ವಿಜಯನಗರ | ಕಾಲೇಜು ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಎಸ್‌ಎಫ್‌ಐ ಒತ್ತಾಯ

Date:

ವಿಜಯನಗರದ ಕಮಲಾಪುರ ಸುತ್ತ ಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಹಾಗೂ ಪ್ರತಿ ಕಾಲೇಜು ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಭಾರತ ವಿದ್ಯಾರ್ಥಿ ಫೆಡರೇಷನ್ ವಿಜಯನಗರ ತಾಲೂಕು ಸಮಿತಿ ಒತ್ತಾಯಿಸಿದೆ.

- Advertisement -

ಕಮಲಾಪುರದ ಪುರಸಭೆಯ ಮುಖ್ಯಧಿಕಾರಿ ಡಿ ಈರಣ್ಣ, ಬಸ್ ನಿಲ್ದಾಣ ಅಧಿಕಾರಿಗಳು ಪಿ.ವಾಸುದೇವ್ ಹಾಗೂ ಕೆಡಿಪಿ ಮೆಂಬರ್ ಕಾಳಪ್ಪ ಅವರಿಗೆ ಎಸ್‌ಎಫ್‌ಐ ಮನವಿ ಪತ್ರ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿನ ಬೆಲೆಗಾಗಿ ಮುಂದುವರೆದ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ...

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ...

ಎಸ್ಎಪ್ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶಿವರೆಡ್ಡಿ ಮಾತನಾಡಿ, “ಕಮಲಾಪುರುದ ಸುತ್ತು ಮುತ್ತಲಿನ ಗ್ರಾಮೀಣ ಪ್ರದೇಶದಿಂದ ಅತಿ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಕಮಲಾಪುರದ ಕಾಲೇಜಿಗೆ ಬರುತ್ತಾರೆ. ಆದರೆ, ಸರಿಯಾದ ಸಮಯಕ್ಕೆ ಬಸ್ ಇಲ್ಲದ ಕಾರಣಕ್ಕೆ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿದೆ ಹಾಗಾಗಿ ಅದಕ್ಕೆ ಅವಕಾಶ ಕೊಡದೆ ಗ್ರಾಮೀಣ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಇಲ್ಲದ ಹಳ್ಳಿಗಳಿಗೆ ಕೂಡುಲೆ ಬಸ್ ಬಿಡಬೇಕು” ಎಂದು ಆಗ್ರಹಿಸಿದರು.

ಜಿಲ್ಲಾ ಸಹಕಾರ್ಯದರ್ಶಿ ಕೆ.ಎ. ಪವನ್ ಕುಮಾರ್ ಮಾತನಾಡಿ, “ಕಾಲೇಜು ಇಲ್ಲದ ಸಮಯದಲ್ಲಿ ಪುಂಡ ಪೋಕರಿಗಳು ಕಾಲೇಜಿನ ಆವರಣದಲ್ಲಿ ಡ್ರಿಂಕ್ಸ್, ಅನೈತಿಕ ಚಟುವಟಿಕೆಗಳು, ಹಾಗೂ ಕಾಲೇಜು ಗೋಡೆಗಳ ಮೇಲೆ ಅಶ್ಲೀಲ ಬರೆಯುತ್ತಿದ್ದಾರೆ. ಹಾಗಾಗಿ ಇದಕ್ಕೆಲ್ಲಾ ಕಡಿವಣ ಹಾಕವಂತೆ ಎಸ್‌ಎಫ್‌ಐ ಒತ್ತಾಯಿಸುತ್ತದೆ.. ಅಲ್ಲದೇ ಶಾಲಾ-ಕಾಲೇಜು ಒಂದೇ ಆವರಣದಲ್ಲಿ ಇರವುದರಿಂದ ಕಾವಲುಗಾರನನ್ನು ನೇಮಕ ಮಾಡಬೇಕು. ಕಾಲೇಜಿನ ಆವರಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ವಿಜಯನಗರ | ಮಕ್ಕಳ ಸಾಹಿತ್ಯಕ್ಕೆ ಅಂತರಾಳದ ಅಭಿವ್ಯಕ್ತಿ ಅತ್ಯಗತ್ಯ: ಡಾ. ಕೆ ಶಿವಲಿಂಗಪ್ಪ ಹಂದಿಹಾಳು

ಈ ವೇಳೆ ಕಾಲೇಜು ಘಟಕದ ಅಧ್ಯಕ್ಷೆ ಹರಿಪ್ರಿಯಾ, ಕಾರ್ಯದರ್ಶಿ ದುರ್ಗೇಶ್, ಉಪಾಧ್ಯಕ್ಷ ಸುಭಾಷ್, ಸುಲೋಚನ, ಮೋಹಿನಿ ಶ್ರೀನಿಧಿ, ಸಹಕಾರ್ಯದರ್ಶಿ ಕೇಶವ, ರಮೇಶ್, ಅಜಯ, ಸದಸ್ಯ ವೀರೇಶ್, ನಾಗರಾಜ್, ಮಾರೆಮ್ಮ ಹಾಗೂ ನುರೂರು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...