ಮಾಹಿತಿ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಯವರು ಸುಮಾರು 30 ವರ್ಷಗಳ ಕಾಲ ಕನ್ನಡ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಜುಲೈ 31ರಂದು ಸೇವೆಯಿಂದ ನಿವೃತ್ತಿ ಹೊಂದಿದ ಇವರಿಗೆ ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಗೌರವಪೂರ್ವಕ ಬೀಳ್ಕೊಡುಗೆ ಸಮಾರಂಭ ನಡೆಯಿತು.
2005ರಲ್ಲಿ ಮಾಹಿತಿಹಕ್ಕು ಅಧಿನಿಯಮ ನೋಡಲ್ ಅಧಿಕಾರಿಯಾಗಿ, ಅಸ್ಮಿತ ಸಂಶೋಧನಾ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ವಾರ್ಡನ್ ಆಗಿ, ಕಾರ್ಯನಿರತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ನಿವಾರಣೆ, ನಿಷೇಧ ಸಮಿತಿಯ ಸದಸ್ಯರಾಗಿ, ಅಧ್ಯಕ್ಷರಾಗಿ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸಿದ್ದರು.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ ಸರಿಪಡಿಸುವಂತೆ ಡಿವೈಎಫ್ಐ ಆಗ್ರಹ
ವಿಶ್ವವಿದ್ಯಾಲಯದ ಕುಲಪತಿಗಳು ಡಾ. ಡಿ ವಿ ಪರಮಶಿವಮೂರ್ತಿ, ಕುಲಸಚಿವ ಡಾ.ವಿಜಯ್ ಪೂಣಚ್ಚ ತಂಬಂಡ, ಉಪಕುಲಸಚಿವ ಬಿ. ಗುರುಬಸಪ್ಪ, ಸಹಾಯಕ ನಿರ್ದೇಶಕಿ ಡಿ. ಪ್ರಭಾ, ಸಿಸ್ಟಂ ಅನಾಲಿಸ್ಟ್ ಶಕುಂತಲಾ ಚೌಡನಾಯ್ಕ ಸೇರಿದಂತೆ ಇತರರು ಡಿ ಮೀನಾಕ್ಷಿಯವರಿಗೆ ಶುಭ ಹಾರೈಸಿದರು.