ಸಿಎಂ ಕಾರ್ಯಕ್ರಮದಲ್ಲಿ ಹಂಪಿ ದೇಗುಲದ ಕಂಬಕ್ಕೆ ಮೊಳೆ ಹೊಡೆದ ಅಧಿಕಾರಿಗಳು: ನೋಟಿಸ್ ಜಾರಿ

Date:

ಹಂಪಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕಾಗಿ ವಿಶ್ವಪ್ರಸಿದ್ಧ ಹಂಪಿ ವಿರೂಪಾಕ್ಷ ದೇವಾಲಯದ ಕಂಬಗಳಿಗೆ ಅಧಿಕಾರಿಗಳು ಮೊಳೆ ಹೊಡೆದಿದ್ದರು ಎಂದು ವರದಿಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ಕರ್ನಾಟಕ ಸರ್ಕಾರದ ದತ್ತಿ ಇಲಾಖೆಗೆ ನೋಟಿಸ್ ನೀಡಿದೆ.

- Advertisement -

ಹಂಪಿ ವಿರೂಪಾಕ್ಷೇಶ್ವರ ದೇವಾಲಯದ ಕಂಬಗಳಿಗೆ ಮೊಳೆ ಹೊಡೆಯಲಾಗಿರುವ ಫೋಟೊಗಳು ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಈ ಬೆನ್ನಲ್ಲೇ ಎಎಸ್‌ಐ ನೋಟಿಸ್ ಜಾರಿಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕನ್ನಡ ಜ್ಯೋತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಹಂಪಿಗೆ ತೆರಳಿದ್ದರು. ಇದೇ ವೇಳೆ ಧ್ವಜ ಕಟ್ಟಲು ವಿರೂಪಾಕ್ಷ ದೇವಾಲಯದ ಕಂಬಗಳನ್ನು ಡ್ರಿಲ್‌ನಿಂದ ಕೊರೆದು ದತ್ತಿ ಇಲಾಖೆಯಿಂದಲೇ ಮೊಳೆ ಹೊಡೆಸಲಾಗಿತ್ತು. ಆದರೆ, ಹಂಪಿಯು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿರುವ ಕಾರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಭಾರತೀಯ ಪುರಾತತ್ವ ಇಲಾಖೆಯು ದತ್ತಿ ಇಲಾಖೆಗೆ ನೋಟಿಸ್‌ ಜಾರಿಗೊಳಿಸಿದೆ.

“ದೇವಾಲಯದ ಉತ್ತರ ದಿಕ್ಕಿನಲ್ಲಿ ಗೇಟ್‌ ಕೂರಿಸಲು, ಭಕ್ತರು ಸಾಲಿನಲ್ಲಿ ಹೋಗಲು ತಂತಿ ಬೇಲಿ ನಿರ್ಮಿಸಬೇಕೆಂದು ದತ್ತಿ ಇಲಾಖೆಯಿಂದ ಮೊಳೆ ಹೊಡೆಯಲಾಗಿದೆ ಎಂದು ತಿಳಿದುಬಂದಿದೆ. ಮೊಳೆ ಹೊಡೆಯುವ ಮುನ್ನ ದತ್ತಿ ಇಲಾಖೆಯು ಪುರಾತತ್ವ ಇಲಾಖೆಯ ಅನುಮತಿ ಪಡೆದಿಲ್ಲ, ಮಾಹಿತಿಯನ್ನೂ ನೀಡಿಲ್ಲ. ಹಾಗಾಗಿ, ಹಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದತ್ತಿ ಇಲಾಖೆಯ ಅಧಿಕಾರಿಯನ್ನು ಕರೆಸಿ ನೋಟಿಸ್ ಜಾರಿಗೊಳಿಸಲಾಗಿದೆ” ಎಂದು ಎಎಸ್‌ಐ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯರಗೋಳ್ ಅಣೆಕಟ್ಟು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಹಂಪಿ ದೇವಾಲಯದ ಕಂಬವನ್ನು ವಿರೂಪಗೊಳಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ದೇವಾಲಯದ ಕಂಬಗಳಿಗೆ ಹಾನಿ ಮಾಡಿರುವ ಫೋಟೊಗಳನ್ನು ದಾಖಲೆಯಾಗಿ ಪರಿಗಣಿಸಲಾಗಿದೆ. ಹಂಪಿಯು 1986ರಲ್ಲಿಯೇ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ್ದು, ಮಾನ್ಯತೆ ಪಡೆದಿದೆ. ಇದಕ್ಕೆ ಹಾನಿ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಅಧಿಕಾರಿಗಳು ಸ್ಪಷ್ಟನೆ ನೀಡಬೇಕು” ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...