ವಿಜಯನಗರ | ಜಿಂದಾಲ್ ಕಂಪನಿಗೆ ತುಂಗಭದ್ರಾ ಜಲಾಶಯದಿಂದ ನೀರು; ಸರ್ಕಾರದ ವಿರುದ್ಧ ರೈತ ಸಂಘ ಕಿಡಿ

Date:

Advertisements

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿಂದಾಲ್ ಕಂಪನಿಗೆ ತುಂಗಭದ್ರಾ ಜಲಾಶಯದಿಂದ ನೀರು ಹರಿಸುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಪ್ರದರ್ಶನ ನಡೆಸಿದರು.

ಖಾಲಿ ಕೊಡಗಳನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸ್ಥಳೀಯ ಜನರಿಗೆ ಕುಡಿಯಲು ನೀರಿಲ್ಲದ ಸ್ಥಿತಿಯಲ್ಲಿ ಕಂಪನಿಗೆ ನೀರು ಪೂರೈಸುವ ಸರ್ಕಾರದ ಕ್ರಮದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು.

ವಕೀಲ ಪಿ ವೆಂಕಟೇಶ್ ಮಾತನಾಡಿ, “ತುಂಗಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆ ತೀರಾ ಕಡಿಮೆ ಇರುವಾಗ ಜಿಂದಾಲ್‌ಗೆ ನೀರು ಹರಿಸಲು ಸ್ವತಃ ಸರ್ಕಾರವೇ ಆದೇಶ ನೀಡುವುದು ಈ ಭಾಗದ ಜನರಿಗೆ ಮಾಡಿದಂತಹ ಅನ್ಯಾಯ” ಎಂದರು.

Advertisements

ಗಂಟೆ ಗೋಣಿಬಸಪ್ಪ ಮಾತನಾಡಿ, “ರೈತರು, ಜನಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಇನ್ನಷ್ಟು ತೀವ್ರಗೊಳ್ಳುವ ಸ್ಥಿತಿಯಲ್ಲಿ ಸರ್ಕಾರ ಕೈಗೊಂಡಿರುವ ಆಘತಕಾರಿ ನಿರ್ಧಾರ” ಎಂದರು.

ಹಕ್ಕೊತ್ತಾಯ ಪತ್ರ ಸ್ವೀಕರಿಸಿದ ಜಿಲ್ಲಾಧಿಕಾರಿ ಎಂ ಎಸ್ ದಿವಾಕರ್ ಮಾತನಾಡಿ, “ಜಲಾಶಯದಲ್ಲಿ ಕುಡಿಯಲು ಅಗತ್ಯವಾದ ನೀರಿದೆ. ಈ ಬಗ್ಗೆ ಜನರಿಗೆ ಗೊಂದಲ ಬೇಡ. ಆದರೆ ಸರ್ಕಾರಿ ಅಧಿಕಾರಿಯಾಗಿ ಸರ್ಕಾರದ ಆದೇಶಗಳನ್ನು ಪಾಲಿಸಬೇಕಾಗುತ್ತದೆ. ಈಗ ಸಲ್ಲಿಸಿರುವ ಹಕ್ಕೊತ್ತಾಯ ಪತ್ರವನ್ನು ಅರ್ಧ ಗಂಟೆಯೊಳಗೆ ಮುಖ್ಯಮಂತ್ರಿಯವರಿಗೆ ತಲುಪಿಸುವ ಕೆಲಸ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಹಣಗೆರೆಕಟ್ಟೆ ಗ್ರಾಮದಲ್ಲಿ ಗೀತಾ ಶಿವರಾಜಕುಮಾರ್ ಚುನಾವಣೆ ಪ್ರಚಾರ 

ರೈತ ಕನ್ನಡಪರ ಮತ್ತು ಸಂಘಟನೆಗಳ ಮುಖಂಡರುಗಳಾದ ಕೋಸಲ ಪರಸಪ್ಪ, ಗುಂಡಿ ರಮೇಶ್, ಶ್ರೀನಿವಾಸ, ಪಿ ಜಿ ವೆಂಕಟೇಶ, ಕಾಸೆಟ್ಟಿ ಉಮಾಪತಿ, ದಮ್ಮೂರು ಮಹೇಶ್, ಬಸವರಾಜ, ಎಲ್ ಹನುಮಂತಪ್ಪ, ಅಂಜಿನಪ್ಪ, ಎಚ್ ಸೋಮಶೇಖರ, ಪರಶುರಾಮ, ತಂಬ್ರಹಳ್ಳಿ ರವಿ, ಗುಜ್ಜಲ್ ಗಣೇಶ್, ಸೋಮಶೇಖರ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X