ವಿಜಯನಗರ | ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಾಹ್ನವಿ ನೇಮಕ

Date:

Advertisements

ವಿಜಯನಗರ ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಜಾಹ್ನವಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದಿದ್ದ ಡಾ. ಶ್ರೀಹರಿಬಾಬು ಬಿ ಎಲ್ ಬೆಂಗಳೂರಿಗೆ ವರ್ಗಾವಣೆಯಾಗಿದ್ದು, 2019ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಜಾಹ್ನವಿ ವಿಜಯನಗರ ಜಿಲ್ಲೆಯ ಎಸ್‌ಪಿಯಾಗಿ ನೇಮಿಸಲಾಗಿದೆ.

ಜಿಲ್ಲೆಯ ಮೂರನೇ ಪೊಲೀಸ್ ಅಧೀಕ್ಷಕರಾಗಿ 2019ನೇ ಬ್ಯಾಚ್ ನ ಐಪಿಎಸ್‌ ಅಧಿಕಾರಿ ಜಾಹ್ನವಿ ಅಧಿಕಾರ ಸ್ವೀಕರಿಸಿದರು. ಬಿ.ಎಲ್.ಶ್ರೀಹರಿಬಾಬು ಅವರಿಂದ ಅಧಿಕಾರವನ್ನು ಸ್ವೀಕಾರಿಸಿದರು. ವಿಜಯನಗರ ಜಿಲ್ಲೆಯಲ್ಲಿ ಎರಡು ವರ್ಷ ಒಂಬತ್ತು ತಿಂಗಳಿನಿಂದ ಎಸ್ ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ ಎಲ್ ಶ್ರೀ ಹರಿಬಾಬು ಅವರು ಬೆಂಗಳೂರಿನ ಸಿಸಿಬಿ ಡಿಸಿಪಿಯಾಗಿ ನಿಯೋಜನೆಗೊಂಡಿದ್ದಾರೆ.

ಕೆಲಸದ ಬಗ್ಗೆ ತೃಪ್ತಿ ಇದೆ: ನಿರ್ಗಮನ ಎಸ್‌ಪಿ ಶ್ರೀಹರಿಬಾಬು

Advertisements

“ಹೊಸ ಜಿಲ್ಲೆಯಲ್ಲಿ ಪೊಲೀಸರಿಗೆ ಮೂಲಸೌಲಭ್ಯ ಒದಗಿಸುವುದು ಸುಲಭದ ಕೆಲಸವಲ್ಲ. ಆದರೆ ಸರ್ಕಾರದ ಅನುದಾನ, ದಾನಿಗಳ ಸಹಕಾರದಿಂದ ಪೊಲೀಸ್ ಪರೇಡ್‌ ಮೈದಾನ, ಫೈರಿಂಗ್ ರೇಂಜ್‌ನಂತಹ ಮೂಲಸೌಲಭ್ಯ ಕಲ್ಪಿಸಲು ಸಾಧ್ಯವಾಯಿತು” ಎಂದು ನಿರ್ಗಮಿತ ಎಸ್‌ಪಿ ಶ್ರೀಹರಿಬಾಬು ಬಿ.ಎಲ್.ಹೇಳಿದರು.

ಬೆಂಗಳೂರಿನಲ್ಲಿ ಸಿಸಿಬಿ ಡಿಸಿಪಿ ಆಗಿ ವರ್ಗಾವಣೆಗೊಂಡಿರುವ ಅವರಿಗೆ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮಿಂದಾದ ಈ ಕೆಲಸದ ಬಗ್ಗೆ ತೃಪ್ತಿ ಇದೆ ಎಂದರು.

“ಲಕ್ಷಾಂತರ ಜನ ಸೇರುವ ಬೃಹತ್ ಜಾತ್ರೆಗಳ ಜಿಲ್ಲೆ ಇದು. ವರ್ಷಕ್ಕೆ 318ಕ್ಕೂ ಹೆಚ್ಚು ಜಾತ್ರೆಗಳು ಇಲ್ಲಿ ನಡೆಯುತ್ತವೆ. ಅದೆಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ ಖುಷಿ ಇದೆ, ಜತೆಗೆ ಮೂರು ಹಂಪಿ ಉತ್ಸವ, ಜಿ.20 ಶೃಂಗದಂತಹ ಬೃಹತ್‌ ಕಾರ್ಯಕ್ರಮಗಳನ್ನು ಯಶಸ್ವಿ ಗೊಳಿಸಿದ ಅಭಿಮಾನವೂ ಇದೆ” ಎಂದು ಶ್ರೀಹರಿಬಾಬು ಹೇಳಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ಮೂಡಬಿದ್ರೆ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ: ಉಪನ್ಯಾಸಕರಿಬ್ಬರು ಸೇರಿ ಮೂವರ ಬಂಧನ

ಜಿಲ್ಲೆಯ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದರಿಂದ ಹೊಸ ಎಸ್ಪಿ ಕಚೇರಿ, ಡಿಎಆರ್ ಕಚೇರಿ ನಿರ್ಮಾಣದ ಕನಸು ನನಸಾಯಿತು. ಡಿಎಆರ್ ವಸತಿ ಸಮುಚ್ಛಯದ ನಿರ್ಮಾಣ ಪ್ರಗತಿ ಯಲ್ಲಿದೆ. ನಾನು ಮತ್ತೊಮ್ಮೆ ಇಲ್ಲಿಗೆ ಭೇಟಿ ನೀಡಿದಾಗ ಈ ಎಲ್ಲ ಶಾಶ್ವತ ಕೊಡುಗೆಗಳು ನನ್ನ ಅವಧಿಯಲ್ಲಿ ಆಯಿತು ಎಂಬ ಸಂತೃಪ್ತಿ ಭಾವ ನನ್ನಲ್ಲಿದೆ ಎಂದು ಹೇಳಿದರು.

‘ಹುಡಾ’ ಅಧ್ಯಕ್ಷ ಎಚ್‌.ಎನ್‌.ಎಫ್‌.ಮೊಹಮ್ಮದ್ ಇಮಾಮ್ ನಿಯಾಜಿ, ನಿವೃತ್ತ ಪೊಲೀಸ್ ನೌಕರರ ಸಂಘದ ಅಧ್ಯಕ್ಷ ಕುಮಾರಸ್ವಾಮಿ, ಇಲಾಖೆಯ ಅಧಿಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

ರಸ್ತೆ ತುಂಬಾ ತಗ್ಗು ಗುಂಡಿಗಳದ್ದೇ ಕಾರುಬಾರು; ಸವಾರರ ಜೀವಕ್ಕೆ ‘ಗ್ಯಾರಂಟಿ’ಯೇ ಇಲ್ಲ!

ರಾಯಚೂರಿನ ಅನ್ವರಿ - ಹಟ್ಟಿ ಚಿನ್ನದ ಗಣಿ ಪಟ್ಟಣಕ್ಕೆ ಹೋಗುವ ಮುಖ್ಯ...

Download Eedina App Android / iOS

X