ವಿಜಯನಗರ | ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಅಕ್ರಮ ಮರಳು ದಂಧೆ ಆರೋಪ

Date:

Advertisements

ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವಾಗಲೇ ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ವಿರುದ್ಧ ಸಾವಿರಾರು ಲೋಡುಗಟ್ಟಲೆ ಮರಳಿನ ಅಕ್ರಮ ದಂಧೆಯಲ್ಲಿ ತೊಡಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅಕ್ರಮ ಮರಳು ದಂಧೆ ನಡೆಸುತ್ತಿದ್ದು, ನದಿ ಪಾತ್ರದ ಮರಳನ್ನು ಎತ್ತಿ ನದಿಯ ಒಡಲನ್ನು ಬರಿದು ಮಾಡುವ ಮೂಲಕ ಮರಳುದಂಧೆ ಮಾಡುತ್ತಿದ್ದಾರೆ ಎಂದು ಹರಿಹರ ಶಾಸಕ ಬಿ.ಪಿ.ಹರೀಶ್ ಗಂಭೀರ ಆರೋಪ ಮಾಡಿದ್ದಾರೆ.

ಶುಕ್ರವಾರ (ಏ.19) ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಜಮೀನುವೊಂದರಲ್ಲಿ ಸಾವಿರಾರು ಲೋಡು ಮರಳು ಸಂಗ್ರಹಿಸಿರುವ ಸ್ಥಳಕ್ಕೆ ಮಾಧ್ಯಮವರನ್ನು ಕರೆದುಕೊಂಡು ಹೋಗಿ ತೋರಿಸಿದ ಬಳಿಕ ಅವರು ಮಾತನಾಡಿದರು.

Advertisements

ನದಿ ಪಾತ್ರದ ಮರಳನ್ನು ಅಕ್ರಮವಾಗಿ ತೆಗೆದು ಇಲ್ಲಿ ಸಂಗ್ರಹಿಸಿ ಸಾವಿರಾರು ಲೋಡನ್ನು ಮರಳನ್ನು ಬೇರೆ ಕಡೆ ಸಾಗಿಸಿ ಮರಳು ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಸಚಿವರು ಎ.ಬಿ.ವಿಜಯ್ ಕುಮಾರ್ ಎಂಬುವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡು   ಅವರ ಮೂಲಕ ಅಕ್ರಮ ಮರಳುದಂಧೆ ನಡೆಸುತ್ತಿದ್ದಾರೆ. ಅಲ್ಲದೆ ಇಲ್ಲಿರುವ ಗುಡ್ಡದಲ್ಲೂ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ. ಇಲ್ಲಿರುವ ಸರ್ಕಾರಿ ಜಮೀನುಗಳನ್ನು ಕಬಳಿಸುತ್ತಿದ್ದಾರೆ. ಸಾವಿರಾರು ವರ್ಷಗಳಿಂದ ಇದ್ದ ಹಳ್ಳವನ್ನು ಮುಚ್ಚಿದ್ದಾರೆ. ಬೆಂಗಳೂರಿನಲ್ಲಿರುವ  ರಾಜಕಾಲುವೆಗಳನ್ನು ಮುಚ್ಚಿದಾಗ ಹೆಚ್ಚು ಮಳೆ ಬಂದು ಹೇಗೆ ಅವಾಂತರ ಸೃಷ್ಟಿಸುತ್ತದೆಯೋ ಹಾಗೇ, ಇಲ್ಲಿಯೂ ಕೂಡ ಹಳ್ಳ ಮುಚ್ಚಿ ಅವಾಂತರವಾಗಿ ರೈತರ ತೋಟ ಇನ್ನಿತರ ಬೆಳೆ ಹಾನಿಗೆ ಕಾರಣವಾಗಿದ್ದಾರೆ ಎಂದು ಆರೋಪಿಸಿದರು.

ಇಷ್ಟೆಲ್ಲ ಕಣ್ಣೆದುರಿಗೆ ನಡೆಯುತ್ತಿದ್ದರೂ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಅಕ್ರಮ ಮರಳದಂಧೆ ತೆಡೆಯುವುದಾಗಲೀ, ಕಬಳಿಸುತ್ತಿರುವ ಜಮೀನು ಉಳಿಸುವುದಾಗಲೀ ಮಾಡುತ್ತಿಲ್ಲ. ಈ ಭಾಗದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರೇ ಅಕ್ರಮ ಮರಳು ದಂಧೆ ಮಾಡುತ್ತಿದ್ದಾರೆ ಮತ್ತು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಹಾಗೂ ಸರ್ಕಾರಿ ಜಮೀನು ಕಬಳಿಸುತ್ತಿದ್ದಾರೆ ಎಂದು ಕಳೆದ ಮೂರು ತಿಂಗಳಿನಿಂದ ರಾಜ್ಯದ ಸಂಬಂಧಪಟ್ಟ ಮೇಲಾಧಿಕಾರಿಗಳು ಮತ್ತು ಸ್ಥಳೀಯ ಅಧಿಕಾರಿಗಳಿಗೆ ಹೇಳಿದರೂ ಗಮನ ಹರಿಸಿ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಿಡಿಕಾರಿದರು.

ಒಬ್ಬ ಬಡವ ಮನೆ ಕಟ್ಟಿಕೊಳ್ಳಲು ಒಂದು ಟ್ಯಾಕ್ಟರ್ ಲೋಡು ಮರಳನ್ನು ಎತ್ತಿ ತೆಗೆದುಕೊಂಡು ಹೋದರೆ ಆತನ ವಿರುದ್ಧ ಎಫ್ ಐಆರ್ ದಾಖಲು ಮಾಡಿ, ಪೊಲೀಸ್ ಮತ್ತು ಕೋರ್ಟ್‌ಗೆ ಅಲೆದಾಡಿಸುತ್ತಾರೆ. ಅದೇ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರೇ ಅಕ್ರಮವಾಗಿ ಸಾವಿರಾರು ಲೋಡು ಮರಳು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದರೆ, ಸಚಿವರ ವಿರುದ್ಧ ಯಾವ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದರು.

ಒಂದು ಕಾಲದಲ್ಲಿ ಬಳ್ಳಾರಿ ಗಣಿಗಾರಿಕೆಗೆ  ಸದ್ದು ಹೇಗೆ ಮೆರೆಯುತ್ತಿತ್ತೋ, ಅದೇ ರೀತಿ ಹರಪನಹಳ್ಳಿ ತಾಲೂಕಿನಲ್ಲಿ ಗಣಿಗಾರಿಕೆ ಸದ್ದು ಮೆರೆಯುತ್ತಿದ್ದೆ. ನಾವು ಇನ್ಮುಂದೆ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಸಚಿವರ ಒಡೆತನದ ಬೇರೆಯವರ ಹೆಸರಿನಲ್ಲಿರುವ ಜಮೀನಿನಲ್ಲಿ ಅಕ್ರಮ ಮರಳು ಸಂಗ್ರಹಿಸಿ ಮರಳು ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಕೂಡಲೇ  ಸಂಬಂಧಪಟ್ಟ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಇಲ್ಲಿ ಸಂಗ್ರಹಿಸಿರುವ ಅಕ್ರಮ ಮರಳನ್ನು ವಶಪಡಿಸಿಕೊಂಡು ಅವರ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡು ಐದು ಪಟ್ಟು ದಂಡ ವಸೂಲಿ ಮಾಡಬೇಕು. ಸಚಿವರೇ ಇನ್ಮುಂದೆ ನಿಮ್ಮ ಆಟ ನಡೆಯುವುದಿಲ್ಲ. ಕೂಡಲೇ ನೀವು ನೈತಿಕವಾಗಿ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಈ ಭಾಗದ ರೈತರೊಂದಿಗೆ ದೊಡ್ಡ ಮಟ್ಟದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X