ವಿಜಯನಗರ | ಪಹಲ್ಗಾಮ್‌ನ ಉಗ್ರ ದಾಳಿ; ಡಿವೈಎಫ್‌ಐ ಆಕ್ರೋಶ

Date:

ಕಾಶ್ಮೀರದ ಪಹಲ್ಗಾಮ್ ಸಮೀಪದ ಪ್ರವಾಸಿತಾಣ ಬೈಸರನ್ ಕಣಿವೆಯಲ್ಲಿ ಮಂಗಳವಾರ ಕನ್ನಡಿಗರಾದ ಮಂಜುನಾಥ್ ಹಾಗೂ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ತೀವ್ರವಾಗಿ ಖಂಡಿಸಿತು.

- Advertisement -

“ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿಯಾದುದು. ಅಮಾಯಕರ ಮೇಲೆ ಹೀನ ದಾಳಿಗೈದು ಅಮೂಲ್ಯ ಜೀವಗಳನ್ನು ಕೊಲೆಗೈದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಕೇಂದ್ರ ಸರಕಾರ ಕ್ರಮವಹಿಸಬೇಕು. ಜಮ್ಮು ಕಾಶ್ಮೀರ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಷ್ಟ್ರದ ಭದ್ರತೆ ಅತ್ಯಂತ ಪ್ರಮುಖವಾಗಿದೆ. ಕೇಂದ್ರ ಸರ್ಕಾರ ‘ಜಮ್ಮು ಕಾಶ್ಮೀರದಲ್ಲಿ ಸಹಜ ಸ್ಥಿತಿಯಿದೆ’ ಎಂದು ಹೇಳುತ್ತಲೇಯಿದೆಯಾದರೂ ವಾಸ್ತವ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳು, ವಲಸೆ ಕಾರ್ಮಿಕರು ಹಾಗೂ ಪ್ರವಾಸಿಗರ ಮೇಲೆ ದಾಳಿಗಳು ನಡೆಯುತ್ತಿವೆ. ಆದ್ದರಿಂದ ಕೇಂದ್ರ ಈಗಲಾದರೂ ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿ ನೆಲೆಸಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯ ಸ್ಥಾಪಿಸಲು ಸಾಧ್ಯವಿಲ್ಲ. ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ ಪಿಡುಗಿನ ವಿರುದ್ಧ ದೇಶದ ಜನತೆ ಒಟ್ಟಾಗಿ ನಿಲ್ಲುವುದು ಅಗತ್ಯವಿದೆ. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಕೇಂದ್ರ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ” ಎಂದು ಸಂಘಟನೆ ಕರೆ ನೀಡಿದೆ.

ಇದನ್ನೂ ಓದಿ: ವಿಜಯನಗರ | ವಿದ್ಯುತ್‌ ತಂತಿಯಿಂದ ಬೆಂಕಿ; ನಾಲ್ಕು ರಾಸು, ಹುಲ್ಲಿನ ಬಣವೆ ಭಸ್ಮ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...