ವಿಜಯನಗರ | ವಿವಿಧ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗೆ ಎಸ್‌ಎಫ್‌ಐ ಆಗ್ರಹ

Date:

ವಿಜಯನಗರ ಜಿಲ್ಲೆ ಹೊಸದಾಗಿ ರಚನೆಯಾದ ಮೇಲೆ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ವಿವಿಧ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗಾಗಿ ಸ್ಟೂಡೆಂಟ್‌ ಫೆಡರೇಷನ್‌ ಆಫ್‌ ಇಂಡಿಯಾ (ಎಸ್‌ಎಫ್‌ಐ) ಆಗ್ರಹಿಸಿತು.

- Advertisement -

“ವಿಜಯನಗರ ಜಿಲ್ಲೆಯಲ್ಲಿ ಸುಮೂರು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶೈಕ್ಷಣಿಕ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅಗತ್ಯ ಕಾಲೇಜುಗಳು ಇಲ್ಲದೇ ಹೊರ ರಾಜ್ಯ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ವ್ಯಾಸಂಗಕ್ಕಾಗಿ ವಲಸೆ ಹೋಗುತಿದ್ದಾರೆ. ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ವ್ಯವಸ್ಥೆಗಳು ಮೂಲ ಸೌಕರ್ಯದಿಂದ ಕುಂಠಿತಗೊಂಡಿವೆ. ವಿಷಯವಾರು ಶಿಕ್ಷಕರ ಕೊರತೆ, ಕುಡಿಯುವ ನೀರು, ಶೌಚಾಲಯ, ಆವರಣಗಳಿಲ್ಲ, ಕಟ್ಟಡಗಳ ತೀವ್ರ ದುರಸ್ಥಿ ಸೇರಿ ಹತ್ತಾರು ಸಮಸ್ಯೆಗಳನ್ನು ಜಿಲ್ಲೆ ಎದುರಿಸುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಶಾಲೆಗಳು ಎಲ್‌ಕೆಜಿ ಮತ್ತು ಪ್ರೌಢ ಶಿಕ್ಷಣದವರೆಗೆ ವಂತಿಕೆ ಹೆಸರಲ್ಲಿ ವಿದ್ಯಾರ್ಥಿ ಪೋಷಕರಿಂದ ಹಣ ವಸೂಲಿಗೆ ನಿಂತಿವೆ ಇದನ್ನು ಸರ್ಕಾರ ತಡೆಯುವುದು ಜರೂರಿದೆ” ಎಂದು ಸಂಘಟನೆಯ ಮುಖಂಡರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದ ಬಡರೈತ, ದಲಿತ ಮಕ್ಕಳು ಶೇ.50ರಷ್ಟು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅತಿಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಗಳು ಇರುವುದರಿಂದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಹೆಣಗಾಡುತ್ತಿದ್ದಾರೆ. ಜಿಲ್ಲೆಯ ಶೈಕ್ಷಣಿಕ ಬೆಳವಣಿಗೆಗಾಗಿ ಮತ್ತು ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಈ ಹಿಂದೆ ಮುಖ್ಯ ಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಿದ್ದೇವೆ. ಅದರ ಭಾಗವಾಗಿ ಇಂದಿರಾ ಕ್ಯಾಂಟೀನ್ ಮತ್ತು ಸರ್ಕಾರಿ ಕಾನೂನು ಪದವಿ ಕಾಲೇಜು ಮುಂಜೂರು ಮಾಡಲಾಗಿದೆ. ಇದಕ್ಕೆ ಎಸ್‌ಎಫ್‌ಐ ಸಂಘಟನೆಯು ಸ್ವಾಗತಿಸುತ್ತಿದೆ. ಆದರೆ ಅದನ್ನು ಅತೀ ಬೇಗನೆ ಹೊಸಪೇಟೆ ನಗರದಲ್ಲಿ ಆರಂಭಿಸಬೇಕು ಮತ್ತು ಇನ್ನುಳಿದಂತ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ಜಿಲ್ಲಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವಂತ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಬೇಕು” ಎಂದು ಎಸ್ಎಫ್ಐ ಹೊಸಪೇಟೆ ತಾಲೂಕು ಸಮಿತಿ ಒತ್ತಾಯಿಸಿತು.

ಈ ಸುದ್ದಿ ಓದಿದ್ದೀರಾ?: ವಿಜಯನಗರ | ಜನಸ್ನೇಹಿ ಕೇಂದ್ರಗಳ ಸೇವಾ ಶುಲ್ಕ ಇಳಿಸುವಂತೆ ಡಿವೈಎಫ್‌ಐ ಮನವಿ

“ಹೊಸಪೇಟೆ ನಗರದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗುತ್ತಿದೆ ಹಾಗಾಗಿ ತಕ್ಷಣವೇ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ನಗರದಲ್ಲಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ಕಾಲೇಜು ಮತ್ತು ಕ್ರಿಡಾಂಗಣ ಪಕ್ಕ ಇಂದಿರಾ ಕ್ಯಾಂಟೀನ್ ಅರಂಭಿಸಬೇಕು. ಸರ್ಕಾರಿ ಪದವಿ ಕಾನೂನು ಕಾಲೇಜು, ಮೆಡಿಕಲ್, ಇಂಜಿನಿಯರಿಂಗ್, ಬಿ.ಎಡ್, ಬಿಪಿ.ಎಡ್, ಸ್ನಾತಕೋತ್ತರ ಪದವಿ ಕಾಲೇಜ್ ಶೀಘ್ರದಲ್ಲಿ ಪ್ರಾರಂಭಿಸಬೇಕು” ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...