ವಿಜಯನಗರ | ಕನ್ನಡ ವಿಶ್ವವಿದ್ಯಾಲಯ ದೇಶದಲ್ಲಿಯೇ ವಿಶಿಷ್ಟವಾದುದು: ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ

Date:

Advertisements

ಕನ್ನಡ ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತದಲ್ಲಿಯೇ ಬಹಳ ವಿಶಿಷ್ಟವಾದ ವಿಶ್ವವಿದ್ಯಾಲಯ. ನಮ್ಮ ವಿಶ್ವವಿದ್ಯಾಲಯದಲ್ಲಿ ಅಂತರ್ ಶಿಸ್ತೀಯ ಮತ್ತು ಬಹುಶಿಸ್ತೀಯ ಅಧ್ಯಯನಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಕನ್ನಡ ವಿವಿ ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ ಅಭಿಪ್ರಾಯಪಟ್ಟರು.

ಕನ್ನಡ ವಿಶ್ವವಿದ್ಯಾಲಯದ ನುಡಿ ಕಟ್ಟಡದಲ್ಲಿ ಆಯೋಜಿಸಲಾದ 2024-25ನೇ ಸಾಲಿನ ಎಂಎ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ವಾಗತ ಸಮಾರಂಭದಲ್ಲಿ ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಕನ್ನಡ ಸಾಹಿತ್ಯದ ವಿದ್ಯಾರ್ಥಿಗಳು ಭಾಷಾಂತರ, ಶಾಸನಶಾಸ್ತ್ರ ಮತ್ತು ದ್ರಾವಿಡ ಹಾಗೂ ಭಾಷಾಧ್ಯಯನ ವಿಷಯಗಳಲ್ಲಿ ಪರಿಣಿತಿ ಪಡೆಯಬಹುದು” ಎಂದರು.

Advertisements
ಕನ್ನಡ ವಿಶ್ವವಿದ್ಯಾಲಯ 1

“ಮಧ್ಯಕಾಲಿನ ಕನ್ನಡ ಸಾಹಿತ್ಯ ಮತ್ತು ದಾಸ ಸಾಹಿತ್ಯದ ನೆಲೆ ನಮ್ಮ ಹಂಪಿಯ ಪರಿಸರ. ಈ ಪ್ರದೇಶದಲ್ಲಿ ವಚನಗಳ ಸಂಗ್ರಹ ಮತ್ತು ಅದಕ್ಕೆ ಸೊಗಸಾದ ವ್ಯಾಖ್ಯಾನಗಳನ್ನು ಟೀಕೆ-ಟಿಪ್ಪಣಿಗಳನ್ನು ಬರೆಯಲಾಯಿತು. ಇಂತಹ ಪಾರಂಪರಿಕ ಸ್ಥಳದಲ್ಲಿ ಅಧ್ಯಯನ ಕೈಗೊಂಡಿರುವ ವಿದ್ಯಾರ್ಥಿ ಸಮೂಹದ ಜವಾಬ್ದಾರಿ ದೊಡ್ಡದು” ಎಂದರು.

ಅಧ್ಯನಾಂಗದ ನಿರ್ದೇಶಕ ಡಾ. ಅಮರೇಶ ಯತಗಲ್ ಮಾತನಾಡುತ್ತ, “ಕನ್ನಡ ವಿಶ್ವವಿದ್ಯಾಲಯ ಬಹಳ ಸಂಪತ್ಭರಿತ ನೆಲ. ವಿದ್ಯಾರ್ಥಿಗಳು ಜೀವನದಲ್ಲಿ ಏಳು ಬೀಳುಗಳನ್ನು ಸರಿ ಸಮಾನವಾಗಿ ತೆಗೆದುಕೊಳ್ಳಬೇಕು. ಕನ್ನಡ ವಿಶ್ವವಿದ್ಯಾಲಯದಲ್ಲಿ ಜ್ಞಾನಕ್ಕೆ ಮೊದಲ ಆದ್ಯತೆ. ವಿದ್ಯಾರ್ಥಿಗಳು ಮನಸ್ಸನ್ನು ಬೇರೆಡೆಗೆ ಹರಿಯಬಿಡದೆ, ವಿದ್ಯಾಭ್ಯಾಸದ ಕಡೆ ಗಮನ ನೀಡಬೇಕು. ಸಮಯವನ್ನು ಎಲ್ಲರೂ ಸರಿಯಾಗಿ ಬಳಸಿಕೊಳ್ಳಿ. ನಿಮ್ಮ ಬಾಳು ಬಂಗಾರವಾಗಲಿ” ಎಂದು ಹಾರೈಸಿದರು.

ಕನ್ನಡ ವಿಶ್ವವಿದ್ಯಾಲಯ 2

ಕನ್ನಡ ವಿಶ್ವವಿದ್ಯಾಲಯ ಭಾಷಾ ನಿಕಾಯದ ಡೀನ್‌ ಡಾ. ಎಫ್ ಟಿ ಹಳ್ಳಿಕೇರಿ ಮಾತನಾಡಿ, “ಪ್ರತಿಯೊಬ್ಬ ವಿದ್ಯಾರ್ಥಿಯ ಪಾಲಿಗೆ ಸ್ನಾತಕೋತರ ಪದವಿಯು ಒಂದು ಪ್ರಮುಖ ಮೈಲುಗಲ್ಲು. ಕನ್ನಡ ವಿಶ್ವವಿದ್ಯಾಲಯದ ಸೌಲಭ್ಯ, ಮತ್ತೆ ಎಲ್ಲೂ ಸಿಗುವುದಿಲ್ಲ. ಈ ಸೌಲಭ್ಯಗಳನ್ನು ಬಳಸಿಕೊಂಡು ನಾಡಿಗೆ ಮತ್ತು ದೇಶಕ್ಕೆ ಒಳ್ಳೆಯ ಕೊಡುಗೆಯನ್ನು ನೀಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಾ.21ರಿಂದ 27ರವರೆಗೆ ‘ರಾಷ್ಟ್ರೀಯ ಐಕ್ಯತಾ ಶಿಬಿರ-2025ʼ

ಎಂ ಎ ಕನ್ನಡ ಸ್ನಾತಕೋತ್ತರ ಪದವಿ ಸಂಚಾಲಕ ಡಾ. ವೆಂಕಟಗಿರಿ ದಳವಾಯಿ ಮಾತನಾಡಿ, “ಸ್ವಾಗತ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರತಿಭೆ ಮತ್ತು ಕೌಶಲ್ಯಗಳನ್ನು ಹೊರತರುವ ಅತ್ಯುತ್ತಮ ವೇದಿಕೆ. ವಿದ್ಯಾರ್ಥಿ ಜೀವನ ಎನ್ನುವುದು ಸುವರ್ಣ ಯುಗ. ಇದರ ನೆನಪು ಸದಾ ಹಸಿರಾಗಿರುತ್ತದೆ” ಎಂದರು.

ಈ ಕಾರ್ಯಕ್ರಮದಲ್ಲಿ ವಿವಿಧ ನಿಕಾಯದ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X