ಕೈಕೊಟ್ಟ ಮುಂಗಾರು: ಬಾಡಿತು ರೈತರ ಬದುಕು

Date:

ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ಕೈ ಸುಟ್ಟಿಕೊಂಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ತುರ್ತು ನೀರಾವರಿ ಸೌಲಭ್ಯಗಳನ್ನು ಹೆಚ್ಚಿಸುವುದು, ಬರಗಾಲ ನಿರ್ವಹಣಾ ನಿಧಿಯನ್ನು ಸಕಾಲದಲ್ಲಿ ಬಳಸುವುದು ಮತ್ತು ರೈತರಿಗೆ ಸೂಕ್ತ ಪರಿಹಾರ ಘೋಷಿಸುವುದು ಅಗತ್ಯವಾಗಿದೆ.

ರಾಜ್ಯದಲ್ಲಿ‌ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣ ತಲುಪದೇ ಇರುವುದುದು ರೈತರಿಗೆ ನಿರಾಶೆ ತರಿಸಿದೆ. ಅದರಲ್ಲೂ ದಕ್ಷಿಣ ಭಾಗದಲ್ಲಿ‌ ಆಗಾಗ ಮಳೆಯಾಗುತ್ತಿದ್ದರೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಕೊರತೆ ಎದುರಾಗಿದ್ದು, ಅನ್ನದಾತರನ್ನು ಆತಂಕಕ್ಕೀಡು ಮಾಡಿದೆ.

- Advertisement -

ವಿಜಯನಗರ ಜಿಲ್ಲೆಯಲ್ಲೂ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಸಕಾಲಕ್ಕೆ ಮಳೆಯಾಗಿದ್ದರೆ ಇಷ್ಟೊತ್ತಿಗೆ ತುಂಗಭದ್ರಾ ಡ್ಯಾಂ ಭರ್ತಿಯಾಗಬೇಕಿತ್ತು. ಆದರೆ ಮಳೆ ಕೊರತೆಯಿಂದ ಡ್ಯಾಂನಲ್ಲಿ ನೀರು ಸಂಗ್ರಹವಾಗಿಲ್ಲ. ಇತ್ತ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಮಳೆಯನ್ನೇ ನಂಬಿದ್ದ ಕೃಷಿಕರು ಚಿಂತೆಗೀಡಾಗಿದ್ದು, ಮಳೆ ಯಾವಾಗ ಬರುತ್ತದೆ ಎಂದು ಆಗಸದತ್ತ ಮುಖ ಮಾಡಿ ಕೂರುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲೇ 8 ಲಕ್ಷದ 48 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಬಹುತೇಕ ರೈತರು ಮೆಕ್ಕೆಜೋಳವನ್ನೇ ಬಿತ್ತನೆ ಮಾಡಿದ್ದಾರೆ. ಇನ್ನೂ ಅನೇಕ ರೈತರ ಬಿತ್ತನೆ ಮಾಡಲು ಬೀಜ, ಗೊಬ್ಬರ ತಂದಿಟ್ಟು ಮಳೆಗಾಗಿ ಕಾಯುವಂತಾಗಿದೆ. ಈಗಾಗಲೇ ಬಿತ್ತಿದ ಬೆಳೆಗಳು ಮಳೆಯಾಗದೇ ಒಣಗಿ ಹೋಗಿವೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬಿತ್ತಿದ ಬೆಳೆಗಳೆಲ್ಲ ಸುಟ್ಟು ಹೋಗಿದ್ದು, ರೈತರ ಬದುಕು ದುಸ್ತರವಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಗರಿಬೊಮ್ಮನಹಳ್ಳಿ ರೈತರ ಸಂಘದ ತಾಲೂಕು ಅಧ್ಯಕ್ಷ ಬಸನಗೌಡ ಅವರು, “ಈಗಾಗಲೇ ರೈತರು ಬಿತ್ತಿದ ಬೆಳೆಗಳೆಲ್ಲ ಒಣಗಿಹೋಗಿವೆ. ಕೂಡಲೇ ತಾಲೂಕನ್ನು ಬರಪೀಡಿತವೆಂದು ಘೋಷಿಸಿ, ರೈತರ ಬೆಳೆಹಾನಿ ಸಮೀಕ್ಷೆ ಮಾಡಿ ಅವರಿಗೆ ಪರಿಹಾರ ಕೊಡಬೇಕು. ಇನ್ನೊಂದು ವಾರದಲ್ಲಿ ಈ ತಾಲೂಕನ್ನು ಬರಪೀಡಿತವೆಂದು ಘೋಷಣೆ ಮಾಡದಿದ್ದರೆ ದೊಡ್ಡ ಮಟ್ಟದ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ ಹಗರಿಬೊಮ್ಮನಹಳ್ಳಿ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್ ಬಿ ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದು, “ಸಕಾಲಕ್ಕೆ ಮಳೆಯಾಗದೇ ರೈತರ ಬೆಳೆಗಳೆಲ್ಲವೂ ಹಾಳಾಗಿವೆ. ಇನ್ನು ಎರಡ್ಮೂರು ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ, ಪರಿಸ್ಥಿತಿ ನೋಡಿಕೊಂಡು ರೈತರಿಗೆ ಅನುಕೂಲವಾಗುವಂತಹ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ, ಬಿತ್ತನೆಬೀಜ, ಗೊಬ್ಬರ ತಂದಿಟ್ಟುಕೊಂಡು ಬಿತ್ತನೆಗೆ ಕಾಯುತ್ತಿರುವ ರೈತರು ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಮಾಡಬೇಕು. ಅವಸರದಲ್ಲಿ ಬಿತ್ತನೆ ಮಾಡಿ ತೊಂದರೆ ಅನುಭವಿಸುವುದು ಬೇಡ” ಎಂದು ರೈತರಲ್ಲಿ ಮನವಿ ಮಾಡಿದರು.

ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ಕೈ ಸುಟ್ಟಿಕೊಂಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ತುರ್ತು ನೀರಾವರಿ ಸೌಲಭ್ಯಗಳನ್ನು ಹೆಚ್ಚಿಸುವುದು, ಬರಗಾಲ ನಿರ್ವಹಣಾ ನಿಧಿಯನ್ನು ಸಕಾಲದಲ್ಲಿ ಬಳಸುವುದು ಮತ್ತು ರೈತರಿಗೆ ಸೂಕ್ತ ಪರಿಹಾರ ಘೋಷಿಸುವುದು ಅಗತ್ಯವಾಗಿದೆ. ಜತೆಗೆ, ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದೀರ್ಘಕಾಲಿಕ ಯೋಜನೆಗಳಾದ ಜಲಸಂರಕ್ಷಣೆ, ಮಳೆನೀರು ಸಂಗ್ರಹಣೆ ಮತ್ತು ಬೆಳೆ ವಿಮೆಯ ಸುಧಾರಣೆಗಳನ್ನು ತೀವ್ರಗತಿಯಲ್ಲಿ ಜಾರಿಗೊಳಿಸಬೇಕು.

ಇದನ್ನೂ ಓದಿದ್ದೀರಾ? ಮಳೆ-ಬೆಳೆಯ ಭವಿಷ್ಯ ಹೇಳುವ ಕಾರಹುಣ್ಣಿಮೆ: ಬೇಸಾಯ ಬದುಕಿನ ಅಪರೂಪದ ಹಬ್ಬ

ರೈತರು ದೇಶದ ಬೆನ್ನೆಲುಬು. ಅವರ ಆತಂಕವನ್ನು ನಿವಾರಿಸದಿದ್ದರೆ ರಾಜ್ಯದ ಕೃಷಿ ಉತ್ಪಾದನೆಯ ಮೇಲೆ ದೊಡ್ಡ ಪ್ರಭಾವ ಬೀಳುವುದು ಖಚಿತ. ಆದ್ದರಿಂದ ಎಲ್ಲ ಹಂತಗಳಲ್ಲೂ ತ್ವರಿತ ಮತ್ತು ಸಮರ್ಥನೀಯ ಕ್ರಮಗಳು ಅನಿವಾರ್ಯವಾಗಿವೆ.

WhatsApp Image 2026 04 20 at 18.37.37 e1776691850820
ವಿಜಯಕುಮಾರ್ ಎಂ
+ posts

ವಿಜಯನಗರ ಕೋಆರ್ಡಿನೇಟರ್‌

ಪೋಸ್ಟ್ ಹಂಚಿಕೊಳ್ಳಿ:

ವಿಜಯಕುಮಾರ್ ಎಂ
ವಿಜಯಕುಮಾರ್ ಎಂ
ವಿಜಯನಗರ ಕೋಆರ್ಡಿನೇಟರ್‌

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...