ಹೂವಿನಹಡಗಲಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ರೈತ ಸಂಘ ಒತ್ತಾಯ

Date:

ಮುಂಗಾರು ಸಂಪೂರ್ಣ ಕೈಕೊಟ್ಟಿದ್ದು, ಅಲ್ಪ ಸ್ವಲ್ಪ ಮಳೆಗೆ ರೈತರು‌ ಬಿತ್ತನೆ ಮಾಡಿದ್ದ ಬೆಳೆ ಕೈಗೆ ಬರದಂತಾಗಿದೆ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರೈತ ಸಂಘದ ಕಾರ್ಯಕರ್ತರು ಜಿಲ್ಲೆಯ ಹೂವಿನಹಡಗಲಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಮುಖಂಡ ಗಂಟಿ ಸೋಮಶೇಖರ್ ಮಾತನಾಡಿ, “ಇಡೀ ರಾಜ್ಯಾದ್ಯಂತ ಮುಂಗಾರು ಸಂಪೂರ್ಣ ಕೈಕೊಟ್ಟಿದ್ದು, ಬರಗಾಲ ಉಂಟಾಗಿದೆ. ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕು. ರೈತರ ಸಂಪೂರ್ಣ ಸಾಲವನ್ನು ಮನ್ನ ಮಾಡಿ, ಹೊಸ ಸಾಲ ನೀಡಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸರ್ಕಾರಿ ಸಹಕಾರಿ ಬ್ಯಾಂಕಿನಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷದವರೆಗೆ ಸಾಲ ಕೊಡುತ್ತೇವೆಂದು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದೀರಿ. ಆದರೆ, ಇಡೀ ರಾಜ್ಯಾದ್ಯಂತ ಸಹಕಾರಿ ಬ್ಯಾಂಕ್‌ಗಳಲ್ಲಿ 5 ಲಕ್ಷದವರೆಗೆ ಸಾಲ ನೀಡುತ್ತಿಲ್ಲ. ಇದು ಕೇವಲ ವಿಧಾನಸೌದದಲ್ಲಿ ಕಡತಕ್ಕೆ ಮಾತ್ರ ಸೀಮಿತವಾಗಿದೆ. ಸರ್ಕಾರ ರೈತರಿಗೆ ಸರಿಯಾಗಿ ನಡೆದುಕೊಳ್ಳುತ್ತಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರೈತ ಸಂಘ ಆಗ್ರಹ

“ಸರ್ಕಾರದ ಧೋರಣೆಯನ್ನು ಖಂಡಿಸಿ ಸೆಪ್ಟಂಬರ್‌ 5ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕಚೇರಿಗಳ ಮುಂದೆ ಧರಣಿ ಸತ್ಯಾಗ್ರಹ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ರಾಜ್ಯ ರೈತ ಸಂಘ ಮಹಿಳಾ ಜಿಲ್ಲಾಧ್ಯಕ್ಷೆ ಯಶೋಧಾ ಎಸ್, ಹುಲಿಗೆಮ್ಮ, ಶಿಲ್ಪಾ, ಸವಿತಾ, ಆಂಜನಪ್ಪ ಸೇರಿದಂತೆ ಇತರರು ಹಾಜರಿದ್ದರು .

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ರೈತ ವಿರೋಧಿ ಕೇಂದ್ರ ಬಜೆಟ್ ಖಂಡಿಸಿ ರೈತ ಸಂಘ ಪ್ರತಿಭಟನೆ

ರೈತ ವಿರೋಧಿ ಕೇಂದ್ರ ಬಜೆಟ್ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ...

ವಿಜಯನಗರ | ಹಂಪಿ‌ ವಿರೂಪಾಕ್ಷ ದೇವಸ್ಥಾನದಲ್ಲಿ ತುಂಡುಡುಗೆ ನಿಷೇಧ; ಭಕ್ತಿ ಭಾವ ಮೂಡಿಸಲು ಈ ಕ್ರಮ ಎಂದ ಜಿಲ್ಲಾಧಿಕಾರಿ!

ವಿಜಯನಗರ ಜಿಲ್ಲೆಯ ಹಂಪಿ‌ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದ್ದು, ವಿರೂಪಾಕ್ಷನ...

ಬಳ್ಳಾರಿ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಟಿಕೆಟ್‌ಗೆ ಪೈಪೋಟಿ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ವಿಜಯನಗರ | ತಗಡಿನ ಶೆಡ್‌ನಲ್ಲಿ ಮಕ್ಕಳಿಗೆ ಪಾಠ; ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದಲ್ಲಿ ಮೊರಾರ್ಜಿ ದೇಸಾಯಿ...