ವಿಜಯನಗರ | ಸ್ಪರ್ಧಾತ್ಮಕ ಪರೀಕ್ಷೆಗಳ ಓದು ನಿರಂತರವಾಗಿರಲಿ: ಡಾ ಪರಮಶಿವಮೂರ್ತಿ

Date:

Advertisements

ಜ್ಞಾನವನ್ನು ಗಳಿಸುವುದರ ಜೊತೆಗೆ ಪಡೆದುಕೊಂಡ ಜ್ಞಾನವನ್ನು ಎಲ್ಲರ ಮುಂದೆ ಹೇಗೆ ಮಂಡಿಸುತ್ತೇವೆ ಎಂಬುದು ಮುಖ್ಯ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ, ಓದು ನಿರಂತರವಾಗಿರಬೇಕು ಮತ್ತು ಹೆಚ್ಚು ಶ್ರಮವಹಿಸಬೇಕು ಎಂದು ವಿಜಯನಗರದ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕನ್ನಡ ವಿವಿಯ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ವತಿಯಿಂದ ಪಂಪ ಸಭಾಂಗಣದಲ್ಲಿ ಆಯೋಜಿಸಿರುವ 21 ದಿನಗಳ ಯುಜಿಸಿ ನೆಟ್ ಮತ್ತು ಕೆ-ಸೆಟ್ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದ ಅವರು, “ಚಿಕ್ಕವಯಸ್ಸಿನಲ್ಲೇ ಉನ್ನತ ಸ್ಥಾನಪಡೆಯುವ ಬಯಕೆ ಮೊಳೆಯಲಿ. ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ” ಎಂದು ತಿಳಿಸಿದರು.

ಕುಲಸಚಿವ ಡಾ. ವಿಜಯ್ ಪೂಣಚ್ಚ ತಂಬಂಡ ಮಾತನಾಡಿ, “ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರಗಳು ಶೈಕ್ಷಣಿಕ ವಾತವರಣವನ್ನು ರೂಪಿಸುತ್ತವೆ. ಇದರ ಸದುಪಯೋಗಪಡಿಸಿಕೊಳ್ಳಿ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲಿಲ್ಲ ಎಂದ ಮಾತ್ರಕ್ಕೆ ಜೀವನದಲ್ಲಿ ಸೋತೆವೆಂದು ಅಲ್ಲ, ಅದರ ಆಚೆಗೆ ನಿಮ್ಮಲ್ಲಿರುವ ಜ್ಞಾನವನ್ನು ಬಳಸಿಕೊಂಡು ಬದುಕು ಕಟ್ಟಿಕೊಳ್ಳಿ” ಎಂದರು.

Advertisements

ಶಿರಹಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಅನುಷಾ ಎಚ್ ಸಿ ಮಾತನಾಡಿ, “ವಿಶ್ವವಿದ್ಯಾಲಯಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ತರಬೇತಿಗಳನ್ನು ನಡೆಸುವುದು ತುಂಬಾ ವಿರಳ. ಆದರೆ ಕನ್ನಡ ವಿಶ್ವವಿದ್ಯಾಲಯವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒತ್ತುಕೊಟ್ಟು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿರುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತುಂಬಾ ಮಹತ್ವದ ಕಾರ್ಯ. ದುಡಿಮೆಯಿಲ್ಲದ ಯಾವುದೇ ಪದವಿಗಳಿಗೆ ಬೆಲೆಯಿಲ್ಲ. ಈ ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ಪದವಿಗಳ ಜೊತೆಗೆ ಇಂತಹ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಂಡುವುದರಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲಲು ಸಾಧ್ಯ” ಎಂದರು.

ಇದನ್ನೂ ಓದಿ: ವಿಜಯನಗರ | ಹೃದಯಾಘಾತದಿಂದ ಪೊಲೀಸ್‌ ಪೇದೆ ಸಾವು

ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಯರ‍್ರಿಸ್ವಾಮಿ ಮಾತನಾಡಿ, “ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಗುಣವನ್ನು ಬೆಳಸುತ್ತವೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಜೊತೆಗೆ ವೃತ್ತಿ ಜೀವನವನ್ನು ಚೆನ್ನಾಗಿ ನಿಭಾಯಿಸಲು ಸಹಾಯಕವಾಗುತ್ತವೆ” ಎಂದರು.

ಡಾ. ವೆಂಕಟಗಿರಿ ದಳವಾಯಿ ಪ್ರಾಸ್ತಾವಿಕವಾಗಿ ಮಾತನಾಡಿ, “ಕಳೆದ ಸಾಲಿನಲ್ಲಿ 17 ದಿನಗಳ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದೆವು. ಈ ಬಾರಿ 21 ದಿನಗಳ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ನೆಟ್-ಸೆಟ್ ಪರೀಕ್ಷೆಯ ವಿದ್ವಾಂಸರು ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾದ ವ್ಯಕ್ತಿಗಳು 24 ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ” ಎಂದರು.

ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಶೋಧನಾರ್ಥಿಗಳು ಮತ್ತು ವಿದ್ಯಾರ್ಥಿಗಳು ಹಾಗೂ ಇತರರು ಕಾರ್ಯಾಗಾರದಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X