ವಿಜಯನಗರ | ಕನ್ನಡ ವಿವಿ; ಮೂವರು ಸಾಧಕರಿಗೆ ʼನಾಡೋಜʼ ಗೌರವ

Date:

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್, ಸಾಹಿತಿ ಕುಂ.ವೀರಭದ್ರಪ್ಪ ಮತ್ತು ಹಿಂದೂಸ್ತಾನಿ ಗಾಯಕ ಪಂಡಿತ್ ಎಂ.ವೆಂಕಟೇಶ್ ಕುಮಾರ್ ಅವರು ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯ ನೀಡುವ ‘ನಾಡೋಜ’ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

- Advertisement -

ಈ ಕುರಿತು ಕನ್ನಡ ವಿಶ್ವವಿದ್ಯಾಲಯ ತನ್ನ 33ನೇ ಘಟಿಕೋತ್ಸವದ ಪ್ರಯುಕ್ತ ಕುಲಪತಿ ಕುಲಪತಿ ಪ್ರೊ.ಡಿ.ವಿ.ಪರಮಶಿವಮೂರ್ತಿ ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ನಾಡೋಜ ಗೌರವ ಪದವಿಗೆ ಆಯ್ಕೆಯಾದ ಮೂವರ ಹೆಸರನ್ನು ಪ್ರಕಟಿಸಿದರು. ನಂತರ ಮಾತನಾಡಿ, ವಿಶ್ವವಿದ್ಯಾಲಯದ 33ನೇ ನುಡಿಹಬ್ಬ ಶುಕ್ರವಾರ ಸಂಜೆ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ನಡೆಯಲಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಾಡೋಜ ಪದವಿ ಪ್ರದಾನ ಮಾಡುವರು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕೊಟ್ಟೂರಿನವರಾದ ಕುಂ.ವೀ. ಅವರಿಗೆ ಕಳೆದ ವರ್ಷವೇ ನಾಡೋಜ ಗೌರವ ನೀಡಲು ಶಿಫಾರಸು ಮಾಡಲಾಗಿತ್ತು. ಈ ವರ್ಷ ಅದಕ್ಕೆ ಸಮ್ಮತಿ ಸಿಕ್ಕಿದೆ. ಶಿವರಾಜ ಪಾಟೀಲ್ ರಾಯಚೂರು ಜಿಲ್ಲೆಯವರು ಹಾಗೂ ವೆಂಕಟೇಶ್ ಕುಮಾ‌ರ್ ಅವರು ಸಂಡೂರು ಮೂಲದವರು. ಮೂರು ವೈವಿಧ್ಯಮಯ ಕ್ಷೇತ್ರಗಳ ಸಾಧಕರನ್ನು ಗುರುತಿಸಿದ ಹೆಮ್ಮೆ ವಿಶ್ವವಿದ್ಯಾಲಯಕ್ಕೆ ಇದೆ. ಇದುವರೆಗೆ 98 ಮಂದಿ ನಾಡೋಜ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದರು.

ಇದನ್ನೂ ಓದಿ: ವಿಜಯನಗರ | 27ನೇ ವಾರ್ಷಿಕ ವಿಚಾರ ಸಂಕಿರಣದ ಸರ್ವಾಧ್ಯಕ್ಷರಾಗಿ ಡಾ.ಡಿ ವಿ ಪರಮಶಿವಮೂರ್ತಿ ಆಯ್ಕೆ

ಪ್ರೊ.ರಾಜಾಸಾಬ್ ಎ.ಎಚ್. ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ಬೆಂಗಳೂರಿನ ರಾಮಯ್ಯ ತಾಂತ್ರಿಕ ಸಂಸ್ಥೆ, ಮತ್ತಿಕೆರೆ ಇದರ ಮುಖ್ಯ ಸಂಶೋಧನಾ ಸಲಹೆಗಾರರು ಇವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...