ವಿಜಯನಗರ | ವರ್ತಕರು ಚೀಟಿ ವ್ಯವಹಾರ ರದ್ದುಪಡಿಸಿ, ರೈತರ ಬೆಳೆಗಳನ್ನು ಟೆಂಡರ್ ಮೂಲಕ ಖರೀದಿಸಲು ಆಗ್ರಹ

Date:

ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಅನ್ನದಾತ ಕಂಗಾಲಾಗಿದ್ದಾನೆ. ಇದರ ಮಧ್ಯೆ ವ್ಯಾಪಾರಿಗಳು ತೂಕದಲ್ಲಿ ರೈತರಿಗೆ ಮೋಸ ಮಾಡಿ ಅನ್ಯಾಯ ಮಾಡುತ್ತಿದ್ದಾರೆ. ಹಾಗಾಗಿ ವರ್ತಕರು ಇನ್ನುಮುಂದೆ ಚೀಟಿ ವ್ಯವಹಾರ ರದ್ದುಪಡಿಸಿ ರೈತರ ಬೆಳೆಗಳನ್ನು ಟೆಂಡರ್‌ ಮೂಲಕ ಖರೀದಿಸಬೇಕು ಎಂದು ರೈತ ಸಂಘ ಆಗ್ರಹಿಸಿ ಇಟಗಿ ಉಪ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.

- Advertisement -

ಸರ್ಕಾರದ ಆದೇಶದಂತೆ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ 1966 ಕಾಯ್ದೆ 80(1)ರನ್ವಯ ಕೃಷಿ ಉತ್ಪನ್ನಗಳಿಗೆ ಯಾವುದೇ ಮಾರುಕಟ್ಟೆಯ ಕಾರ್ಯನಿರ್ವಾಹಕರು ಮತ್ತು ಇತರೆ ವ್ಯಕ್ತಿಗಳು ತೂಕ ಅಥವಾ ಪಾವತಿ ಹಾಗೂ ಇತರೆ ಭತ್ಯೆಗಳಲ್ಲಿ ಯಾವುದೇ ಕಡಿತಗಳನ್ನು ಸ್ವೀಕರಿಸಲು ಹಾಗೂ ಮರುಪಡೆಯಲು ಅನುಮತಿಸುವುದಿಲ್ಲ. ಆದರೆ, ಹೂವಿ‌ನಹಡಗಲಿ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವರ್ತಕರು ರೈತರಿಂದ ಬೆಳೆ ಖರೀದಿಸುವ ಸಂದರ್ಭದಲ್ಲಿ ಕ್ವಿಂಟಲ್‌ಗೆ 3 ಕೆಜಿಯಿಂದ 5 ಕೆಜಿವರೆಗೆ ಧಾನ್ಯಗಳನ್ನು ಕಡಿತ ಮಾಡಿಕೊಳ್ಳುತ್ತಿರುವುದರಿಂದ ರೈತರಿಗೆ ತುಂಬಾ ಅನ್ಯಾಯವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಪ್ರತಿಯೊಂದು ವ್ಯಾಪಾರಿಯ ಹತ್ತಿರ ಅಳತೆ ಮಾಪನ ಸೂಕ್ತವಾಗಿರಬೇಕು. ಬಾಜಿ ದಲ್ಲಾಳಿಗಳಿಗೆ ಕಡಿವಾಣ ಹಾಕಬೇಕು. ತೂಕದಲ್ಲಿ ವ್ಯತ್ಯಾಸ ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಅವರ ಪರವಾನಿಗೆಯನ್ನು ರದ್ದು ಪಡಿಸಲು ಕ್ರಮಕೈಗೊಳ್ಳಬೇಕು ಎಂದು ಸಂಘದ ಮುಖಂಡರು ಆಗ್ರಸಿದರು.

ಇದನ್ನೂ ಓದಿ: ವಿಜಯನಗರ | ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಮಾಡಿ ದೌರ್ಜನ್ಯಕ್ಕೆ ಒಳಗಾಗುವಂತಾಗಿದೆ: ಚಿನ್ನಸ್ವಾಮಿ ಸೋಸಲೆ

“ಈರುಳ್ಳಿ, ರಾಗಿ, ಭತ್ತ, ಹತ್ತಿ, ಶೆಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಮತ್ತು ಜೋಳ ಖರೀದಿ ಕೇಂದ್ರ ಸ್ಥಾಪನೆ ಮಾಡಬೇಕು. ಬೆಂಬಲ ಬೆಲೆ ನಿಗದಿಗೊಳಿಸಬೇಕು. ತಾಲೂಕಿನಲ್ಲಿ ಈ ನಿಯಮಾವಳಿಗಳನ್ನು ರೈತರಿಗೆ ಪೂರಕವಾಗಿ ಜಾರಿಗೊಳಿಸಬೇಕು” ಎಂದು ರೈತ ಸಂಘದ ಅಧ್ಯಕ್ಷ ಸಿದ್ದಪ್ಪ, ಪ್ರಧಾನ ಕಾರ್ಯ ದರ್ಶಿ ಶಿವರಾಜ, ಮಂಜುನಾಥ, ಚನ್ನಬಸಪ್ಪ ಇತರರು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...