ವಿಜಯನಗರ | ಒಳಮೀಸಲಾತಿ ಅನುಷ್ಠಾನಗೊಳಿಸಲು ಆಗ್ರಹಿಸಿ ಸಿಎಂಗೆ ಕರಿಯಪ್ಪ ಗುಡಿಮನಿ ಮನವಿ

Date:

Advertisements

ಸುಪ್ರಿಂ ಕೋರ್ಟ್ ತೀರ್ಪು ಆದೇಶಿಸಿದ್ದರೂ ರಾಜ್ಯ ಸರಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸುತ್ತಿಲ್ಲ. ತಕ್ಷಣವೇ ಒಳ ಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಬೇಕು ಎಂದು ಪರಿಶಿಷ್ಟ ಜಾತಿಗಳ ಒಕ್ಕೂಟದಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ತುಂಗಭದ್ರಾ ಡ್ಯಾಂ ಬಾಗಿನ ಅರ್ಪಿಸಿದಾಗ ಜನರ ಸಮಸ್ಯೆಗಳಿಗೆ ಅಹವಾಲು ಸ್ವೀಕರಿಸುವುದಕ್ಕೆ ಬಂದಾಗ ಒಳಮೀಸಲಾತಿ ಹೋರಾಟಗಾರ ಕರಿಯಪ್ಪ ಗುಡಿಮನಿ ಮನವಿ ಮಾಡಿಕೊಂಡರು.

ಸುಮಾರು ಮೂರು ದಶಕಗಳ ಕಾಲ ನಡೆಸಿದ ಹೋರಾಟದ ಫಲವಾಗಿ ಆಗಸ್ಟ್ 1, 2024 ರಂದು ಸುಪ್ರೀಂಕೋರ್ಟ್ ಒಳಮೀಸಲಾತಿ ಜಾರಿ ಮಾಡಲು ಯಾವುದೇ ಸಾಂವಿಧಾನಿಕ ತೊಡಕುಗಳಿಲ್ಲ ಹಾಗೂ ರಾಜ್ಯ ಸರ್ಕಾರಕ್ಕೆ ಆ ಅಧಿಕಾರವಿದೆ ಎಂದು ತೀರ್ಪು ನೀಡಿದೆ. ಹಾಗಾಗಿ, ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದು ಕರಿಯಪ್ಪ ಗುಡಿಮನಿ ತಿಳಿಸಿದರು.

Advertisements

ಇಡೀ ಭಾರತ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿಕೊಂಡರೆ ಕರ್ನಾಟಕ ರಾಜ್ಯದ ಪರಿಸ್ಥಿತಿಯು ಒಳಮೀಸಲಾತಿ ಜಾರಿಗೆ ಬಹಳ ಅನುಕೂಲಕರವಾಗಿದೆ. ಇಲ್ಲಿನ 101 ಜಾತಿಗಳೂ ಸಹ ಒಮ್ಮತದಿಂದ ಒಳಮೀಸಲಾತಿಗಾಗಿ ಆಗ್ರಹಿಸುತ್ತಿವೆ ಎಂದು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.

2023ರ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷವು ಚಿತ್ರದುರ್ಗದಲ್ಲಿ ನಡೆಸಿದ ‘ಕಾಂಗ್ರೆಸ್ ಐಕ್ಯತಾ ಸಮಾವೇಶ’ದಲ್ಲಿ ಅಧಿಕಾರಕ್ಕೆ ಬಂದ ಮೊದಲ ಅಧಿವೇಶನದಲ್ಲಿಯೇ ಒಳಮೀಸಲಾತಿ ಜಾರಿಗಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ಇದಕ್ಕೆ ತಾವೂ ಸಹ ಸಾಕ್ಷಿಯಾಗಿದ್ದೀರಿ. ಅದರಂತೆ ನಿಮ್ಮ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ಒಳಮೀಸಲಾತಿ ಜಾರಿಗಾಗಿ ಸಂವಿಧಾನ ತಿದ್ದುಪಡಿ ಮಾಡಬೇಕೆಂಬ ಶಿಫಾರಸನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದಿರಿ. ಈ ಕ್ರಮಕ್ಕೆ ಸಮಸ್ತ ಪರಿಶಿಷ್ಟ ಜಾತಿಗಳೂ ನಿಮ್ಮ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿ ಅಧಿಕಾರಕ್ಕೆ ತರಲಾಗಿದೆ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ತೀರ್ಪಿನಿಂದ ಮತ್ತಷ್ಟು ಹಾದಿ ಸುಗಮವಾಗಿದೆ. ಸಂವಿಧಾನ ತಿದ್ದುಪಡಿಯ ಪ್ರಶ್ನೆಯೇ ಉದ್ದವಿಸುವುದಿಲ್ಲ. ಕರ್ನಾಟಕ ಸರ್ಕಾರವೇ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಬಹುದು. ಸುಪ್ರೀಂ ಕೋರ್ಟ್ ತೀರ್ಪು ಬಂದ ದಿನ ತಾವು ತೀರ್ಪನ್ನು ಸ್ವಾಗತಿಸಿ, ತಮ್ಮ ಬದ್ಧತೆ ಪ್ರದರ್ಶಿಸಿದ್ದೀರಿ. ಆದರೆ ಒಂದೂವರೆ ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಪರಿಶಿಷ್ಟ ಜಾತಿಗಳಲ್ಲಿ ಬೇಸರ ಮೂಡಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವೇಳೆ ಕೆ ಎಂ ಆರ್ ವಿ ಮುದುಕಪ್ಪ ಇನ್ನಿತರರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X