇವಾಲಯದವರೆಗೆ ಬೈಕ್ ರ‍್ಯಾಲಿ ನಡೆಸಲಾಯಿತು. ಜಿಲ್ಲಾಧಿಕಾರಿ ಎಂ ಎಸ್ ದಿವಾಕರ್ ಸ್ವತಃ ರಾಯಲ್ ಎನ್‌ಫೀಲ್ಡ್ ಬೈಕ್ ಏರಿ ರ‍್ಯಾಲಿಯ ನೇತೃತ್ವ ವಹಿಸಿದ್ದರು.

- Advertisement -

ಫೆಬ್ರವರಿ 28ರಂದು ಹಂಪಿ ಉತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ. ಈಗಾಗಲೇ ಹೊಸಪೇಟೆ ನಗರ, ಕಮಲಾಪುರ ರಸ್ತೆಗಳು ಹಾಗೂ ಹಂಪಿ ಮದುವಣಗಿತ್ತಿಯಂತೆ ಸಿಂಗರಿಸಿಕೊಂಡಿವೆ. ಹೊಸಪೇಟೆ ನಗರದಿಂದ ಹಂಪಿ ಉತ್ಸವ ನಡೆಯುವ ಸ್ಥಳಗಳವರೆಗೆ ಬೆಳಕಿನ ತೋರಣ ಕಟ್ಟಲಾಗಿದೆ. ಹಂಪಿ ಸ್ಮಾರಕಗಳು ವಿಶೇಷ ಬೆಳಕಿನಲ್ಲಿ ಕಂಗೊಳಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಅಂಬೇಡ್ಕರ್ ಹಣಕಾಸು ಅಭಿವೃದ್ಧಿ ನಿಗಮ ಸ್ಥಾಪನೆಗೆ ದಸಂಸ ಆಗ್ರಹ

ಸಹಾಯಕ ಆಯುಕ್ತ ವಿವೇಕ್, ತಹಶೀಲ್ದಾರ್ ಶೃತಿ ಮಾಳಪ್ಪಗೌಡ ಕೂಡಾ ಬೈಕ್ ಚಲಾಯಿಸಿ ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾದ ಬೈಕ್ ರ‍್ಯಾಲಿ ಸಾಯಿಬಾಬಾ ರಸ್ತೆ, ಎಪಿಎಂಸಿ, ನೀಲಕಂಠೇಶ್ವರ ದೇವಸ್ಥಾನ, 100 ಹಾಸಿಗೆಗಳ ಆಸ್ಪತ್ರೆ, ವಿಎನ್‌ಸಿ ಕಾಲೇಜು ರಸ್ತೆ, ಅಂಬೇಡ್ಕರ್ ಸರ್ಕಲ್, ಪುನಿತ್ ರಾಜ್‌ಕುಮಾರ್ ವೃತ್ತ, ಉಡುಪಿ ಹೊಟೆಲ್, ಹಂಪಿ ರಸ್ತೆ ಮೂಲಕ ಅನಂತಶಯನಗುಡಿ, ಕೊಂಡನಾಯಕನಹಳ್ಳಿ, ಕಡ್ಡಿರಾಂಪುರ ಮಾರ್ಗವಾಗಿ ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದ ಬಳಿ ಮುಕ್ತಾಯಗೊಂಡಿತು.

ರ‍್ಯಾಲಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...