ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಶೀಘ್ರದಲ್ಲಿಯೇ ಮೋಡ ಬಿತ್ತನೆ ಕಾರ್ಯ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜೆ ಕಾರ್ತಿಕ್ ಬಣದಿಂದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
“ಪ್ರಸ್ತುತ ವರ್ಷದಲ್ಲಿ ಮಳೆ ಕೊರತೆಯಾಗಿ ಬೆಳೆಗಳು ಒಣಗಿ ಹೋಗುತ್ತಿವೆ. ಅಂತರ್ಜಲ ಪ್ರಮಾಣವೂ ಕುಸಿತವಾಗಿದೆ. ಎಲ್ಲೆಲ್ಲೂ ಬರದ ಛಾಯೆ ಆವರಿಸಿದ್ದು, ರೈತರ ಬೆಳೆಗಳು ಹಾಗೂ ಸಾರ್ವಜನಿಕರಿಗೂ ಕುಡಿಯುವ ನೀರಿಲ್ಲದೆ ಹಾಹಾಕಾರ ತಲೆದೂರುವ ಪರಿಸ್ಥಿತಿ ಉದ್ಭವವಾಗಿದೆ. ಹಾಗಾಗಿ ಸರ್ಕಾರವು ಕೂಡಲೇ ಎಚ್ಚೆತ್ತುಕೊಂಡು ಆದಷ್ಟು ಬೇಗನೆ ಮೋಡ ಬಿತ್ತನೆ ಮಾಡಬೇಕು” ಎಂದು ಆಗ್ರಹಿಸಿದರು.
“ಈ ಮೂಲಕ ರೈತರ ಬೆಳೆಗಳಿಗೆ ನೀರು ಹಾಗೂ ಸಾರ್ವಜನಿಕರಿಗೆ ಕುಡಿಯಲು ನೀರು, ಒದಗಿಸುವಂತಹ ಗುರುತರವಾದ ಜವಾಬ್ದಾರಿ ಸರ್ಕಾರದ ಮೇಲಿದೆ. ಆದಷ್ಟು ಬೇಗನೆ ಸರ್ಕಾರವು ಮೋಡ ಬಿತ್ತನೆ ಮಾಡುವ ಮೂಲಕ ರೈತರು ಬೆಳೆದ ಬೆಳೆಗೆ ಹಾಗೂ ಸಾರ್ವಜನಿಕರಿಗೆ ಕುಡಿಯಲು ನೀರು ಒದಗಿಸಲು ಸಹಾಯ ಮಾಡಬೇಕು ಅಂತಾ ರೈತ ಸಂಘ ಆಗ್ರಹಿಸಿದೆ.
ಈ ಸುದ್ದಿ ಓದಿದ್ದೀರಾ? ಮಳೆ ಅಬ್ಬರ: ಬೆಳಗಾವಿ ಖಾನಾಪುರ ಶಾಲೆಗಳಿಗೆ ರಜೆ, ಎಂಟು ಸೇತುವೆಗಳು ಜಲಾವೃತ
“ಈ ವೇಳೆ ವಿಜಯನಗರ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಉಮಾದೇವಿ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್, ಜಿಲ್ಲಾ ಕಾರ್ಯದರ್ಶಿ ರುದ್ರಪ್ಪ, ಹೊಸಪೇಟೆ ತಾಲೂಕು ಅಧ್ಯಕ್ಷ ಮಹಾಂತೇಶ್, ಪ್ರಧಾನ ಕಾರ್ಯದರ್ಶಿ ಎ ಎಂ ಬಸವರಾಜ್, ನಗರ ಘಟಕದ ಅಧ್ಯಕ್ಷ ಹನುಮಂತಪ್ಪ, ಸಹ ಕಾರ್ಯದರ್ಶಿ ಮಲ್ಲಪ್ಪ, ಭಾಷಾ ಓಬಳೇಶ್, ನಿಖಿಲೇಶ್, ತಾಲೂಕು ಉಪಾಧ್ಯಕ್ಷ ನಾಗರಾಜ್ ಎಚ್ ಸೇರಿದಂತೆ ಸಂಘದ ಸರ್ವ ಪದಾಧಿಕಾರಿಗಳು, ಸದಸ್ಯರು, ರೈತ ಬಾಂಧವರು ಇದ್ದರು.




