ವಿಜಯನಗರ | ರೈಲಿಗೆ ಸಿಲುಕುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ರೈಲ್ವೆ ಪೊಲೀಸ್

Date:

  • ವೆಬ್‌ಸೈಟ್‌ನಲ್ಲಿ ವಿಡಿಯೋ ಹಂಚಿಕೊಂಡ ರೈಲ್ವೆ ಇಲಾಖೆ
  • ಪೊಲೀಸ್ ಸಮಯಪ್ರಜ್ಞೆಯಿಂದ ಬದುಕುಳಿದ ಪ್ರಯಾಣಿಕ

ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಪ್ರಯತ್ನಿಸುತ್ತಿದ್ದ ಪ್ರಯಾಣಿಕನೊಬ್ಬ ನಿಯಂತ್ರಣ ತಪ್ಪಿ ರೈಲಿನಡಿ ಸಿಲುಕುವ ವೇಳೆ ರೈಲ್ವೆ ಪೊಲೀಸ್ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಯುವಕನ ಪ್ರಾಣ ಉಳಿದಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಈ ಘಟನೆಯ ವಿಡಿಯೋವನ್ನು ರೈಲ್ವೆ ಇಲಾಖೆಯು ತನ್ನ ವೆಬ್‌ಸೈಟ್‌ನಲ್ಲಿ ಹಂಚಿಕೊಂಡಿದೆ. ಗದಗ ಮೂಲದ ಯುವಕ ಹೊಸಪೇಟೆಯಿಂದ ಕೆಲಸದ ನಿಮಿತ್ತ ತೆರಳಿದ್ದನು. ಇಲ್ಲಿಂದ ಹಿಂತಿರುಗಲು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾಗ ಮೂತ್ರ ವಿಸರ್ಜನೆಗೆ ಹೋಗಲು ನಿಲ್ದಾಣದ ಬಳಿ ಇರುವ ಶೌಚಾಲಯಕ್ಕೆ ತೆರಳಿದ್ದಾನೆ.

ಈ ಸುದ್ದಿ ಓದಿದ್ದೀರಾ? : ಚಾಮರಾಜನಗರ | ಹನೂರಿ‌ನ ಆಸ್ಪತ್ರೆಗೆ ಆಂಬ್ಯುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರೈ

ಶೌಚಾಲಯದ ಸಿಬ್ಬಂದಿ 5 ರೂ. ಕೇಳಿದ್ದಾರೆ. ಚಿಲ್ಲರೆ ಇಲ್ಲ ಎನ್ನುವ ಕಾರಣಕ್ಕೆ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದ ಬೆಳಗಾವಿ-ಸಿಕಂದರಾಬಾದ್ ರೈಲಿನ ಒಳಗಿರುವ ಶೌಚಾಲಯಕ್ಕೆ ತೆರಳಿ ಹಿಂತಿರುಗುವಾಗ ರೈಲು ಮುಂದಕ್ಕೆ ಚಲಿಸಿದೆ. ಗಾಬರಿಯಾದ ಯುವಕ ಕೆಳಗಿಳಿಯಲು ಪ್ರಯತ್ನಿಸಿ ನಿಯಂತ್ರಣ ತಪ್ಪಿ ಬಿದಿದ್ದಾನೆ.

ಇನ್ನೇನು ರೈಲು ಚಕ್ರಕ್ಕೆ ಸಿಲುಕುವಷ್ಟರಲ್ಲಿ ಸ್ಥಳದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಸಂತೋಷ್ ರಾಠೋಡ್ ಎಂಬುವವರು ಯುವಕನನ್ನು ಕೈಹಿಡಿದು ಮೇಲಕ್ಕೆತ್ತಿದ್ದಾರೆ. ಇವರಷ್ಟೇ ಅಲ್ಲದೇ ಪಕ್ಕದಲಿದ್ದ ರೈಲ್ವೆ ಪೊಲೀಸ್ ಗುರುರಾಜ್ ಎಂಬುವವರು ಕೂಡ ಸಹಾಯ ಮಾಡಿ, ಯುವಕನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಯುವಕನನ್ನು...

ಚಿತ್ರದುರ್ಗ | ಶೋಷಿತ ಸಮುದಾಯಗಳ ಪ್ರಗತಿಯ ಹರಿಕಾರ ಬಿ ಕೃಷ್ಣಪ್ಪ

ದಲಿತ, ಶೋಷಿತ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಿದ ಪ್ರೊ.ಬಿ ಕೃಷ್ಣಪ್ಪ ಅವರು ಸ್ಮರಣೀಯ...

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...