ತುಂಗಭದ್ರಾ ಕಾಲುವೆಯಲ್ಲಿ ಜಾರಿ ಬಿದ್ದು ಮಹಿಳೆ ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆ ತಾಲೂಕಿನ ಸಂಡೂರು ರಸ್ತೆಯಲ್ಲಿ ಬರುವ ಹೆಚ್‌ಎಲ್‌ಸಿ ಕಾಲುವೆ ನೀರಿನಲ್ಲಿ ತೇಲಿ ಬರುತ್ತಿದ್ದ ಮಹಿಳೆಯನ್ನು ಸ್ಥಳೀಯರು ದಡಕ್ಕೆ ಎಳೆದುತಂದಿದ್ದಾರೆ. ದಡಕ್ಕೆ ಬರುವಷ್ಟರಲ್ಲಿ ಮಹಿಳೆ ಮೃತಪಟ್ಟಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಮಹಿಳೆಯ ಗುರುತು ಪತ್ತೆ ಮಾಡಿದ್ದಾರೆ. ಮೃತ ಮಹಿಳೆಯನ್ನು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕೃಷ್ಣಾ ನಗರದ ನಿವಾಸಿ ಗೀತಾ ಎಂದು ಗುರುತಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಜಿಂಕೆ ಬೇಟೆ; ಆರು ಮಂದಿ ಎನ್‌ಜಿಒ ಸದಸ್ಯರ ಬಂಧನ
ಮಹಿಳೆಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಹೊಸಪೇಟೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.