ವಿಜಯನಗರ | ಇತಿಹಾಸ ಬರವಣಿಗೆಯಲ್ಲಿ ವಸ್ತುನಿಷ್ಠತೆ ಬಹಳ ಮುಖ್ಯ: ಪ್ರೊ. ತಿಪ್ಪೇಸ್ವಾಮಿ

Date:

ಇತಿಹಾಸದ ಬರವಣಿಗೆ ವಸ್ತುನಿಷ್ಠತೆ ಹಾಗೂ ನೈಜತೆಯಿಂದ ಕೂಡಿರಬೇಕು. ಇತಿಹಾಸವನ್ನು ಪುರಾಣಗಳ ಆಧಾರದ ಮೇಲೆ ವೈಭವೀಕರಣ ಮಾಡುವುದು ಸರಿಯಲ್ಲ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಚೀನ ಮತ್ತು ಪ್ರಾಚ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಎಚ್ ಎಸ್ ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.

- Advertisement -

ಕನ್ನಡ ವಿಶ್ವವಿದ್ಯಾಲಯದ ಪ್ರಾಚೀನ ಇತಿಹಾಸ ಹಾಗೂ ಪುರಾತತ್ವ ಅಧ್ಯಯನ ವಿಭಾಗದಲ್ಲಿ ಹಮ್ಮಿಕೊಂಡಿದ್ದ 2025-26ನೇ ಶೈಕ್ಷಣಿಕ ಸಾಲಿನ ಹಂಪಿ ಪರಿಸರದ ಪುರಾತತ್ವ ಮತ್ತು ಇತ್ತೀಚಿನ ಶೋಧಗಳು ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಹಂಪಿಯ ಗತಕಾಲದ ಇತಿಹಾಸವನ್ನು ಕಟ್ಟಿಕೊಡುವಲ್ಲಿ ಇಲ್ಲಿನ ನೈಸರ್ಗಿಕ ಅಂಶಗಳು ಮತ್ತು ಮಾನವ ನಿರ್ಮಿತ ವಸ್ತುಗಳು ಮಹತ್ವದ ಪಾತ್ರವಹಿಸುತ್ತವೆ. ಹಂಪಿ ಪರಿಸರ ಮತ್ತು ಜನಜೀವನದ ಕುರಿತು ತಳಸ್ಪರ್ಶೀಯ ಅಧ್ಯಯನಗಳು ನಡೆಯಬೇಕು. ಹಂಪಿ ಪರಿಸರವು ಧಾರ್ಮಿಕ ಕ್ಷೇತ್ರವಾಗಿ, ತೀರ್ಥ ಕ್ಷೇತ್ರವಾಗಿ, ಪ್ರವಾಸಿ ಕ್ಷೇತ್ರವಾಗಿ ತುಂಬಾ ಪ್ರಾಚೀನವಾದ ಸ್ಥಳ. ಸಹೋದರತ್ವವನ್ನು ಜಗತ್ತಿಗೆ ಪ್ರತಿಪಾದಿಸಿದ ಕ್ಷೇತ್ರ. ರಾರ್ಬಟ್ ಸಿವಿಲ್ ಅವರ ಮರೆತು ಹೋದ ಮಹಾಸಾಮ್ರಾಜ್ಯ ಕೃತಿಯು ವಿಜಯನಗರ ಸಾಮ್ರಾಜ್ಯದ ಆಡಳಿತ, ಕಲೆ ಮತ್ತು ವಾಸ್ತುಶಿಲ್ಪವನ್ನು ಎತ್ತಿಹಿಡಿಯುತ್ತದೆ. ದೇಶದ ಸ್ವಾತಂತ್ರ್ಯ ಹಾಗೂ ಕರ್ನಾಟಕ ಏಕೀಕರಣದ ನಂತರ ಹಂಪಿ ಪ್ರದೇಶ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ”

“1986ರಲ್ಲಿ ಯುನೆಸ್ಕೋ ಹಂಪಿಯನ್ನು ವಿಶ್ವಪಾರಂಪರಿಕ ತಾಣವಾಗಿ ಘೋಷಣೆ ಮಾಡಿತು. ಹಂಪಿಯ ವಿಶ್ವಪರಂಪರೆಗೆ ಧಕ್ಕೆಯಾಗದಂತೆ, ಹಂಪಿ ಪರಿಸರದ ರಕ್ಷಣೆ ಮತ್ತು ಅದರ ಉತ್ಖನನಕ್ಕೆ ಸಂಬಂಧಿಸಿದಂತೆ ಎಎಸ್‌ಐ ಸಂಸ್ಥೆ, ಕೇಂದ್ರ ಪುರಾತತ್ವ ಇಲಾಖೆ ಮತ್ತು ರಾಜ್ಯ ಪುರಾತತ್ವ ಇಲಾಖೆಗಳು ಸಾಕಷ್ಟು ಯೋಜನೆಗಳನ್ನು ರೂಪಿಸಿವೆ. ಹಂಪಿಯ ಕುರಿತ ಸಂಶೋಧನೆಯು ಅನೇಕ ಆಯಾಮಗಳನ್ನು ಒಳಗೊಂಡಿದೆ. ಯುವ ಸಂಶೋಧಕರು ತಮ್ಮ ಸಂಶೋಧನೆಯಲ್ಲಿ ಏನು? ಎಲ್ಲಿ? ಯಾವಾಗ?, ಹೇಗೆ, ಯಾರಿಂದ ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವುದು ತುಂಬಾ ಮುಖ್ಯ. ಇತಿಹಾಸ ಎನ್ನುವುದು ಇತಿಹಾಸಕಾರನ ಆಲೋಚನೆಗಳ ಫಲ. ಹೀಗಾಗಿ ಇತಿಹಾಸ ಬರವಣಿಗೆಯು ಕಾರ್ಯಕಾರಣ ಸಂಬಂಧ ಹೊಂದಿರಬೇಕು” ಎಂದು ತಿಳಿಸಿದರು.

“ಹಂಪಿಯ ರಕ್ಷಣೆ ಮತ್ತು ಜನಜೀವನಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸವಾಲುಗಳಿವೆ. ಹಂಪಿಯ ಜನರು ಜೀವನವನ್ನು ಕಟ್ಟಿಕೊಳ್ಳುವ ಭರದಲ್ಲಿ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಂತಹ ನಿರ್ಲಕ್ಷ್ಯಕ್ಕೆ ಒಳಗಾಗಿರುವ ವಿಷಯಗಳ ಮೇಲೆ ಹೆಚ್ಚು ಅಧ್ಯಯನಗಳು ನಡೆಯಬೇಕು” ಎಂದರು.

ಚರಿತ್ರೆ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರೊ. ವಿರೂಪಾಕ್ಷಿ ಪೂಜಾರಹಳ್ಳಿ ಮಾತನಾಡಿ, “ವಿಜಯನಗರವು ಆ ಕಾಲದ ಮಹಾನಗರವಾಗಿತ್ತು. ಇಲ್ಲಿನ ವಾಸ್ತುಶಿಲ್ಪ, ಕಲೆ, ಸಾಹಿತ್ಯ ಸಂಸ್ಕೃತಿ ಮತ್ತು ಪ್ರಕೃತಿ ಕುರಿತು ಹಲವಾರು ವಿದೇಶಿ ವಿದ್ವಾಂಸರು ಹಾಡಿ ಹೊಗಳಿದ್ದಾರೆ. ಪ್ರೌಢ ದೇವರಾಯನ ಕಾಲದಲ್ಲಿ ಭಕ್ತಿ ಸಾಹಿತ್ಯ ಮತ್ತು ಶರಣ ಸಾಹಿತ್ಯಕ್ಕೆ ಆದ್ಯತೆ ನೀಡಲಾಯಿತು. ವಿಜಯನಗರ ಕಾಲದಲ್ಲಿ ಹಂಪಿ ಪರಿಸರವು ಭೇಟೆ ಹಾಗೂ ಪಶುಪಾಲನೆಗೆ ಹೆಸರುವಾಸಿಯಾಗಿತ್ತು. ವಿಜಯನಗರ ಸಾಮ್ರಾಜ್ಯವು ಅಧಿಕಾರ ವಿಕೇಂದ್ರಿಕರಣಕ್ಕೆ ಒತ್ತು ನೀಡಿತ್ತು. ಇಂದು ಹೊಸದನ್ನು ಸಂಶೋಧಿಸುವ ಭರದಲ್ಲಿ ಸಮಾಜದಲ್ಲಿ ದ್ವಂದ್ವ ಸೃಷ್ಠಿಸಬಾರದು” ಎಂದರು.

ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಎಸ್.ವೈ. ಸೋಮಶೇಖರ್ ಮಾತನಾಡಿ, “ವಿಜಯನಗರ ಅರಸರು ಪರಿಸರ ಪ್ರಜ್ಞೆಯುಳ್ಳವರಾಗಿದ್ದರು. ಸಾಮ್ರಾಜ್ಯ ಕಟ್ಟುವಲ್ಲಿ ಜಲಮೂಲಗಳ ರಕ್ಷಣೆ ಮತ್ತು ಬಳಕೆಯು ತುಂಬಾ ಮುಖ್ಯವಾಗುತ್ತದೆ. ಜೀವಜಲದ ಬಳಕೆಗಾಗಿ ಅರಸರು ತುರ್ತು ಆಣೆಕಟ್ಟು ನಿರ್ಮಾಣ, ಕಮಲಾಪುರ ಕೆರೆ ನಿರ್ಮಾಣ, ಕಾಲುವೆಗಳ ನಿರ್ಮಾಣದ ಮೂಲಕ ಜನಜಾನುವಾರುಗಳಿಗೆ ಕೃಷಿ ಕಾರ್ಯಗಳಿಗೆ ನದಿಯ ನೀರನ್ನು ವರ್ಷಪೂರ್ತಿ ಒದಗಿಸಲು ತುಂಬಾ ವ್ಯವಸ್ಥಿತವಾದ ಮತ್ತು ಪರಿಸರ ಸ್ನೇಹಿಯಾದ ಯೋಜನೆಯನ್ನು ರೂಪಿಸಿದ್ದರು” ಎಂದರು.

ಇದನ್ನೂ ಓದಿ: ವಿಜಯನಗರ | ಬೀದಿ ನಾಯಿ ದಾಳಿ; 2 ವರ್ಷದ ಮಗು ಗಂಭೀರ

ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ವಾಸುದೇವ ಬಡಿಗೇರ ಮಾತನಾಡಿ, ಮಧ್ಯಕಾಲೀನ ಯುಗದಲ್ಲಿ ಉತ್ತರ ಭಾರತದಲ್ಲಿ ಫತೇಪುರ ಸಿಕ್ರಿ ಮತ್ತು ದಕ್ಷಿಣ ಭಾರತದಲ್ಲಿ ಹಂಪಿ ತುಂಬಾ ವ್ಯವಸ್ಥಿತವಾದ ನಗರಗಳು ಎಂದು ಪ್ರಸಿದ್ಧಿ ಪಡೆದಿದ್ದವು. ಹಂಪಿ ಎರಡು ಸಂಸ್ಕೃತಿಗಳ ಸಮ್ಮಿಲನ. ಅಲಕ್ಷಿತ ಮತ್ತು ನಿರ್ಲಕ್ಷಿತ ಸಮುದಾಯಗಳ ಬಗ್ಗೆ ಹಾಗೂ ಸ್ಥಳನಾಮಗಳ ಬಗ್ಗೆ ಅಧ್ಯಯನಗಳು ನಡೆಯಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ.ರಮೇಶ ನಾಯ್ಕ, ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರು, ಅಧ್ಯಾಪಕರು, ಸಂಶೋಧನಾರ್ಥಿಗಳು, ವಾಸುದೇವ ಬಸವರಾಜ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...