ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಹೊಲದಲ್ಲಿ ಸಿಡಿಲು ಬಡಿದು ಇಬ್ಬರು ಮೃತ ಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಬಣಕಾರ ನಾರಪ್ಪ (58) ಹಾಗೂ ಮಗ ಪ್ರಶಾಂತ (38) ಮೃತಪಟ್ಟಿರುವ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಮೃತರು ದಶಮಾಪುರ ಗ್ರಾಮದ ನಿವಾಸಿಗಳು ಎನ್ನಲಾಗಿದೆ.
ಇಂದು ಬೆಳಗ್ಗೆ ಹೊಲಕ್ಕೆ ಹೋದಾಗ ಕೃಷಿ ಕೆಲಸದಲ್ಲಿ ತೊಡಗಿದ್ದರು. ಮಧ್ಯಾಹ್ನ 3 ಗಂಟೆ ಸುಮಾರು ಭರ್ಜರಿ ಮಳೆ ಸುರಿದಿದೆ. ಮಳೆಗೆ ಆಸರೆಯಾಗಿ ಮರದಡಿಯಲ್ಲಿ ನಿಂತಿದ್ದಾಗ ಇಬ್ಬರಿಗೂ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿದ್ದೀರಾ? ಕೆಟ್ಟು ನಿಲ್ಲುತ್ತಿವೆ ‘ಓಲಾ ಇವಿ’; ಓಲಾ ಸಿಇಒ ಅಗರ್ವಾಲ್ ಮತ್ತು ಕುನಾಲ್ ಕಮ್ರಾ ನಡುವೆ ಟ್ವೀಟ್ ವಾರ್
ಹಗರಿ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
