ವಿಜಯನಗರ | ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಅವಹೇಳನ; ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹ

Date:

ಬಿಜೆಪಿ ಮಾಜಿ ಸಚಿವ ಆರಗ ಜ್ಞಾನೇಂದ್ರನ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು‌ ಹೊಸಪೇಟೆ ಘಟಕದ ಬಾಬಾ ಸಾಹೇಬ ಅಂಬೇಡ್ಕರ್ ಸಂಘಟನೆ ಕಾರ್ಯಕರ್ತರು ವಿಜಯನಗರ ಜಿಲ್ಲೆ ಹೊಸಪೇಟೆ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ನಡೆಸಿದರು.

“ಹಿರಿಯ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಜೆಪಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ವರ್ಣಭೇದ ಮಾಡುವುದರ ಮೂಲಕ ದ್ರಾವಿಡರ ಅಸ್ಮಿತೆಯ ಬಣ್ಣವಾದ ಕಪ್ಪು ಬಣ್ಣವನ್ನು ಹಿಯ್ಯಾಳಿಸುವುದರ ಜೊತೆಗೆ ಜನಾಂಗೀಯ ನಿಂದನೆ ಮಾಡಿದ್ದಾರೆ. ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಸಂವಿಧಾನದಲ್ಲಿ ಧರ್ಮ, ಜನಾಂಗ, ಜಾತಿ, ಲಿಂಗ ಅಥವಾ ಜನಾಂಗೀಯ ಆಧಾರದ ಮೇಲೆ ಮಾತನಾಡುವುದನ್ನು ನಿಷೇಧಿಸಿದೆ. ಆದರೂ ಮನುವಾದವನ್ನು ಹೊತ್ತಿರುವ ಆರಗ ಜ್ಞಾನೇಂದ್ರನ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೀದರ್ | ಬೆಳೆಹಾನಿ ಜಂಟಿ ಸಮೀಕ್ಷೆಗೆ ರೈತ ಸಂಘ ಒತ್ತಾಯ

ಅಂಬೇಡ್ಕರ್ ಸಂಘದ ಜಿಲ್ಲಾ ಅಧ್ಯಕ್ಷ ಟಿ ವಾಸುದೇವ್, ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಬಣ್ಣದ ಮನೆ, ಜೈ ಶಿವಕುಮಾರ್, ಪ್ರಗತಿಪರ ಸಂಘಟನೆಯ ಮುಖಂಡರುಗಳಾದ ದುರ್ಗಪ್ಪ ಪೂಜಾರ್, ತಮ್ಮನಳ್ಳೆಪ್ಪ ಡಿ ವೆಂಕಟರಮಣ, ಆಟೋ ರಾಮಚಂದ್ರ, ವೀರಭದ್ರ ನಾಯಕ, ಸಜ್ಜದ್ ಖಾನ್, ಮುದುಕಪ್ಪ, ನೀಲಕಂಠ, ಇಂತಿಯಾಜ್ ಓಬಳೇಶ್, ಹುಲುಗಣ್ಣ, ಗುಲಾಂ ರಸೂಲ್, ಕಾರಿಗನೂರು ರಾಮಕೃಷ್ಣ, ಚಲವಾದಿ ಮಹಾಸಭಾದ ಮುಖಂಡರಾದ ಜಿಕೆಟಿ ಕೊಟ್ರೇಶ್, ಸುನಿಲ್ ಕುಮಾರ್, ಕೂಡ್ಲಿಗಿ ಕೊಟ್ರೇಶ್, ಜಗದೀಶ್ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು...

ಚಿಕ್ಕಬಳ್ಳಾಪುರ | ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಕಡ್ಡಾಯ: ನ್ಯಾ. ನೇರಳೆ ವೀರಭದ್ರಯ್ಯ ಭವಾನಿ

ಮಕ್ಕಳ ಸುರಕ್ಷತೆ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಆದೇಶದಂತೆ ಪ್ರತಿ ಶಾಲೆಯಲ್ಲಿಯೂ...

ಚಿಕ್ಕಬಳ್ಳಾಪುರ | ವೀರಪ್ಪ ಮೊಯ್ಲಿ ವಿರಚಿತ ‘ವಿಶ್ವಸಂಸ್ಕೃತಿಯ ಮಹಾಯಾನ’ ಪುಸ್ತಕ ಬಿಡುಗಡೆ

ವೀರಪ್ಪ ಮೊಯ್ಲಿ ಮರೆಯಲಾರದ ರಾಜಕಾರಣಿಯೂ ಹೌದು ಮತ್ತು ಲೇಖಕರೂ ಹೌದು ಎಂದು...

ಬೆಂಗಳೂರು | ಕುಡಿಯುವ ನೀರಿಗಾಗಿ ಬಂಗಾರಪ್ಪನಗರ ನಿವಾಸಿಗಳ ಪರದಾಟ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಇದೀಗ, ರಾಜರಾಜೇಶ್ವರಿ...