ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಗ್ರಾಮಾಡಳಿತ ಅಧಿಕಾರಿಗಳು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆದಿದೆ. ಜನನ, ಮರಣ, ಜಾತಿ, ಅದಾಯ ಪ್ರಮಾಣ ಪತ್ರ ಸಹಿತ ಹಲವು ಸೇವೆಗಳು ಸ್ಥಗಿತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.
ರಾಜ್ಯ ಗ್ರಾಮಾಡಳಿತ ಅಧಿಕಾರಿಗಳ ಕೇಂದ್ರ ಸಂಘದ ಹೊಸಪೇಟೆ ತಾಲೂಕು ಘಟಕದ ಅಧ್ಯಕ್ಷ ರವಿಚಂದ್ರ ಎಸ್. ಗೊಗ್ಗಿ ಮಾಯನಾಡಿ, “2024ರ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 3ರವರೆಗೆ ಇದೇ ರೀತಿ ಮುಷ್ಕರ ನಡೆಸಿದ್ದೆವು. ಸರ್ಕಾರ ತಾನು ನೀಡಿದ ಭರವಸೆ ಈಡೇರಿಸಿಲ್ಲ. ಹೀಗಾಗಿ ರಾಜ್ಯ ಸಂಘದ ಕರೆಯಂತೆ ಎರಡನೇ ಹಂತದ ಮುಷ್ಕರ ಆರಂಭಿಸಿದ್ದೇವೆ. ಎಲ್ಲರೂ ಒಂದು ತಿಂಗಳ ಸಾಮೂಹಿಕ ರಜೆಗೆ ಅರ್ಜಿ ಹಾಕಿದ್ದೇವೆ. ಸರ್ಕಾರ ಶೀಘ್ರ ಬೇಡಿಕೆ ಈಡೇರಿಸುವ ವಿಶ್ವಾಸ ಇದೆ. ಸರ್ಕಾರ ಬೇಗ ಸ್ಪಂದಿಸಿದರೆ ಜನರಿಗೆ ತೊಂದರೆಯಾಗುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಶೀಘ್ರ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ?: ವಿಜಯನಗರ | ಬಸಮ್ಮ ತುಳಜಪ್ಪ ಉಪಳಾಂವಕರ ಸ್ಮಾರಕ ಸಾಹಿತ್ಯ ಕೃತಿ ಪ್ರಶಸ್ತಿಗೆ ಡಾ. ಅಮರೇಶ ಯತಗಲ್ ಆಯ್ಕೆ
ಮುಷ್ಕರದಲ್ಲಿ ಸಂಘದ ಅಧ್ಯಕ್ಷ ರವಿಚಂದ್ರ ಜತೆಗೆ ಪ್ರಧಾನ ಕಾರ್ಯದರ್ಶಿ ಜಯಪ್ರತಾಪ್, ಉಪಾಧ್ಯಕ್ಷ ಅನಿಲ್ ಕುಮಾರ್, ಖಜಾಂಚಿ ಅಶೋಕ್ ಮೇಟಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
