ವಿಜಯನಗರ | ಮನರೇಗಾ ಸಮರ್ಪಕ ಅನುಷ್ಠಾನಕ್ಕೆ ಗ್ರಾಕೂಸ ಒತ್ತಾಯ

Date:

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯನ್ನು ಸಮರ್ಪಕ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಗ್ರಾಕೂಸ ಮುಖಂಡರು ವಿಜಯನಗರ ಜಿಲ್ಲೆಯ ಬೈಲುವದ್ದಿಗೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಮನರೇಗಾ ಯೋಜನೆಯಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಪರಿಹಾರ ಇಲ್ಲದೆ ಹೈರಾಣಾಗುತ್ತಿದ್ದೇವೆ. ಹಾಗಾಗಿ ಪ್ರತಿ ಸಮಸ್ಯೆಗೂ ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಬಗೆಹರಿಸಬೇಕು. ಇಲ್ಲವೇ ಪರಿಹಾರ ಬಗೆಹರಿಸಲು ಸ್ಥಳೀಯ ಸರ್ಕಾರ ಗ್ರಾಮ ಪಂಚಾಯಿತಿಗೆ ಅಧಿಕಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಹಳೆ ಉದ್ಯೋಗ ಚೀಟಿ (ಜಾಬ್ ಕಾರ್ಡ್)ರದ್ದು ಮಾಡಿ ಹೊಸ ಜಾಬ್ ಕಾರ್ಡ್ ನೀಡುವುದು, ಆಧಾರ್ ಕಾರ್ಡ್ ಲಿಂಕ್ ಮಾಡುವುದು, ಇನ್ನಿತರ ಕೆಲಸಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಮನರೇಗಾ ಬಜೆಟ್ ಅತಿ ಕಡಿಮೆ ಇದೆ. ಕೆಲಸ ಮಾಡಿದ ಎರಡು ತಿಂಗಳ ಕೂಲಿ ಹಣದಲ್ಲಿ ಒಂದು ವಾರ ಮತ್ತು ಎರಡು ವಾರದ ಹಣ ಖಾತೆಗೆ ಜಮಾ ಆಗಿದ್ದು, ಕಾರ್ಮಿಕರಿಗೆ 15 ದಿನಗಳ ಒಳಗಾಗಿ ಹಣ ಪಾವತಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ನಿರಂತರ 100 ದಿನಗಳ ಕೆಲಸಕ್ಕೆ ಸಮಯಕ್ಕೆ ಸರಿಯಾಗಿ ಕೂಲಿ ಪಾವತಿಸುವಂತೆ ಬಜೆಟ್ ಅನುದಾನ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಬಿಜೆಪಿ ಬದಲಿಸಿದ್ದ ಪಠ್ಯಗಳನ್ನು ಕಾಂಗ್ರೆಸ್‌ ತೆಗೆಯಬೇಕು: ಕುಂ.ವೀ

200 ಮಾನವ ದಿನಗಳ ಕೂಲಿ ಕೊಡಬೇಕು. ಕೂಲಿ ₹600ಕ್ಕೆ ಹೆಚ್ಚಳ ಮಾಡಬೇಕು. ಕೂಲಿ ಕೆಲಸ ಮಾಡುವಾಗ ಕಾರ್ಮಿಕರು ಮೃತಪಟ್ಟರೆ ಸರ್ಕಾರ ₹5 ಲಕ್ಷ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಬದಲ್ಲಿ ತಾಲೂಕು ಕಾರ್ಯಕರ್ತೆ ಶೈಲಜಾ, ಸುಧಾ, ಹುಸೇನ ಬೀ, ಗಂಗಪ್ಪ, ಲಕ್ಷ್ಮಿ, ಶಾಂತಮ್ಮ, ರೇಣುಕಾ, ಭಾಗ್ಯಮ್ಮ, ಮುದಿಯಪ್ಪ ಹಾಗೂ ಇತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...