ವಿಜಯನಗರ | ಬೆಲೆ ಕುಸಿತ; ಈರುಳ್ಳಿ, ಟೊಮೆಟೊ ರಸ್ತೆಗೆ ಚೆಲ್ಲಿ ರೈತರ ಪ್ರತಿಭಟನೆ

Date:

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕುಸಿತತ ಪರಿಣಾಮ ಕ್ರೋಶಗೊಂಡ ರೈತರು ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಭಾರೀ ಪ್ರಮಾಣದ ಟೊಮೆಟೊ, ಈರುಳ್ಳಿಯನ್ನು ರಸ್ತೆಗೆ ಸುರಿದು ಪ್ರತಿಭಟಿಸಿದ್ದು, ಸೂಕ್ತ ಪರಿಹಾರ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಜಿ ಸಂತೋಷ ಕುಮಾರ್ ಅವರಿಗೆ ಮನವಿಪತ್ರ ಸಲ್ಲಿಸಿದರು.

- Advertisement -

ರೈತ ಗುರುಲಿಂಗಪ್ಪ ಮಾತನಾಡಿ, “ಒಂದು ಎಕರೆಯಲ್ಲಿ ಟೊಮೆಟೊ ಬೆಳೆಯಲು ₹35ರಿಂದ ₹40 ಸಾವಿರ ಖರ್ಚು ತಗುಲುತ್ತದೆ. ಸಂತೆಗಳಲ್ಲಿ ₹5ಕ್ಕೆ 2 ಕೆಜಿ ಟೊಮೆಟೊ ಮಾರಲಾಗುತ್ತದೆ. ಇದರಿಂದ ಬೆಳೆ ನಿರ್ವಹಣೆ, ಕೂಲಿ ವೆಚ್ಚವೂ ಸಿಗುತ್ತಿಲ್ಲ” ಎಂದು ಅಳಲು ತೊಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್ ಎಂ ಸಿದ್ದೇಶ ಮಾತನಾಡಿ, “ವಿಜಯನಗರ ಜಿಲ್ಲೆ ಸೇರಿ ಉತ್ತರ ಕರ್ನಾಟಕದಲ್ಲಿ ಹಿಂಗಾರು ಋತುವಿನಲ್ಲಿ ಈರುಳ್ಳಿ ಉತ್ತಮ ಇಳುವರಿ ಬಂದಿದೆ. ಬೆಂಗಳೂರು ಮಾರುಕಟ್ಟೆಯಲ್ಲಿ ನಮ್ಮ ಭಾಗದ ಫಸಲಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. ಪ್ರತಿ ಕ್ವಿಂಟಲ್‌ ಈರುಳ್ಳಿ ಉತ್ಪಾದನಾ ವೆಚ್ಚ ₹2,000ದಿಂದ ₹2,500 ಇದೆ. ಆದರೆ, ಮಾರುಕಟ್ಟೆಯಲ್ಲಿ ಕ್ವಿಂಟಲ್ ಈರುಳ್ಳಿ ದರ ₹1,000ದಿಂದ ₹1,200ಕ್ಕೆ ಕುಸಿದಿದೆ. ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ತೆರೆದು ಈರುಳ್ಳಿಯನ್ನು ಕ್ವಿಂಟಲ್‌ಗೆ ₹4,000ದಂತೆ ಖರೀದಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಮದ್ರಸಾ ಪಬ್ಲಿಕ್ ಪರೀಕ್ಷೆ; ಮರು ಮೌಲ್ಯಮಾಪನದಲ್ಲಿ ಹಫ್ಸಾ ನಾಹಿದ್‌ಗೆ ಶೇ.99 ಅಂಕ

ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಯಾತದ ಪ್ರಭು, ರೈತರಾದ ಮೂಲಿಮನಿ ಶರಣಪ್ಪ, ಅಂಗಡಿ ನಾಗರಾಜ, ಮುದ್ದೇಗೌಡ್ರ ಬಸವರಾಜ, ಮಂಜುನಾಥ ಯಾಟಿ, ಮಂಜುನಾಥ, ಎಸ್‌ ಎಂ ಪಕ್ಕೀರಯ್ಯ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...