ವಿಜಯನಗರ | ಭಾರತ ಸ್ವಾವಲಂಬಿಯಾಗಲು ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು: ಡಾ. ವೀರೇಶ ಬಡಿಗೇರ

Date:

ವರ್ಣ, ವರ್ಗ, ಲಿಂಗರಹಿತ ಸಮಾಜ ಸ್ಥಾಪನೆಯು ಗಾಂಧಿಯ ಕನಸಾಗಿತ್ತು. ಸ್ವದೇಶಿ ಚಳವಳಿ, ಸ್ವಾವಲಂಬನೆ ಹಾಗೂ ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು. ದುಡಿಯುವ ವರ್ಗಗಳು ಯಾರಿಗೂ ಅಧೀನರಾಗದೆ ದುಡಿದು ಬದುಕುವಂತಾಗಬೇಕೆಂದು ಮಹಾತ್ಮ ಗಾಂಧಿಯವರು ಯಾವಾಗಲೂ ಚಿಂತಿಸುತ್ತಿದ್ದರು ಎಂದು ಹಸ್ತಪ್ರತಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವೀರೇಶ ಬಡಿಗೇರ ಅವರು ತಿಳಿಸಿದರು.

- Advertisement -

ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿಯ ಸಭಾಭವನದಲ್ಲಿ ಮಹಾತ್ಮಾಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಗಾಂಧೀಜಿ ‘ಸ್ವತಂತ್ರ ಭಾರತದ ಪರಿಕಲ್ಪನೆ’ ಎಂಬ ವಿಷಯ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

“ಲಾಲ್‌ಬಹಾದ್ದೂರ್ ಶಾಸ್ತ್ರಿಯವರು ಹಸಿರು ಕ್ರಾಂತಿಯ ಮೂಲಕ `ಜೈಜವಾನ್‌ ಜೈಕಿಸಾನ್’ ಎಂದು ಹೇಳಿದರೆ, ಗಾಂಧೀಜಿಯವರು ರೈತರೇ ಈ ದೇಶದ ಬೆನ್ನೆಲುಬು ಎನ್ನುತ್ತಾರೆ. ಸಬಲರಾಗಿ, ಸ್ವತಂತ್ರರಾಗಿ, ಸ್ವಾವಲಂಬಿಗಳಾಗಿ ತಮಗೆ ಬೇಕಾದ ವಸ್ತುಗಳನ್ನು ಭಾರತೀಯರು ತಾವೇ ಉತ್ಪಾದಿಸಿಕೊಳ್ಳಬೇಕೆಂದು ಇಬ್ಬರೂ ಕನಸು ಕಂಡಿದ್ದರು. ಎಂದು ಹೇಳಿದರು.

“ಸತ್ಯವೇ ಗಾಂಧಿಯವರ ಉಸಿರಾಗಿತ್ತು. ಸತ್ಯವಾದ ನಡವಳಿಕೆ, ಸತ್ಯವಾದ ಬದುಕು, ಸ್ವತಂತ್ರ ಆಲೋಚನೆ, ಅಧೀನರಹಿತ ಬದುಕು ಇವೆಲ್ಲವೂ ಸತ್ಯದ ತಳಹದಿ ಎಂದು ಗಾಂಧಿಯವರು ನಂಬಿದ್ದರು. ನೇಯುವುದು, ನೂಲುವುದನ್ನು ಭಾರತದ ಆತ್ಮಸಾಕ್ಷಿಯಾಗಿ ನಾನು ಮಾಡುತ್ತೇನೆಂದು ಹೇಳುತ್ತಿದ್ದರು. ಗಾಂಧಿ, ಶಾಸ್ತ್ರಿ, ಅಂಬೇಡ್ಕರ್ ಇವರಂತಹ ಮಹಾತ್ಮರು ನಮಗೆ ಸ್ವಾತಂತ್ರ್ಯ, ಬದುಕು, ಸಂವಿಧಾನ, ಹಕ್ಕುಗಳನ್ನು ಕೊಟ್ಟಿದ್ದಾರೆ. ಇಂತಹ ಮಹಾತ್ಮರನ್ನು ಸ್ಮರಿಸಿ ಅವರ ಭಾವಚಿತ್ರಕ್ಕೆ ಹಾರ ಹಾಕುವ ಬದಲು ಅವರ ಜೀವನದ ಮೌಲ್ಯ ಆದರ್ಶಗಳನ್ನು ನಮ್ಮ ಬದುಕಿನ ಜೀವನದ ಭಾಗವಾಗಿ ಅಳವಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.‌

ಗಾಂಧಿ ಜಯಂತಿ 3

ಎನ್‌ಎಸ್‌ಎಸ್ ಘಟಕದ ಸಂಯೋಜನಾಧಿಕಾರಿ ಡಾ.ಎ.ಶ್ರೀಧರ ಅವರು ಮಾತನಾಡಿ, “ಹಿಂದ್ ಸ್ವರಾಜ್ ಹಾಗೂ ಮೈ ಎಕ್ಸ್ಪೆರಿಮೆಂಟ್ ವಿತ್‌ಟ್ರುಥ್ ಗಾಂಧಿಯವರ ಬಹಳ ಪ್ರಮುಖ ಕೃತಿಗಳಾಗಿವೆ. ಗ್ರಾಮ ಸ್ವರಾಜ್ಯದ ಕಲ್ಪನೆಯೊಂದಿಗೆ ಆಧುನಿಕತೆಗೂ ಪ್ರಾಮುಖ್ಯತೆ ನೀಡಿದ್ದರು. ಆದರೆ ಆಧುನಿಕತೆಯ ದಾಸರಾಗಬಾರದು ಎಂಬುದು ಗಾಂಧಿಯವರ ಅಭಿಪ್ರಾಯವಾಗಿತ್ತು” ಎಂದು ಹೇಳಿದರು.

ಎನ್‌ಎಸ್‌ಎಸ್ ಘಟಕದ ಸಂಯೋಜನಾಧಿಕಾರಿಗಳಾದ ಡಾ.ಎ.ಶ್ರೀಧರ ಅವರ ನೇತೃತ್ವದಲ್ಲಿ ಗಾಂಧಿಜಯಂತಿ ಪ್ರಯುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

ಆರ್ ವಿ ದೇಶಪಾಂಡೆ, ಉಪಕುಲಸಚಿವ ಬಿ.ಗುರುಬಸಪ್ಪ, ಮಾಹಿತಿ ಕೇಂದ್ರದ ಮುಖ್ಯಸ್ಥ ಶಕುಂತಲಾ ಚೌಡನಾಯ್ಕ, ಕುಲಪತಿಯವರ ಆಪ್ತಕಾರ್ಯದರ್ಶಿ ಎ ಎಂ ಕೃಪಾಶಂಕರ್, ಎಂಜಿನಿಯರ್ ಚಂದ್ರಶೇಖರಪ್ಪ, ಡಾ. ಪಿ ಕೃಷ್ಣಮೂರ್ತಿ, ನಿವೃತ್ತ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿ ಸೇರಿದಂತೆ ವಿದ್ಯಾರ್ಥಿಗಳು, ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...