ವಿಜಯನಗರ | ಕೃತಿಕಾ ಕೆ ಆರ್‌ಗೆ ಹಂಪಿ ಕನ್ನಡ ವಿವಿಯಿಂದ ಪಿಎಚ್‌ಡಿ ಪದವಿ ಪ್ರದಾನ

Date:

ಹಂಪಿ ಕನ್ನಡ ವಿಶ್ವವಿದ್ಯಾಲಯ( Hampi Kannada University)ದ 33ನೇ ಘಟಿಕೋತ್ಸವ ಮತ್ತು ನುಡಿಹಬ್ಬ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್, ಉನ್ನತಶಿಕ್ಷಣ ಸಚಿವ ಸಮಕುಲಾಧಿಪತಿ ಎಂ ಸಿ ಸುಧಾರಕರ್ ಅವರು ಏಪ್ರಿಲ್ 4ರಂದು ಕೃತಿಕಾ ಕೆ ಆರ್ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಪ್ರದಾನ ಮಾಡಿದರು.

- Advertisement -

ಕನ್ನಡ ವಿಶ್ವವಿದ್ಯಾಲಯ ಹಂಪಿಯ ಮಹಿಳಾ ಅಧ್ಯಯನ ವಿಭಾಗದಲ್ಲಿ ಡಾ. ಯರ್ರಿಸ್ವಾಮಿ ಈ. ಅವರ ಮಾರ್ಗದರ್ಶನದಲ್ಲಿ ‘ಕಾಫಿ ತೋಟದಲ್ಲಿನ ಮಹಿಳಾ ಕಾರ್ಮಿಕರು: ಬದುಕು ಮತ್ತು ಬವಣೆ'(ಚಿಕ್ಕಮಗಳೂರು ಜಿಲ್ಲೆಯನ್ನು ಅನುಲಕ್ಷಿಸಿ) ಎಂಬ ವಿಷಯದಲ್ಲಿ ಕೃತಿಕಾ ಕೆ ಆರ್ ನಡೆಸಿದ ಸಂಶೋಧನೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯು ಪಿಎಚ್‌ಡಿ ಪದವಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಚಿಕ್ಕಮಗಳೂರಿನ ಕಸಬಾ ಹೋಬಳಿ, ಧರಗುಣಿ ಗ್ರಾಮದ ಕಾಫಿ ತೋಟದ ಕಾರ್ಮಿಕರಾದ ರಮೇಶ್ ಕೆ ಎನ್ ಮತ್ತು ರೇಣುಕಾ ಎಂ ಕೆ ದಂಪತಿಯ ಮಗಳಾದ ಡಾ. ಕೃತಿಕಾ ಕೆ ಆರ್ ಅವರು ಚಿಕ್ಕಂದಿನಿಂದಲೂ ಬಹಳಷ್ಟು ಶ್ರಮವಹಿಸಿ ಓದನ್ನು ಮೈಗೂಡಿಸಿಕೊಂಡವರು. ಬಡಕುಟುಂಬದಲ್ಲಿ ಹುಟ್ಟಿದರೂ ಉನ್ನತಶಿಕ್ಷಣ ಪಡೆದು ಕುಟುಂಬಕ್ಕೆ, ಊರಿಗೆ, ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

ಪ್ರಾಥಮಿಕ ಶಿಕ್ಷಣ ಕಬ್ಬಿನಹಳ್ಳಿ ಸರ್ಕಾರಿ ಶಾಲೆಯಲ್ಲಿ, ಮಾಧ್ಯಮಿಕ ಶಿಕ್ಷಣವನ್ನು ಚಿಕ್ಕಮಗಳೂರಿನ ಮಲೆನಾಡು ವಿದ್ಯಾಸಂಸ್ಥೆಯಲ್ಲಿ, ಪದವಿಪೂರ್ವ ಶಿಕ್ಷಣವನ್ನು ನಗರದ ಸರ್ಕಾರಿ ಕಾಲೇಜಿನಲ್ಲಿ ಹಾಗೂ ಪದವಿ ಶಿಕ್ಷಣವನ್ನು ಚಿಕ್ಕಮಗಳೂರಿನ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಗಿಸಿದರು. ನಂತರ ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ಮಹಿಳಾ ಅಧ್ಯಯನ ವಿಷಯದಲ್ಲಿ ಎಂಎ ಪದವಿ ಪೂರ್ಣಗೊಳಿಸಿದರು.

ಈ ಬೀದಿಯಲ್ಲಿ ಒಂಟಿ ಮಹಿಳೆಯ ವಾಸ

ಕೃತಿಕಾ ಅವರು ಈ ನೆಲದ ಕಾಫಿ ತೋಟದ ಕಾರ್ಮಿಕರ ಕಷ್ಟಗಳನ್ನು ಹತ್ತಿರದಿಂದ ಬಲ್ಲವರಾಗಿದ್ದು ಮಹಿಳಾ ಕಾರ್ಮಿಕರ ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಕಾನೂನಾತ್ಮಕ ಸಂಗತಿಗಳನ್ನು ಲಿಂಗಸಂಬಂಧಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ.

ಕುಟುಂಬಸ್ಥರು, ಸ್ನೇಹಿತರು ಸಂಭ್ರಮದಿಂದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...