ವಿಜಯನಗರ | ಸ್ವಯಂಪ್ರೇರಿತ ರಕ್ತದಾನದಿಂದ ಮನುಷ್ಯ ಚೈತನ್ಯ ಪಡೆಯುತ್ತಾನೆ: ಕುಲಪತಿ ಪರಮಶಿವಮೂರ್ತಿ

Date:

Advertisements

ರಕ್ತದಾನದಿಂದ ಆರೋಗ್ಯ ಕೆಡುತ್ತದೆ, ಸುಸ್ತಾಗುತ್ತದೆ ಎನ್ನುವ ಮೌಢ್ಯಗಳು ಜನರಲ್ಲಿ ಬೇರೂರಿವೆ. ಹಾಗೆಲ್ಲ ಆಗುವುದಿಲ್ಲ. ಬದಲಾಗಿ ಸ್ವಯಂಪ್ರೇರಿತ ರಕ್ತದಾನ ಮಾಡುವುದರಿಂದ ಮನುಷ್ಯ ಹೊಸ ಚೈತನ್ಯ ಪಡೆಯುತ್ತಾನೆ. ಒಂದು ಜೀವ ಉಳಿಸಿದೆನಲ್ಲ ಎಂಬ ಸಾರ್ಥಕತೆಯ ಭಾವ ಮೂಡುತ್ತದೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ವಿ. ಪರಮಶಿವಮೂರ್ತಿ ಅಭಿಪ್ರಾಯಪಟ್ಟರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕಮಲಾಪುರ ಹಾಗೂ ಕನ್ನಡ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಗರದ ವಿದ್ಯಾರಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿನ್ನೆ (ಫೆ.14) ಏರ್ಪಡಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡ ಆಸಕ್ತ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

“ರಕ್ತದಾನದ ಕುರಿತು ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವ ಕಾರ್ಯಕ್ರಮ, ಶಿಬಿರಗಳು ಮತ್ತಷ್ಟು ಬರಬೇಕಿದೆ. ಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗುವಂತಹ ಮನಸ್ಥಿತಿ ಮೂಡಿಸಿಕೊಳ್ಳುವುದು ಇಂದಿನ ದಿನಮಾನಗಳನ್ನು ಮಹತ್ವದ್ದಾಗಿದೆ” ಎಂದರು.

Advertisements
WhatsApp Image 2025 02 14 at 9.35.37 PM

ಶಿಬಿರದಲ್ಲಿ ಕನ್ನಡ ವಿಶ್ವವಿದ್ಯಾಲಯದ ಸಿಬ್ಬಂದಿಗಳಾದ ಹರ್ಷವರ್ಧನ್, ಮೇಘನಾ, ಮೌನ ಹಾಗೂ ಯೋಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಾದ ಶ್ರೀಧರ, ರಾಜಕುಮಾರ್, ಜಿ.ಬಸವರಾಜು, ಹಸ್ತಪ್ರತಿಶಾಸ್ತ್ರ ವಿಭಾಗದ ಪ್ರವೀಣ, ಕನ್ನಡ ಭಾಷಾಧ್ಯಯನ ವಿಭಾಗದ ಬಿ.ಬಸವರಾಜು ಸೇರಿದಂತೆ 25 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

ರಕ್ತದಾನ ಮಾಡಿದ ಎಲ್ಲರಿಗೂ ಡಾ.ಯಶಸ್ವಿನಿ ಅವರು ಪ್ರಮಾಣ ಪತ್ರ ವಿತರಿಸಿದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಎಂಎಸ್‌ಪಿ‌ಎಲ್ ವಿಸ್ತರಣೆ ವಿರೋಧಿಸಿ ಜಿಲ್ಲಾ ಬಚಾವೋ ಜಾಗೃತಿ ಆಂದೋಲನ

ಮಾಹಿತಿ ಕೇಂದ್ರದ ಉಪನಿರ್ದೇಶಕಿ ಡಾ.ಡಿ.ಮೀನಾಕ್ಷಿ, ವಿದ್ಯಾರಣ್ಯ ಆಸ್ಪತ್ರೆಯ ವೈದ್ಯ ಡಾ.ರಾಜರಾಜೇಶ್ವರಿ, ಶುಶ್ರೂಷಕಿ ಸುನೀತಾಬಾಯಿ, ಕಮಲಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯೆ ಡಾ.ಯಶಸ್ವಿನಿ, ಆರೋಗ್ಯ ನಿರೀಕ್ಷಣಾಧಿಕಾರಿ ಧರ್ಮಾಜಿ, ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ನಾಗವೇಣಿ ಜಿ, ಸಮುದಾಯ ಆರೋಗ್ಯಾಧಿಕಾರಿ ಮೋಹನ್ ಕುಮಾರ್, ಚಿರಂಜೀವಿ ಆಸ್ಪತ್ರೆ ಹೊಸಪೇಟೆಯ ಪ್ಯಾರಾ ಮೆಡಿಕಲ್ ಟೆಕ್ನಿಷಿಯನ್ ರೇಖಾ ಮತ್ತು ಚೈತ್ರ, ಚಿರಂಜೀವಿ ಬ್ಲಡ್ ಬ್ಯಾಂಕ್ ಕೇಂದ್ರದ ಸೂಪರ್‌ವೈಸರ್ ವಿನಾಯಕ ಜಿ. ಮತ್ತಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X