ವಿಜಯನಗರ | ನಂದಿನಿ ಉಳಿಸುವಂತೆ ರಾಜ್ಯ ರೈತ ಸಂಘ ಆಗ್ರಹ

Date:

  • ನಂದಿನಿ ಬ್ರ್ಯಾಂಡ್ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿ
  • ಹೈನುಗಾರಿಕೆ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗಗಳು ಸೃಷ್ಟಿ

ರಾಜ್ಯದ ನಂದಿನಿ ಹಾಲು ಮತ್ತು ಉತ್ಪನ್ನಗಳನ್ನು ನಾಶ ಮಾಡಲು ಗುಜರಾತ್ ಮೂಲದ ಅಮುಲ್ ಉತ್ಪನ್ನಗಳನ್ನು ರಾಜ್ಯದಲ್ಲಿ ಮುಕ್ತ ಮಾರುಕಟ್ಟೆಗೆ ಬಿಟ್ಟಿರುವ ಬಿಜೆಪಿ ಸರ್ಕಾರದ ಹುನ್ನಾರವನ್ನು ಖಂಡಿಸುತ್ತೇವೆ ಎಂದು ರಾಜ್ಯ ರೈತ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ʼನಂದಿನಿ ಉಳಿಸಿʼ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

“ಸಹಕಾರಿ ಕ್ಷೇತ್ರದಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದು, ನಂದಿನಿ ಬ್ರ್ಯಾಂಡ್ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ರಾಜ್ಯದ ರೈತಾಪಿ ಅದರಲ್ಲೂ ಸಣ್ಣ, ಅತಿ ಸಣ್ಣ ಮತ್ತು ಕೃಷಿ ಕಾರ್ಮಿಕರು, ಹೈನುಗಾರಿಕೆಯನ್ನು ಅವಲಂಬಿಸಿ ಜೀವನವನ್ನು ಕಟ್ಟಿಕೊಳ್ಳುತ್ತಿದ್ದಾರೆ. ಇದರಿಂದ ಈ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗಗಳೂ ಕೂಡ ಸೃಷ್ಟಿಯಾಗಿದೆ” ಎಂದರು.

“ಕೇಂದ್ರ ಮತ್ತು ರಾಜ್ಯ ಸರ್ಕಾರ ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಹಾಲಿನ ಉತ್ಪನ್ನವನ್ನು ರಾಜ್ಯದ ಮಾರುಕಟ್ಟೆಗೆ ತಂದು, ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನಾಶ ಮಾಡಲು ಹೊರಟಿದೆ. ಹಾಗಾಗಿ ಈ ನಡೆಯನ್ನು ತೀರ್ವವಾಗಿ ಖಂಡಿಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಮುಲ್‌ ಹಾಲು ಮತ್ತು ಅಮುಲ್‌ ಉತ್ಪನ್ನಗಳ ಮಾರಾಟವನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆದೇಶಿಸಬೇಕು. ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಒತ್ತುನೀಡಿ ರಾಜ್ಯದ ಹಿತಾಶಕ್ತಿಯನ್ನು ಕಾಪಾಡಿಕೊಳ್ಳಲು ಅನುವು ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರೇಯಸಿಯ ಹುಟ್ಟುಹಬ್ಬ ಆಚರಿಸಿ ಕೊಲೆ ಮಾಡಿದ ಪ್ರಿಯಕರ

“ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಯನ್ನು ಹಿಂಪಡೆದಿದ್ದು, ರಾಜ್ಯ ಸರ್ಕಾರ ಈವರೆಗೂ ಹಿಂಪಡೆದಿಲ್ಲ. ಆದ್ದರಿಂದ ಈ ಸಂಬಂಧ ಮುಂದೆ ಬರುವ ಸರ್ಕಾರಗಳ ಮಧ್ಯೆ ಪ್ರವೇಶಿಸಿ ರೈತರ ಹಿತ ಕಾಪಾಡಬೇಕು. ಜೊತೆಗೆ ರಾಜ್ಯದ ಹೈನುಗಾರಿಕೆ ಉಳಿಸಬೇಕು” ಎಂದು ಆಗ್ರಹಿಸಿದರು.

ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಿ ಗೋಣಿಬಸಪ್ಪ, ಅಧ್ಯಕ್ಷ ಜಿ ಸೋಮಶೇಖರ, ಮಮತ, ಜಯಮ್ಮ, ಯಶೋಧ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...