ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹೂವಿನಹಡಗಲಿ ತಾಲ್ಲೂಕಿನ ಮಾನ್ಯರಮಸಲವಾಡ ಗ್ರಾಮದಲ್ಲಿ ನಡೆದಿದೆ.
ಕೊರವರ ಹುಲಿಗೆಮ್ಮ (54) ಮೃತರು. ಕಳೆದ ವಾರ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿದ್ದ ಅವರಿಗೆ ವಾಂತಿಭೇದಿ ಕಾಣಿಸಿಕೊಂಡಿತ್ತು. ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ, ಹೂವಿನಹಡಗಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಹುಲಿಗೆಮ್ಮ ಗುಣಮುಖರಾಗಿದ್ದರು.
ಭಾನುವಾರ ಮತ್ತೆ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಗದಗ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರಿಗೆ ಪಾರ್ಶ್ವವಾಯು ಉಂಟಾಗಿ ಸೋಮವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಬೀದರ್ | ಸರ್ಕಾರಿ ಶಾಲೆ ಉಳಿವಿಗಾಗಿ ದುಂಡು ಮೇಜಿನ ಸಭೆ : ಚಳವಳಿಗೆ ಸಿದ್ಧತೆ